ಬೆಂಗಳೂರು, ಅ.7 – ವಾರದಲ್ಲಿ ಮೂರು ದಿನ ಬೆಂಗಳೂರಿನ (Namma Bengaluru) ಕೆಲವು ಪ್ರದೇಶಗಳಲ್ಲಿ ಹೆಚ್ಚು ಸಂಚಾರ ದಟ್ಟಣೆಯಾಗುತ್ತಿದ್ದು, ಇದನ್ನು ಸುಧಾರಿಸಲು ಮೆಟ್ರೋ ಸೇರಿದಂತೆ ಇನ್ನಿತರೆ ಸಾರಿಗೆ ವ್ಯವಸ್ಥೆಗಳ ಸಂಪರ್ಕಕೊಂಡಿ ಯೋಜನೆ ಅಗತ್ಯವಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಹೊರ ವರ್ತುಲ ರಸ್ತೆಯ ಸಂಚಾರ ದಟ್ಟಣೆ ನಿವಾರಣೆಗೆ ಹೊರವರ್ತುಲ ರಸ್ತೆ ಕಂಪನಿಗಳ ಸಂಘದ (ORRCA) ಸದಸ್ಯರೊಂದಿಗೆ ಮಾತುಕತೆ ನಡೆಸಿದ ಅವರು ಜನರ ಸಮಯ ರಸ್ತೆಗಳಲ್ಲಿ ವ್ಯರ್ಥವಾಗಲು ನಮ್ಮ ಸರ್ಕಾರ ಬಿಡುವುದಿಲ್ಲ ಇದಕ್ಕೆ ಪರಿಹಾರ ಕಂಡು ಹಿಡಿಯಲು ಪ್ರಯತ್ನ ನಡೆಸಿದೆ ಎಂದು ಹೇಳಿದರು ಹೆಚ್ಚು ಸಂಚಾರ ದಟ್ಟಣೆ ಉಂಟಾಗುವ 6 ರಿಂದ 8 ಸ್ಥಳಗಳನ್ನು ಈಗಾಗಲೇ ಗುರುತಿಸಲಾಗಿದ್ದು, ಸಂಚಾರ ದಟ್ಟಣೆಗೆ ಇರುವ ಸಮಸ್ಯೆಗಳನ್ನು ಮೊದಲು ನಿವಾರಿಸಲಾಗುವುದು. ಮುಂದಿನ ಮೂರು ತಿಂಗಳಲ್ಲಿ ರಸ್ತೆ ಗುಂಡಿ ಸಮಸ್ಯೆ ಹಾಗೂ ಸಂಚಾರ ದಟ್ಟಣೆಗೆ ಕಾರಣವಾಗಿರುವ ಅನಧಿಕೃತ ಅಂಗಡಿ- ಮುಂಗಟ್ಟುಗಳನ್ನು ಗುರುತಿಸಿ ಯಾವುದೇ ರಾಜಕೀಯ ಒತ್ತಡಕ್ಕೆ ಒಳಗಾಗದೆ ತೆರವುಗೊಳಿಸಲಾಗುವುದು ಎಂದರು.
ಬೆಂಗಳೂರು ಯೋಜಿತ ನಗರವಲ್ಲ. ಕಳೆದ 30 ವರ್ಷಗಳಲ್ಲಿ ಹೆಚ್ಚು ಬೆಳವಣಿಗೆ ಕಂಡಿದೆ. ಇಲ್ಲಿ ಸಂಚಾರ ದಟ್ಟಣೆಯೊಂದೆ ಸಮಸ್ಯೆಯಲ್ಲ, ಘನತ್ಯಾಜ್ಯ ನಿರ್ವಹಣೆ, ಕುಡಿಯುವ ನೀರು, ವಸತಿ ಸೇರಿದಂತೆ ಅನೇಕ ಸಮಸ್ಯೆಗಳನ್ನು ಈ ನಗರ ಹೊಂದಿದೆ. ಇಷ್ಟೆಲ್ಲಾ ಸಮಸ್ಯೆಗಳನ್ನು ಬಗೆಹರಿಸುವ ಸವಾಲು ನಮ್ಮ ಮುಂದಿದೆ ಎಂದು ಹೇಳಿದರು
ಬೆಂಗಳೂರಿನ ಸಾಮರ್ಥ್ಯಕ್ಕೆ ಅನುಗುಣವಾಗಿ ತೆರಿಗೆ ಹಣ ಸಂಗ್ರಹವಾಗುತ್ತಿಲ್ಲ. ಈ ಬಗ್ಗೆ ನನಗೆ ಅಸಮಧಾನವಿದೆ. ಜನರು ಹಾಗೂ ಉದ್ದಿಮೆಗಳು ತಮ್ಮ ಆಸ್ತಿಗೆ ಅನುಗುಣವಾಗಿ ತೆರಿಗೆ ಪಾವತಿಸಬೇಕು. ಬೆಂಗಳೂರಿನ ಐಟಿ ಕಂಪೆನಿಗಳು ಸೇರಿದಂತೆ ಇತರೇ ಉದ್ದಿಮೆಗಳ ಮಾಲೀಕರು ತಮ್ಮ ಸಿಎಸ್ಆರ್ ಹಣವನ್ನು ಗ್ರಾಮೀಣ ಭಾಗದ ಶಿಕ್ಷಣಕ್ಕೆ ಖರ್ಚು ಮಾಡಬೇಕು. ನಗರ ಭಾಗದ ಮಕ್ಕಳಿಗೆ ದೊರೆಯುತ್ತಿರುವ ಉತ್ತಮ ಗುಣಮಟ್ಟದ ಶಿಕ್ಷಣ ಗ್ರಾಮೀಣ ಭಾಗದ ಮಕ್ಕಳಿಗೂ ದೊರೆಯಬೇಕು ಎನ್ನುವ ಸರ್ಕಾರದ ಕನಸಿಗೆ ನೀವೆಲ್ಲಾ ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ರಾಜಕಾಲುವೆ ತೆರವು ಮಾಡಲು ಸರ್ಕಾರ ಅಧಿಕಾರಿಗಳಿಗೆ ಸಂಪೂರ್ಣ ಜವಾಬ್ದಾರಿ ನೀಡಿದೆ. ರಾಜಕಾಲುವೆಗಳನ್ನು ಎಲ್ಲೂ ಒತ್ತುವರಿ, ದುರ್ಬಳಕೆ ಮಾಡಿಕೊಳ್ಳುವಂತಿಲ್ಲ. ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲು ಅಧಿಕಾರಿಗಳು ಸ್ವತಂತ್ರರು. ಸರ್ಕಾರ ಇದರಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ” ಎಂದು ತಿಳಿಸಿದರು.
ಪಿಆರ್ ಆರ್ ಯೋಜನೆಗೆ ಕೆಲವು ಕಾನೂನು ತೊಡಕುಗಳಿವೆ. ಹೀಗಾಗಿ ತಡವಾಗಿದೆ. ಇಲ್ಲದಿದ್ದರೆ ಇಷ್ಟು ಹೊತ್ತಿಗೆ ಆರಂಭವಾಗುತ್ತಿತ್ತು. ಕಾನೂನು ಮೀರಿ ಕೆಲಸ ಮಾಡಲು ಆಗುವುದಿಲ್ಲ. ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡುತ್ತೇವೆ” ಎಂದು ತಿಳಿಸಿದರು.
9 Comments
buying generic clomiphene price where to get generic clomid without dr prescription how to get cheap clomiphene pill where can i buy generic clomiphene price where can i get generic clomiphene no prescription can i purchase cheap clomiphene without insurance can i buy clomid without prescription
Thanks for sharing. It’s outstrip quality.
inderal 20mg us – how to get methotrexate without a prescription methotrexate 5mg tablet
amoxiclav sale – https://atbioinfo.com/ ampicillin cheap
nexium sale – https://anexamate.com/ nexium buy online
medex brand – blood thinner where to buy hyzaar without a prescription
order meloxicam generic – tenderness buy meloxicam 15mg
deltasone 20mg usa – allergic reactions buy prednisone 5mg generic
buy ed pills tablets – erection pills buy erectile dysfunction pills