Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಬಿಎಂಪಿ ಚುನಾವಣೆ: ಇವರಿಗೆ ಮಾತ್ರ ಬಿಜೆಪಿ ಟಿಕೆಟ್!
    ಸುದ್ದಿ

    ಬಿಬಿಎಂಪಿ ಚುನಾವಣೆ: ಇವರಿಗೆ ಮಾತ್ರ ಬಿಜೆಪಿ ಟಿಕೆಟ್!

    vartha chakraBy vartha chakraJune 6, 2022Updated:June 6, 2022No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜೂ6- ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲುವ ಮೂಲಕ ಮತ್ತೆ ಅಧಿಕಾರ ಚುಕ್ಕಾಣಿ ಹಿಡಿಯಬೇಕೆಂದು ಕಾರ್ಯತಂತ್ರ ರೂಪಿಸುತ್ತಿರುವ ಬಿಜೆಪಿ ಇದಕ್ಕೂ ಮೊದಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಗೆದ್ದು ಅಧಿಕಾರ ಹಿಡಿಯಲೇಬೇಕೆಂದು ಪಣ ತೊಟ್ಟಿದೆ.
    ಇದಕ್ಕಾಗಿ ಇದೇ‌ ಮೊದಲ ಬಾರಿಗೆ ರಾಜ್ಯದಲ್ಲಿ ಬಿಜೆಪಿ ಅಭ್ಯರ್ಥಿಗಳ ಆಯ್ಕೆಯಲ್ಲಿ ಅಮೂಲಾಗ್ರ ಬದಲಾವಣೆ ತರಲು ಮುಂದಾಗಿದೆ. ಬಿಬಿಎಂಪಿ ಚುನಾವಣೆಗೆ ಪಕ್ಷ ರೂಪಿಸುವ ಈ ಬದಲಾವಣೆಯ ಕಾರ್ಯತಂತ್ರ ವಿಧಾನಸಭೆ ಚುನಾವಣೆಗೂ ಅಳವಡಿಕೆಯಾಗುವ ಸಾಧ್ಯತೆಯಿದೆ.ಆದರೆ, ಇದು ಬಿಬಿಎಂಪಿ ಚುನಾವಣೆಯ ಫಲಿತಾಂಶವನ್ನು ಅವಲಂಬಿಸಿರಲಿದೆ.
    ಈಗಾಗಲೇ ಗುಜರಾತ್ ಉತ್ತರ ಪ್ರದೇಶ, ಉತ್ತರಾಖಂಡ, ದೆಹಲಿ ಮಹಾನಗರ ಪಾಲಿಕೆಯಲ್ಲಿ ಈ ತಂತ್ರ ರೂಪಿಸಿ ಯಶಸ್ಸು ಗಳಿಸಲಾಗಿದೆ ಇದನ್ನೇ ಮಾನದಂಡವಾಗಿ ಬೆಂಗಳೂರು ಪಾಲಿಕೆಯಲ್ಲೂ ಪ್ರಯೋಗಿಸಲು ಚಿಂತನೆ ನಡೆಸಲಾಗಿದೆ.
    ಪಾಲಿಕೆ ಚುನಾವಣೆ ಸಂಬಂಧ ಇತ್ತೀಚೆಗೆ ನಡೆದ ಪ್ರಮುಖರ ಸಭೆಯಲ್ಲಿ ಪಾಲ್ಗೊಂಡಿದ್ದ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಮತ್ತು ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣ್ ಕುಮಾರ್ ಸಭೆಗೆ ಕಾರ್ಯತಂತ್ರವನ್ನು ವಿವರಿಸಿ ಇದರ ಆಧಾರದಮೇಲೆ ಚುನಾವಣೆ ಪ್ರಕ್ರಿಯೆ ನಡೆಸುವಂತೆ ಸಲಹೆ ಮಾಡಿದ್ದಾರೆ.
    ಇವರು ನೀಡಿರುವ ಪಕ್ಷದ ಕಾರ್ಯತಂತ್ರದ ಪ್ರಕಾರ ಈಗಾಗಲೇ ಮೇಯರ್, ಉಪಮೇಯರ್,ಹುದ್ದೆ ಅಲಂಕರಿಸಿದವರು,ಸತತ ಮೂರು ಬಾರಿ ಗೆದ್ದವರು, ಸ್ಥಾಯಿ ಸಮಿತಿ ಅಧ್ಯಕ್ಷರಾದವರು ಹಾಗೂ ಪದೇ ಪದೇ ಅಕಾರ ಅನುಭವಿಸಿದವರಿಗೆ ಗೇಟ್ ಪಾಸ್ ನೀಡಲಾಗುವುದು. ಇಂತಹವರಿಗೆ ಯಾವುದೇ ಕಾರಣಕ್ಕೂ ಬಿಬಿಎಂಪಿ ಗೆ ಸ್ಪರ್ಧಿಸಲು ಅವಕಾಶವಿಲ್ಲ.ಬದಲಿಗೆ ಇವರನ್ನು ವಿಧಾನಸಭೆ, ಪರಿಷತ್, ಲೋಕಸಭೆ ಮೊದಲಾದ ಚುನಾವಣೆಗೆ ಸ್ಪರ್ಧಿಸುವ ವೇಳೆ ಪರಿಗಣಿಸಬೇಕು.
    ಪಕ್ಷಕ್ಕೆ ದುಡಿದವರು, ಯುವ ಮುಖಗಳು, ಮತದಾರರ ಜೊತೆ ಉತ್ತಮ ಸಂಪರ್ಕ ಹೊಂದಿದವರು, ಸಚ್ಚಾರಿತ್ರತೆ, ಉತ್ತಮ ಶಿಕ್ಷಣ, ಸಾಮಾಜಿಕ ಹಿನ್ನೆಲೆ, ಬದ್ದತೆ, ಆರ್‍ಎಸ್‍ಎಸ್ ಮತ್ತು ಸಂಘ ಪರಿವಾರದ ಹಿನ್ನೆಲೆ ಸೇರಿದಂತೆ ಉತ್ತಮರನ್ನೇ ಅಭ್ಯರ್ಥಿಗಳನ್ನಾಗಿ ಮಾಡಬೇಕು ಎಂದು ಸೂಚಿಸಿದ್ದಾರೆ.
    ಪ್ರತಿ ಚುನಾವಣೆಯಲ್ಲಿ ಹಣವಂತರು, ರಿಯಲ್ ಎಸ್ಟೇಟ್ ವ್ಯವಹಾರ ನಡೆಸುವವರು, ಸಚಿವರು ಇಲ್ಲವೇ ಶಾಸಕರ ಹಿಂಬಾಲಕರು, ಪ್ರಭಾವಿಗಳೇ ಕಣಕ್ಕಿಳಿದು ಗೆದ್ದು ಬರುತ್ತಿದ್ದರು. ಇದರಿಂದಾಗಿ ಮೂಲ ಕಾರ್ಯಕರ್ತರ ಅಸಮಾಧಾನ ಸರ್ವೇ ಸಾಮಾನ್ಯವಾಗಿತ್ತು.
    ಜೊತೆಗೆ ಸಿಂಡಿಕೇಟ್ ರಚಿಸಿಕೊಂಡಿರುವ ಬೆಂಗಳೂರು ಪ್ರತಿನಿಸುವ ಹಲವಾರು ಸಚಿವರು ಮತ್ತು ಶಾಸಕರು ಪ್ರತಿ ಚುನಾವಣೆಯಲ್ಲಿ ತಮ್ಮ ಹಿಂಬಾಲಕರಿಗೆ ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ವಾರ್ಡ್‍ಗಳಿಗೆ ಟಿಕೆಟ್ ನೀಡಬೇಕೆಂಬ ಬೇಡಿಕೆ ಇಡುತ್ತಿದ್ದರು.
    ಬೆಂಗಳೂರು ಪ್ರತಿನಿಸುವ ಯಾವುದೇ ಸಚಿವರ ಲಾಬಿ, ಒತ್ತಡಗಳಿಗೆ ಮಣೆಯದೆ ಪಕ್ಷದಲ್ಲಿ ಸಕ್ರಿಯವಾಗಿರುವವರಿಗೆ ಟಿಕೆಟ್ ಕೊಡಬೇಕು, ಹಿಂಬಾಲಕರು, ಕುಟುಂಬದ ಸದಸ್ಯರಿಗೆ ಆದ್ಯತೆ ನೀಡಲೇ ಬಾರದು ಎಂಬ ಸಲಹೆ ನೀಡಿದ್ದಾರೆ ಎನ್ನಲಾಗಿದೆ.
    ಈ ಬಾರಿಯ ಚುನಾವಣೆಯಲ್ಲಿ ಪಕ್ಷ ನಿಷ್ಠರು, ವಿದ್ಯಾವಂತರು, ಸಮಾಜ, ರಾಜ್ಯ, ದೇಶದ ಬಗ್ಗೆ ಕಳಕಳಿ ಹೊಂದಿರುವವರು, ಎಲ್ಲಕ್ಕಿಂತ ಹೆಚ್ಚಾಗಿ ಯಾವುದೇ ಆರೋಪ ಹೊಂದಿರದವರನ್ನು ಕಣಕ್ಕಿಳಿಸುವ ಬಗ್ಗೆ ಚಿಂತನೆ ನಡೆಸಿದೆ ಎಂದು ಈ ಇಬ್ಬರೂ ನಾಯಕರು ಸಭೆಗೆ ತಿಳಿಸಿದರೆಂದು ಗೊತ್ತಾಗಿದೆ.
    ಇವರ ಈ ಸಲಹೆಯ ನಂತರ ಇತ್ತೀಚೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪಕ್ಷದ ಕಚೇರಿಯಲ್ಲಿ ಬೆಂಗಳೂರು ಪ್ರತಿನಿಸುವ ಸಚಿವರು, ಶಾಸಕರು ಹಾಗೂ ಪಕ್ಷದ ಪ್ರಮುಖರ ಜೊತೆ ನಡೆಸಿದ ಸಭೆಯಲ್ಲಿ ಹಳೆ ಮುಖಗಳ ಬದಲಿಗೆ ಹೊಸಬರನ್ನೇ ಆಯ್ಕೆ ಮಾಡಲಾಗುವುದು ಎಂಬ ನಿರ್ಧಾರಕ್ಕೆ ಬರಲಾಯಿತೆಂದು ಮೂಲಗಳು ತಿಳಿಸಿವೆ.
    ತಮ್ಮ ಹಿಂಬಾಲಕರಿಗೆ ಇಲ್ಲವೇ ಕುಟುಂಬದ ಸದಸ್ಯರಿಗೆ ಟಿಕೆಟ್ ನೀಡುವಂತೆ ಪಕ್ಷದ ರಾಜ್ಯಾಧ್ಯಕ್ಷರು ಸೇರಿದಂತೆ ಯಾರೊಬ್ಬರ ಮೇಲೆ ಪ್ರಭಾವ ಬೀರುವುದಾಗಲಿ ಇಲ್ಲವೇ ಒತ್ತಡ ಹಾಕದಂತೆಯೂ ಪಕ್ಷ ಸಚಿವರು ಮತ್ತು ಶಾಸಕರಿಗೆ ಈಗಾಗಲೇ ಮೌಖಿಕವಾಗಿ ಸೂಚನೆ ಕೊಟ್ಟಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
    ಈ ಎಲ್ಲಾ ಬೆಳವಣಿಗೆಗಳಿಂದಾಗಿ ಬಿಜೆಪಿ
    ಈಗಾಗಲೇ ಪಾಲಿಕೆಯಲ್ಲಿ ಒಂದು ಬಾರಿ ಮೇಯರ್, ಉಪಮೇಯರ್, ವಿವಿಧ ಸ್ಥಾಯಿ ಸಮಿತಿ ಅಧ್ಯಕ್ಷರು, ಪ್ರತ್ಯಕ್ಷವಾಗಿ, ಪರೋಕ್ಷವಾಗಿ ಅಕಾರವನ್ನು ಅನುಭವಿಸಿದವರಿಗೆ ಪಕ್ಷದ ಸಂಘಟನೆಗೆ ನಿಯೋಜಿಸುವ ಸಾಧ್ಯತೆ ಇದೆ. ಒಂದು ಮೂಲದ ಪ್ರಕಾರ ಕಳೆದ ಚುನಾವಣೆಯಲ್ಲಿ ಗೆದ್ದಿದ್ದ ಸುಮಾರು 50ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ಟಿಕೆಟ್ ಕೈ ತಪ್ಪುವ ಸಾಧ್ಯತೆ ನಿಚ್ಚಳವಾಗಿದೆ. ಈ ಬಾರಿ ಯಾವುದೇ ಒತ್ತಡ, ಪ್ರಭಾವಿಗಳಿಗೆ ಮಣೆ ಹಾಕದೆ ಪಕ್ಷಕ್ಕೆ ಅವರು ಸಲ್ಲಿಸಿರುವ ಸೇವೆಯನ್ನೇ ಮಾನದಂಡವಾಗಿಟ್ಟುಕೊಂಡು ಟಿಕೆಟ್ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

    Verbattle
    Verbattle
    Verbattle
    BBMP election Government News
    Share. Facebook Twitter Pinterest LinkedIn Tumblr Email WhatsApp
    Previous Articleಈ ವರ್ಷದಿಂದಲೇ ಪೂರ್ವ ಪ್ರಾಥಮಿಕ ತರಗತಿಗಳಿಗೆ NEP ಅನುಷ್ಠಾನ
    Next Article ತತ್ತರಿಸಿದ ಬಿಜೆಪಿ.
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    January 22, 2026

    Comments are closed.

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • puma777_ozea on ಇನ್ನು ಮುಂದೆ ಜಾಲತಾಣ Koo ಇರುವುದಿಲ್ಲ.
    • Daviddek on ಜಾತಿ ಗಣತಿ ಅಲ್ಲ, ಸಿದ್ದ ಷಡ್ಯಂತ್ರ ಎಂದ ಕುಮಾರಸ್ವಾಮಿ.
    • GilbertTig on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.