ಬೆಂಗಳೂರು,ನ.17- ಗಣಿ ನಾಡು ಬಳ್ಳಾರಿ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ದೇವೇಂದ್ರಪ್ಪ (Bellary MP) ಅವರ
ಪುತ್ರ ಉಪನ್ಯಾಸಕ ರಂಗನಾಥ್ ವಿರುದ್ಧ ಲವ್, ಸೆಕ್ಸ್, ದೋಖಾ ಆರೋಪ ಕೇಳಿಬಂದಿದೆ.
ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಉಪನ್ಯಾಸರಾಗಿ ಕಾರ್ಯನಿರ್ವಹಿಸುತ್ತಿರುವ ಸಂಸದರ ಪುತ್ರ ರಂಗನಾಥ್ ಮದುವೆಯಾಗುವುದಾಗಿ ನಂಬಿಸಿ ಲೈಂಗಿಕವಾಗಿ ಬಳಿಸಿಕೊಂಡು ಮೋಸ ಮಾಡಿದ್ದಾರೆ ಎಂದು ನಗರದ ಯುವತಿ ನೀಡಿರುವ ದೂರು ಆಧರಿಸಿ ಪ್ರಕರಣ ದಾಖಲಿಸಿರುವ ಬಸವನಗುಡಿ ಮಹಿಳಾ ಠಾಣೆ ಪೊಲೀಸರು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.
ಒಂದೂವರೆ ವರ್ಷದ ಹಿಂದೆ ಪಾರ್ಟಿಯೊಂದರಲ್ಲಿ ಯುವತಿಯನ್ನು ಪರಿಚಯ ಮಾಡಿಕೊಂಡ ರಂಗನಾಥ್,ಆಕೆಯ ಜೊತೆಗೆ ಪ್ರೇಮದ ನಾಟಕವಾಡಿದ್ದಾರೆ. ಬಳಿಕ ಮೈಸೂರಿನ ಹೋಟೆಲ್ನಲ್ಲಿ ಆಕೆಯ ಜೊತೆ ಲೈಂಗಿಕ ಸಂಪರ್ಕ ಬೆಳೆಸಿದ್ದಾರೆ ಎಂದು ಆರೋಪಿಸಲಾಗಿದೆ. ಆದರೆ, ಮದುವೆಯಾಗಲು ಹಿಂದೇಟು ಹಾಕುತ್ತಿದ್ದಾರೆ ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ದೂರಿನ ಮೇರೆಗೆ ಬಸವನಗುಡಿ ಮಹಿಳಾ ಠಾಣೆಯಲ್ಲಿ ಬಳ್ಳಾರಿ ಸಂಸದ ದೇವೇಂದ್ರಪ್ಪ ಪುತ್ರ ರಂಗನಾಥ್ ವಿರುದ್ಧ ಐಪಿಸಿ ಸೆಕ್ಷನ್ 420, 417, 506 ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ.
ಇಬ್ಬರಿಗೂ ನೋಟಿಸ್:
ಪ್ರಕರಣಕ್ಕೆ ಸಂಬಂಧಿಸಿದಂತೆ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಿಂದ ಇಬ್ಬರಿಗೂ ನೋಟಿಸ್ ಜಾರಿಯಾಗಿದೆ. ವಿಚಾರಣೆಗೆ ಬರುವಂತೆ ರಂಗನಾಥ್ ಅವರಿಗೆ ನೋಟಿಸ್ ನೀಡಲಾಗಿದೆ. ಇನ್ನು ಯುವತಿಗೆ ಸೂಕ್ತ ದಾಖಲೆ ಸಮೇತ ಠಾಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಲಾಗಿದೆ.
ರಂಗನಾಥ್ ಪ್ರತಿ ದೂರು:
ಮದುವೆಯಾಗುವುದಾಗಿ ನಂಬಿಸಿ ಕೈಕೊಟ್ಟಿದ್ದಾರೆ ಎಂದು ಯುವತಿ ದೂರು ದಾಖಲಿಸಿದ ಬೆನ್ನಲ್ಲೇ ಇತ್ತ ರಂಗನಾಥ್ ಸಹ ಪ್ರತಿದೂರು ದಾಖಲಿಸಿದ್ದಾರೆ. ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಯುವತಿ ಹಾಗೂ ಅವರ ಸ್ನೇಹಿತ ಎನ್ನಲಾದ ಶ್ರೀನಿವಾಸ್ ವಿರುದ್ಧ ದೂರು ದಾಖಲಿಸಿದ್ದು, ಫೋಟೋ, ಆಡಿಯೋ ಇಟ್ಟುಕೊಂಡು 15 ಲಕ್ಷ ಹಣ ನೀಡುವಂತೆ ಬ್ಲ್ಯಾಕ್ಮೇಲ್ ಮಾಡುತ್ತಿದ್ದಾರೆ. ಅಲ್ಲದೇ 15 ಲಕ್ಷ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಎಂದು ಯುವತಿ ವಿರುದ್ಧ ದೂರಿನಲ್ಲಿ ಆರೋಪಿಸಿದ್ದಾರೆ. ಈ ಸಂಬಂಧ ವಿಜಯನಗರ ಠಾಣೆ ಪೊಲೀಸರು ಯುವತಿ ಹಾಗೂ ಶ್ರೀನಿವಾಸ್ ಎನ್ನುವರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.


4 Comments
online pharmacies
medicine canada
mexico pharmacy order online
pharmacy prices compare