Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೆಫೆ ಬಾಂಬರ್ ಕೊನೆಗೂ ಸಿಕ್ಕಿಬಿದ್ದ | Rameshwaram Cafe Blast
    Viral

    ಕೆಫೆ ಬಾಂಬರ್ ಕೊನೆಗೂ ಸಿಕ್ಕಿಬಿದ್ದ | Rameshwaram Cafe Blast

    vartha chakraBy vartha chakraApril 12, 2024No Comments2 Mins Read
    Facebook Twitter WhatsApp Pinterest LinkedIn Tumblr Email
    xr:d:DAFf3rfK_XU:1018,j:8059616154146353235,t:24041208
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಏ.12: ರಾಜಧಾನಿ ಬೆಂಗಳೂರಿನ ವೈಟ್‌ಫೀಲ್ಡ್‌ನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಪೋಟ (Rameshwaram Cafe Blast) ಪ್ರಕರಣದ ಪಾತಕಿಗಳನ್ನು ಹೆಡೆಮುರಿ ಕಟ್ಟುವಲ್ಲಿ ತನಿಖಾ ತಂಡಗಳು ಯಶಸ್ವಿಯಾಗಿವೆ.
    ರಾಜ್ಯದಲ್ಲಿ ಆತಂಕ ಸೃಷ್ಟಿಸಿದ್ದ ಈ ಪ್ರಕರಣವನ್ನು ಸವಾಲಾಗಿ ಸ್ವೀಕರಿಸಿದ ರಾಷ್ಟ್ರೀಯ ತನಿಖಾ ದಳ ಮತ್ತು ರಾಜ್ಯ ಪೊಲೀಸರು ಹಲವು ಆಯಾಮಗಳಲ್ಲಿ ತನಿಖೆ ನಡೆಸಿದ್ದವು.

    ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ನಡೆಸಿ ತಲೆ ಮರೆಸಿಕೊಂಡಿದ್ದ ಬಾಂಬರ್  ಮುಸಾವೀರ್ ಶಾಜೀಬ್ ಹುಸೇನ್‌ನನ್ನು  ರಾಷ್ಟ್ರೀಯ ತನಿಖಾ ದಳ (ಎನ್‌ಐಎ)ದ ಅಧಿಕಾರಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    ಬಾಂಬರ್ ಮುಸಾವೀರ್ ಶಾಜೀಬ್ ಜೊತೆಗೆ, ಬಾಂಬ್‌ ಇಡುವ ಸಂಚು ರೂಪಿಸಿದ್ದ ಸೂತ್ರಧಾರಿ ಅಬ್ದುಲ್‌ ಮತೀನ್‌ ತಾಹಾನನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿ ತೀವ್ರ ವಿಚಾರಣೆಗೆ ಒಳಪಡಿಸಿದ್ದರು.ಆತ ನೀಡಿದ ಸುಳಿವು ಆಧರಿಸಿ
    ಬಾಂಬ್‌ ಇಟ್ಟಿದ್ದ ಪಾತಕಿ ಉಗ್ರ ಮುಸಾವೀರ್ ಶಾಜೀಬ್ ಹುಸೇನ್‌ನನ್ನು ಉತ್ತರ ಭಾರತದ ರಾಜ್ಯವೊಂದರಲ್ಲಿ ಬಂಧಿಸಲಾಗಿದೆ.

    ಬಾಂಬ್ ಇಟ್ಟಿದ್ದ ಉಗ್ರನ ಬೆನ್ನು ಹತ್ತಿ ತಮಿಳು ನಾಡು, ಒಡಿಶಾ, ಅಸ್ಸಾಂ, ಪಶ್ಚಿಮ ಬಂಗಾಳ ಮುಂತಾದ ರಾಜ್ಯಗಳಲ್ಲಿ ಕಾರ್ಯಾಚರಣೆ ಕೈಗೊಂಡಿದ್ದ  ಎನ್‌ಐಎ ಅಧಿಕಾರಿಗಳು ಕೊನೆಗೂ‌ ಬಂಧಿಸಿದ್ದಾರೆ.
    ಬಾಂಬ್‌ ಇಟ್ಟ ಬಳಿಕ ಬಾಂಬರ್ ‌ಮುಸಾವೀರ್ ಶಾಜೀಬ್ ತಲೆಮರೆಸಿಕೊಂಡು ತಮಿಳು ನಾಡು, ಅಸ್ಸಾಂ, ಪಶ್ಚಿಮ ಬಂಗಾಳ ಮುಂತಾದ ಎನ್ ಐಎ ಅಧಿಕಾರಿಗಳ ಕಣ್ತಪ್ಪಿಸಿ ಓಡಾಡಿದ್ದ ಬಾಂಬರ್‌ ಮುಸಾವೀರ್ ಶಾಜೀಬ್ ಹುಸೇನ್ ಜೊತೆಗೆ ಮತ್ತೊಬ್ಬ ಉಗ್ರ ಅಬ್ದುಲ್‌ ಮತೀನ್‌ ತಾಹಾ ಜೊತೆ ಸಿಕ್ಕಿಬಿದ್ದಿದ್ದಾನೆ.
    ಇದಕ್ಕೂ ಮೊದಲು ಶಾಜೀನ್‌ ಹುಸೇನ್‌ಗೆ ಬೆಂಗಳೂರಿನಲ್ಲಿ ಕುಮ್ಮಕ್ಕು ನೀಡಿದ್ದ ಮೂವರನ್ನು ಈಗಾಗಲೇ ಬಂಧಿಸಲಾಗಿದೆ. ‌
    ಮುಸಾವೀರ್‌ ಹುಸೇನ್‌ ಶಾಜಿಬ್‌ನೇ  ರಾಮೇಶ್ವರಂ ಕೆಫೆಯಲ್ಲಿ ಸುಧಾರಿತ ಸ್ಫೋಟಕ ಸಾಧನ (ಇಐಡಿ) ಸ್ಫೋಟಿಸಿದ್ದು” ಎಂಬುದಾಗಿ ಎನ್‌ಐಎ ಪ್ರಕಟಣೆ ತಿಳಿಸಿತ್ತು. “ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವನಾದ ಮುಸಾವೀರ್‌ ಹುಸೇನ್‌ ಶಾಜಿಬ್‌ ಬಾಂಬಿಟ್ಟವನು ಎಂದು ತನಿಖೆಯಿಂದ ಗೊತ್ತಾಗಿದೆ.

    ಅಬ್ದುಲ್‌ ಮಥೀನ್‌ ತಾಹಾ ಎಂಬವನು ಕೂಡ ಪ್ರಕರಣದಲ್ಲಿ ಪ್ರಮುಖ ಪಿತೂರಿದಾರನಾಗಿದ್ದಾನೆ. ಮುಜಾಮಿಲ್‌ ಷರೀಫ್‌ನು ಬಾಂಬ್‌ ತಯಾರಿಸಲು ಇವರಿಗೆ ಹಲವು ವಸ್ತುಗಳನ್ನು ಪೂರೈಕೆ ಮಾಡಿದ್ದಾನೆ ಎಂಬುದು ತನಿಖೆಯ ವೇಳೆ ಬಹಿರಂಗವಾಗಿದೆ. ಮುಜಾಮಿಲ್‌ ಷರೀಫ್‌ನನ್ನು ಪೊಲೀಸ್‌ ಕಸ್ಟಡಿಯಲ್ಲಿ ವಿಚಾರಣೆ ಮಾಡಲಾಗುತ್ತಿದೆ” ಎಂದು ಎನ್‌ಐಎ ಪ್ರಕಟಣೆ ತಿಳಿಸಿತ್ತು.
    ಕಳೆದ ಮಾರ್ಚ್‌ 1 ರಂದು ವೈಟ್‌ಫೀಲ್ಡ್‌ನ ಬ್ರೂಕ್‌ಫೀಲ್ಡ್‌ನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ ಒಂಬತ್ತು ಜನರು ಗಾಯಗೊಂಡಿದ್ದರು. ಮತ್ತೊಂದೆಡೆ, ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿಯ ಮೊಬೈಲ್ ಅಂಗಡಿಯೊಂದಕ್ಕೆ ಕೆಲ ದಿನಗಳ ಹಿಂದೆ ಭೇಟಿ ನೀಡಿದ್ದ ಎನ್‌ಐಎ ಅಧಿಕಾರಿಗಳು, ಹಿಂದು ಕಾರ್ಯಕರ್ತ ಸೇರಿ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

    ಸುದ್ದಗುಂಟೆಪಾಳ್ಯದ ಗುರಪ್ಪನಪಾಳ್ಯದಲ್ಲಿ ಉಗ್ರ ಮುಜಾವೀರ್ ಹುಸೇನ್ ನೆಲಸಿದ್ದ. ಎನ್‌ಐಎ ದಾಳಿ ನಡೆಸಿದಾಗ 10ಕ್ಕೂ ಹೆಚ್ಚು ಜೀವಂತ ಗುಂಡುಗಳು, ಒಂದು ಗನ್, ಡಿಟೋನೇಟರ್ ಹಾಗೂ ಕಚ್ಚಾ ಬಾಂಬ್ ತಯಾರಿಕೆಗೆ ಬೇಕಾದ ವಸ್ತುಗಳನ್ನು ಜಪ್ತಿ ಮಾಡಲಾಗಿತ್ತು. 2020ರಂದು ಎನ್‌ಐಎ ದಾಳಿ ನಡೆಸಿತ್ತು. ಅಂದಿನಿಂದ ಮುಜಾವಿರ್ ಹುಸೇನ್ ತಲೆಮರೆಸಿಕೊಂಡಿದ್ದ. ಈತನಿಗೆ ಸಹಾಯ ಮಾಡಿರುವ ಹಿನ್ನೆಲೆಯಲ್ಲಿ ಮುಜಾಮಿಲ್ ಶರೀಫ್‌ನನ್ನು ಬಂಧನ ಮಾಡಲಾಗಿದೆ.
    ಮುಜಾಮಿಲ್ ಶರೀಫ್‌ ಇದ್ದ ನಿವಾಸದ ಮೇಲೆ ದಾಳಿ ನಡೆಸಿ ಡಿಜಿಟಲ್ ಡಿವೈಸ್,‌ ನಗದನ್ನು ವಶಕ್ಕೆ ಪಡೆಯಲಾಗಿದೆ. ಈತ ಭಯೋತ್ಪಾದಕ ಚಟುವಟಿಕೆಯಲ್ಲಿ ತೊಡಗಿದ್ದ ಮೋಸ್ಟ್‌ ವಾಂಟೆಡ್‌ ಅಬ್ದುಲ್ ಮತೀನ್ ಜತೆಗೆ ನಿರಂತರ ಸಂಪರ್ಕದಲ್ಲಿದ್ದ. ಅಬ್ದುಲ್ ಮತೀನ್ ನೇರವಾಗಿ ಹೊರದೇಶದ ಹ್ಯಾಂಡ್ಲರ್‌ಗಳ ಜತೆಗೆ ಸಂಪರ್ಕವನ್ನು ಹೊಂದಿದ್ದ. ಅಲ್ಲದೆ, ಶಾರೀಖ್, ಮಾಜ್ ಮುನೀರ್ ಅಹಮದ್ ಮತ್ತು ಸೈಯದ್ ಯಾಸಿನ್ ಜತೆಗೂ ಈತ ಸಂಪರ್ಕ ಸಾಧಿಸಿದ್ದ ಎಂದು ತಿಳಿದುಬಂದಿದೆ.

    m war ಉಗ್ರ
    Share. Facebook Twitter Pinterest LinkedIn Tumblr Email WhatsApp
    Previous Articleಶಿವಕುಮಾರ್ ಮಧ್ಯರಾತ್ರಿ ಕಾರ್ಯಾಚರಣೆ | DK Shivakumar
    Next Article ಪೊಲೀಸ್ ಬಲೆಗೆ ಬಿತ್ತು ಗೋಕಾರಂ ಗ್ಯಾಂಗ್
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • http://sknewstroy.ru on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • https://sofiaposada.com.co/review-completa-de-balloon-juego-de-smartsoft-para-13/ on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • fishezdpa on ಬಾಬಾ ಸಿದ್ಧಿಕ್ಕಿ ಹತ್ಯೆ ನಂತರ, ಸಲ್ಮಾನ್‌ ಖಾನ್ ಹತ್ಯೆ ಮಾಡಲು ಟಾರ್ಗೆಟ್ ಮಾಡುತ್ತಿರುವ ಬಿಷ್ಣೋಯ್‌ ಗ್ಯಾಂಗ್!
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    CSK ವಿರುದ್ಧ ಸಿಡಿದೆದ್ದ ಜಡೇಜಾ #varthachakra #csk #jadeja #dhoni #sanjusamson #viralvideo #facts #ipl
    Subscribe