Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಭಿನ್ನಮತದ ಧಗೆಗೆ ಬಿಜೆಪಿ ವಿಲವಿಲ | BJP
    Viral

    ಭಿನ್ನಮತದ ಧಗೆಗೆ ಬಿಜೆಪಿ ವಿಲವಿಲ | BJP

    vartha chakraBy vartha chakraMarch 14, 202440 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಮಾ.14: ಲೋಕಸಭೆ ಚುನಾವಣೆಯಲ್ಲಿ ಗೆಲ್ಲುವ ಮಾನದಂಡ ಆಧರಿಸಿ ಅಭ್ಯರ್ಥಿಗಳಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಹೀಗಾಗಿ ಎಲ್ಲರೂ ಒಟ್ಟಾಗಿ ಕೆಲಸ ಮಾಡುವಂತೆ ಬಿಜೆಪಿ (BJP) ಕೇಂದ್ರ ನಾಯಕತ್ವ ಸ್ಪಷ್ಟ ಸೂಚನೆ ನೀಡಿದ್ದರೂ ಸೊಪ್ಪು ಹಾಕದ ಹಲವರು ಬಂಡಾಯದ ಬಾವುಟ ಹಾರಿಸಲು ಸಜ್ಜುಗೊಂಡಿದ್ದಾರೆ.
    ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ತಮ್ಮ ಪುತ್ರನಿಗೆ ಹಾವೇರಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ನಿರಾಕರಿಸಿದ್ದರಿಂದ ಆಕ್ರೋಶಗೊಂಡಿದ್ದು ನಾಳೆ ತಮ್ಮ ಬೆಂಬಲಿಗರ ಸಭೆ ಕರೆದಿದ್ದಾರೆ.

    ಟಿಕೆಟ್ ಹಂಚಿಕೆಯಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕೈ ಮೇಲಾಗಿದ್ದು ಅವರು ಹೇಳಿದವರಿಗೆ ಹೈಕಮಾಂಡ್ ಟಿಕೇಟ್ ನೀಡಿದೆ. ಈ ವೇಳೆ ಹಿಂದುತ್ವ ಮತ್ತು ಪಕ್ಷದ ನೀತಿ ಸಿದ್ಧಾಂತವನ್ನು ಗಾಳಿಗೆ ತೂರಲಾಗಿದೆ ಎಂದು ಈಶ್ವರಪ್ಪ ಆಪಾದಿಸಿದ್ದಾರೆ. ಅಷ್ಟೇ ಅಲ್ಲ ಯಡಿಯೂರಪ್ಪ ಅವರು ಶೋಭಾ ಕರಂದ್ಲಾಜೆ ಅವರಿಗೆ ಟಿಕೆಟ್ ಕೊಡಿಸಲು ವಹಿಸಿದ ಮುತವರ್ಜಿಯನ್ನು ತಮ್ಮ ಮಗನಿಗೆ ಟಿಕೆಟ್ ಕೊಡಿಸಲು ವಹಿಸಲಿಲ್ಲ ಎಂದು ದೂರಿದ್ದಾರೆ.
    ಪಕ್ಷದ ಹಿಂದುತ್ವ ವಾದಿ ನಾಯಕರಾದ ನಳಿನ್ ಕುಮಾರ್ ಕಟೀಲು, ಸಿ.ಟಿ. ರವಿ, ಬಸನಗೌಡ ಪಾಟೀಲ್ ಯತ್ನಾಳ್, ಅನಂತಕುಮಾರ್ ಹೆಗಡೆ, ಪ್ರತಾಪ ಸಿಂಹ ಮೊದಲಾದವರನ್ನು ತುಳಿಯುವ ಪ್ರಯತ್ನ ಮಾಡಲಾಗಿದೆ ಪಕ್ಷಕ್ಕೆ ಸಂಬಂಧವೇ ಇಲ್ಲದ ಯದುವೀರ್ ಮತ್ತು ಡಾ.ಮಂಜುನಾಥ್ ಅವರಿಗೆ ಟಿಕೆಟ್ ನೀಡಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.
    ತಮ್ಮ ಪುತ್ರನಿಗೆ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ನೀಡಲಾಗುತ್ತದೆ ಎಂದು ಪಕ್ಷದ ರಾಜ್ಯ ಉಸ್ತುವಾರಿ ಕೇಂದ್ರ ನಾಯಕ ರಾಧಾ ಮೋಹನ್ ಸಿಂಗ್ ನೀಡಿರುವ ಆಹ್ವಾನವನ್ನು ತಿರಸ್ಕರಿಸಿರುವ ಅವರು ಇದೀಗ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಸಿದ್ಧತೆ ನಡೆಸಿದ್ದಾರೆ.

    ಅದೇ ರೀತಿಯಲ್ಲಿ ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಮಾಜಿ ಸಂಸದ ಜಿಎಂ ಸಿದ್ದೇಶ್ವರ್ ಅವರ ಪತ್ನಿಗೆ ಟಿಕೆಟ್ ನೀಡಿರುವ ಕ್ರಮದ ವಿರುದ್ಧ ಕೆಂಡಮಂಡಲರಾಗಿರುವ ಮಾಜಿ ಸಚಿವ ರೇಣುಕಾಚಾರ್ಯ ಇದೀಗ ಬಂಡಾಯದ ಮೂಲಕ ಬಿಜೆಪಿ ಅಭ್ಯರ್ಥಿಗೆ ಸೋಲುಣಿಸಲು ತಂತ್ರ ರೂಪಿಸ ತೊಡಗಿದ್ದಾರೆ.
    ರೇಣುಕಾಚಾರ್ಯ ಅವರ ನೇತೃತ್ವದಲ್ಲಿ ಮಾಜಿ ಸಚಿವ ರವೀಂದ್ರನಾಥ ನಿವಾಸದಲ್ಲಿ ಸಭೆ ನಡೆಸಿದ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಾಡಾಳ್ ಮಲ್ಲಿಕಾರ್ಜುನ್, ಮಾಜಿ ಶಾಸಕ ಗುರುಸಿದ್ದನಗೌಡ ಪುತ್ರ ಡಾ. ರವೀಂದ್ರ ಇದೀಗ ಪಕ್ಷದ ಅಭ್ಯರ್ಥಿಯ ವಿರುದ್ಧ ಯಾರಾದರೂ ಒಬ್ಬರು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಬೇಕು ಎಂಬ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಗೊತ್ತಾಗಿದೆ.
    ಮತ್ತೊಂದೆಡೆ ಕೊಪ್ಪಳ ಕ್ಷೇತ್ರದ ಹಾಲಿ ಸಂಸದ ಕರಡಿ ಸಂಗಣ್ಣ ತಮಗೆ ಟಿಕೆಟ್ ನಿರಾಕರಿಸಿರುವ ಹೈಕಮಾಂಡ್ ವಿರುದ್ಧ ಆಕ್ರೋಶಗೊಂಡಿದ್ದು ಬೆಂಬಲಿಗರೊಂದಿಗೆ ಸಮಾಲೋಚನೆ ನಡೆಸಿದರು. ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಬೇಕು ಎಂದು ನಿರ್ಧರಿಸಿರುವ ಅವರು ಕಾಂಗ್ರೆಸ್ ಇಲ್ಲವೇ ಜನಾರ್ದನ ರೆಡ್ಡಿ ನೇತೃತ್ವದ ಪಕ್ಷದಿಂದ ಕಣಕ್ಕಿಳಿಯುವ ಕುರಿತಂತೆ ಚಿಂತನೆ ನಡೆಸಿದ್ದಾರೆ.
    ಬೆಂಗಳೂರು ಉತ್ತರ ಕ್ಷೇತ್ರದಿಂದ ಕೇಂದ್ರ ಮಂತ್ರಿ ಶೋಭಾ ಕರಂದ್ಲಾಜೆ ಅವರಿಗೆ ಟಿಕೆಟ್ ನೀಡಿರುವ ಕ್ರಮದ ವಿರುದ್ಧ ಕೆಲವು ನಿಷ್ಠಾವಂತರು ಬೇಸರ ಹೊರ ಹಾಕಿದ್ದಾರೆ. ಮಾಜಿ ಸಂಸದ ಸದಾನಂದ ಗೌಡ ಅವರು ಸಕ್ರಿಯ ರಾಜಕಾರಣದಿಂದ ನಿವೃತ್ತಿ ಘೋಷಿಸುವ ಸಾಧ್ಯತೆ ಇದ್ದು ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರದಲ್ಲಿ ತೊಡಗುವುದಿಲ್ಲ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

    ತುಮಕೂರಿನಲ್ಲೂ ಮಾಜಿ ಸಚಿವ ವಿ ಸೋಮಣ್ಣ ಅವರ ಸ್ಪರ್ಧೆಗೆ ತೀವ್ರ ವಿರೋಧ ವ್ಯಕ್ತವಾಗಿದ್ದು ಮಾಜಿ ಸಚಿವ ಮಾಧುಸ್ವಾಮಿ ನೇತ್ರತ್ವದಲ್ಲಿ ಹಲವರು ಬಂಡಾಯ ಸಾರಲು ಸಜ್ಜುಗೊಂಡಿದ್ದಾರೆ ಪ್ರಮುಖವಾಗಿ ಪಕ್ಷದ ಅಧ್ಯಕ್ಷ ವಿಜಯೇಂದ್ರ ಬಣದಲ್ಲಿ ಗುರುತಿಸಿಕೊಂಡಿರುವ ಯುವ ಕಾರ್ಯಕರ್ತರು ಸೋಮಣ್ಣ ಅವರ ಸ್ಪರ್ಧೆಗೆ ವಿರೋಧ ವ್ಯಕ್ತಪಡಿಸಿದ್ದು ಚುನಾವಣೆಯಲ್ಲಿ ಸಾಕಷ್ಟು ಪರಿಣಾಮ ಬೀರುವ ಸಾಧ್ಯತೆ ಇದೆ.
    ಮೈಸೂರಿನಲ್ಲಿ ಸಂಸದ ಪ್ರತಾಪ ಸಿಂಹ ತಮಗೆ ಟಿಕೆಟ್ ನಿರಾಕರಿಸಿರುವ ಹಿಂದೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ನೇರ ಹಸ್ತಕ್ಷೇಪವಿದೆ ಎಂದು ಆಪಾದಿಸಿದ್ದು ಪಕ್ಷದ ಅಭ್ಯರ್ಥಿ ಯದುವೀರ್ ಪರ ಯಾವುದೇ ರೀತಿಯ ಪ್ರಚಾರ ನಡೆಸದಿರಲು ತಮ್ಮ ಬೆಂಬಲಿಗರಿಗೆ ಸೂಚನೆ ನೀಡಿದ್ದಾರೆ ರಾಜಕೀಯವಾಗಿ ತಾವು ಸದ್ಯದಲ್ಲೇ ಒಂದು ನಿರ್ಧಾರ ಕೈಗೊಳ್ಳುತ್ತಿತ್ತು ಅದಕ್ಕಾಗಿ ಕಾದು ನೋಡುವಂತೆ ಎಲ್ಲರಿಗೂ ತಿಳಿಸುವ ಮೂಲಕ ಆಶ್ಚರ್ಯ ಮೂಡಿಸಿದ್ದಾರೆ.
    ಮಂಗಳೂರು ಕ್ಷೇತ್ರದಿಂದ ಸ್ಪರ್ಧಿಸಲು ತಮಗೆ ಟಿಕೆಟ್ ನಿರಾಕರಿಸಿದ ನಳಿನ್ ಕುಮಾರ್ ಕಟಿಲ್ ಪಕ್ಷದ ನಿರ್ಧಾರ ಅದಕ್ಕೆ ತಲೆ ಬಾಗುತ್ತೇನೆ ಎಂದು ಹೇಳಿದ್ದಾರಾದರೂ ಚುನಾವಣೆ ಘೋಷಣೆಯಾದ ನಂತರ ಇವರು ಯಾವ ನಿಲುವು ತಳೆಯಲಿದ್ದಾರೆ ಎನ್ನುವುದನ್ನು ಕಾದು ನೋಡಬೇಕಿದೆ.

    BJP ಈಶ್ವರಪ್ಪ ಕಾಂಗ್ರೆಸ್ Election ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಕರ್ನಾಟಕದಲ್ಲಿ ಸಿಎಎ ಜಾರಿಯಾಗುತ್ತದೆಯಾ? | CAA
    Next Article ಕೆ.ಎನ್.ರಾಜಣ್ಣ ಎಂಬ ನಿಷ್ಠೂರವಾದಿ ಸಹಕಾರ ಜೀವಿ | KN Rajanna
    vartha chakra
    • Website

    Related Posts

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    December 22, 2025

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    December 21, 2025

    ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ

    December 21, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MiguelMer on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • JerryWax on ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    • promokodegPl on ಬಾಬಾ ಸಿದ್ಧಿಕ್ಕಿ ಹತ್ಯೆ ನಂತರ, ಸಲ್ಮಾನ್‌ ಖಾನ್ ಹತ್ಯೆ ಮಾಡಲು ಟಾರ್ಗೆಟ್ ಮಾಡುತ್ತಿರುವ ಬಿಷ್ಣೋಯ್‌ ಗ್ಯಾಂಗ್!
    Latest Kannada News

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    December 22, 2025

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    December 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    December 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್.#varthachakra #mallikarjunkharge #siddaramaiah #dkshivakumar
    Subscribe