ಬೆಂಗಳೂರು, ಮಾ.22 – ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಖ್ಯಾತ ನಟ ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಅಭಿನಯದ ಚಲನಚಿತ್ರಗಳು, ಜಾಹಿರಾತು, ಚಿತ್ರಗಳು ಹಾಗೂ ಫಲಕಗಳನ್ನು ಪ್ರದರ್ಶಿಸದಂತೆ ನಿರ್ಬಂಧ ಹಾಕಬೇಕೆಂದು ಬಿಜೆಪಿ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದೆ.
ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯಾಧ್ಯಕ್ಷ ಆರ್.ರಘು(ಕೌಟಿಲ್ಯ) ಅವರು ಆಯೋಗಕ್ಕೆ ಮನವಿ ಸಲ್ಲಿಸಿದ್ದು, ಶಿವರಾಜ ಕುಮಾರ್ ಅವರ ಪತ್ನಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಕಾಂಗ್ರೆಸ್ ಪರವಾಗಿ ಪ್ರಚಾರ ಮಾಡುತ್ತಿದ್ದು ಲೋಕಸಭಾ ಚುನಾವಣೆ ಮುಗಿಯುವವರೆಗೆ ಅವರ ಅಭಿನಯದ ಸಿನಿಮಾಗಳ ಪ್ರದರ್ಶನ ನಿಲ್ಲಿಸಲು ಆದೇಶಿಸಲು ಕೋರಿದ್ದಾರೆ.
ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದೆ. ಇದು ಮುಗಿಯುವವರೆಗೆ ಶಿವರಾಜ್ ಕುಮಾರ್ ಸಿನಿಮಾ ಪ್ರದರ್ಶಿಸದಂತೆ ಸಿನಿಮಾ ಮಂದಿರಗಳು, ಟಿವಿ ವಾಹಿನಿಗಳು, ಸಾಮಾಜಿಕ ಜಾಲತಾಣಗಳು ಹಾಗೂ ಸ್ಥಳೀಯ ಸಂಸ್ಥೆಗಳಿಗೆ ಚುನಾವಣಾ ಆಯೋಗ ಈ ಕೂಡಲೇ ಆದೇಶ ಹೊರಡಿಸಬೇಕೆಂದು ಅವರು ಮನವಿ ಮಾಡಿದ್ದಾರೆ.
ಶಿವರಾಜ್‍ಕುಮಾರ್ ಕನ್ನಡದ ಹೆಸರಾಂತ ಚಲನಚಿತ್ರ ನಟರಾಗಿದ್ದಾರೆ.
ಅವರ ಪತ್ನಿ ಗೀತಾ ಶಿವರಾಜ್‍ಕುಮಾರ್ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಜನಪ್ರಿಯ ನಟರಾಗಿರುವ ಕಾರಣ ಶಿವರಾಜ್‍ಕುಮಾರ್ ಮತದಾರರ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇರುವುದರಿಂದ ಚುನಾವಣಾ ಆಯೋಗ ತುರ್ತು ಕ್ರಮವನ್ನು ತೆಗೆದುಕೊಳ್ಳಬೇಕೆಂದು ಮನವಿ ಮಾಡಿದ್ದಾರೆ. ಸುದ್ದಿ ವಾಹಿನಿಗಳು, ಸಾಮಾಜಿಕ ಜಾಲತಾಣಗಳು, ಸ್ಥಳೀಯ ಸಂಸ್ಥೆಗಳು ಮತ್ತಿತರ ಕಡೆ ಶಿವರಾಜ್‍ಕುಮಾರ್ ಅವರ ಜಾಹೀರಾತುಗಳಿಗೆ ಕಡಿವಾಣ ಹಾಕಬೇಕು ಎಂದು ರಘು ಚುನಾವಣಾ ಆಯೋಗಕ್ಕೆ ಕೋರಿದ್ದಾರೆ.

1 Comment
https://pinnacle-bet.com.mx/
Pinnacle casino no es un casino convencional que te cautiva con bonos enormes llenos de condiciones imposibles; su planteamiento descansa sobre comisiones bajas, cuotas realmente competitivas y un modelo transparente sin trucos.