ಬೆಂಗಳೂರು, ಏ.24- ರಾಜ್ಯದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರ ಚುಕ್ಕಾಣಿ ಹಿಡಿಯುವ ಮೂಲಕ ಟೀಕಾಕಾರುಗಳಿಗೆ ಮತ್ತು ಪ್ರತಿಪಕ್ಷಗಳಿಗೆ ತಕ್ಕ ಸಂದೇಶ ರವಾನೆಯಾಗಬೇಕು ಎಂದು ಹೇಳಿರುವ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್ (BL Santhosh) ಇದಕ್ಕಾಗಿ ಸೂತ್ರವೊಂದನ್ನು ನೀಡಿದ್ದಾರೆ.
Electionಯಲ್ಲಿ ಗೆಲುವು ಸಾಧಿಸುವ ಕುರಿತಂತೆ ಅನುಸರಿಸಬೇಕಾದ ಕಾರ್ಯತಂತ್ರಗಳು ಹಾಗೂ ಪಕ್ಷ ಎದುರಿಸುತ್ತಿರುವ ಸಮಸ್ಯೆಗಳ ಕುರಿತಂತೆ ಪ್ರಮುಖರು ಮತ್ತು ವಿಸ್ತರಾಕರ ಸಭೆ ನಡೆಸಿದರು.
ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ವಿಸ್ತಾರಕರೊಂದಿಗೆ, ಸುದೀರ್ಘ ಸಭೆ ನಡೆಸಿದ ಅವರು ಎಲ್ಲಾ ಕ್ಷೇತ್ರಗಳ ಕುರಿತಂತೆ ಮಾಹಿತಿ ಪಡೆದರು.
ಆನಂತರ ಚುನಾವಣೆಯಲ್ಲಿ ಗೆಲುವು ಸಾಧಿಸಬೇಕಾದರೆ ಪಕ್ಷದ ಕಾರ್ಯಕರ್ತರು ಮತ್ತು ವಿಸ್ತಾರಕರು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಿದ ಅವರು, ಬಿಜೆಪಿ ವಿರುದ್ಧ ಪ್ರತಿಪಕ್ಷ ಮಾಡುತ್ತಿರುವ ಲಿಂಗಾಯತ ವಿರೋಧಿ ಹಣೆಪಟ್ಟಿ ಕಳಚುವಂತೆ ಕೆಲಸ ಮಾಡಲು ಸಲಹೆ ಮಾಡಿದ್ದಾರೆ.
ಭ್ರಷ್ಟಾಚಾರ ಅವರಪ್ಪ ಕುರಿತಂತೆ ಹೆಚ್ಚಾಗಿ ಪ್ರತಿಕ್ರಿಯೆ ನೀಡದೆ, ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ರಾಮ ಮಂದಿರ ಹಾಗೂ ಹಿಂದುತ್ವ ವಿಚಾರವನ್ನು ಪ್ರಬಲವಾಗಿ ಪ್ರತಿಪಾದಿಸುವ ಮೂಲಕ ಮತದಾರರಿಗೆ ವಿಷಯ ಮನದಟ್ಟು ಮಾಡಬೇಕು ಎಂದು ಸೂಚಿಸಿದ್ದಾರೆ.
ಈ ಬಾರಿ ಮತದಾನದ ವೇಳೆ ಪ್ರತಿಯೊಂದು ಮತಗಟ್ಟೆಯಲ್ಲೂ ಅತಿ ಹೆಚ್ಚು ಪ್ರಮಾಣದಲ್ಲಿ ಮತದಾನ ಆಗುವಂತೆ ನೋಡಿಕೊಳ್ಳಬೇಕು. ವಿಶೇಷವಾಗಿ ಕನ್ನಡಿಗರಲ್ಲದವರು ಮತದಾನಕ್ಕೆ ಬರುವಂತೆ ಮನವೊಲಿಸಬೇಕು ಎಂದು ಸೂಚಿಸಿದ್ದಾರೆ.
ಹೊಸ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ ಕಡೆಗಳಲ್ಲಿ ಶೇ 10ರಷ್ಟು ಹೆಚ್ಚುವರಿ ಮತಗಳು ಪಕ್ಷದ ಅಭ್ಯರ್ಥಿಗಳಿಗೆ ಬರುವಂತೆ ಶ್ರಮ ಹಾಕಬೇಕು. ಇನ್ನು ಕೇವಲ ಮೂರು ವಾರಗಳು ಉಳಿದಿವೆ. ಕಾಲ ಮೀರುವ ಮುನ್ನ ಈ ಎಲ್ಲ ಅಂಶಗಳ ಬಗ್ಗೆಯೂ ಗಮನಹರಿಸಬೇಕು ಎಂದು, ವಿಸ್ತಾರಕರು ಮತ್ತು ಸ್ಥಳೀಯ ನಾಯಕರಿಗೆ ಹೇಳಿದ್ದಾರೆಂದು ಮೂಲಗಳು ತಿಳಿಸಿವೆ. (BL Santhosh)
ಮತದಾನದ ಪ್ರಮಾಣ ಶೇ 10 ರಷ್ಟು ಹೆಚ್ಚಿಸಲು ಕಠಿಣ ಪರಿಶ್ರಮ ಹಾಕಲೇಬೇಕು. ಪ್ರತಿ ಮತಗಟ್ಟೆ ವ್ಯಾಪ್ತಿಯಲ್ಲಿರುವ ಕನ್ನಡೇತರರನ್ನು ತಲುಪಲು ಅವರ ಮನೆಗಳಿಗೆ ಹೋಗಬೇಕು. ಲೋಕಸಭಾ ಚುನಾವಣೆಯಲ್ಲಿ ಮತದಾನಕ್ಕೆ ಬರುವ ಅವರು ವಿಧಾನಸಭೆ ಚುನಾವಣೆಯಲ್ಲಿ ಮತ ಹಾಕಲು ಆಸಕ್ತಿ ತೋರಿಸುವುದಿಲ್ಲ. ಆದ್ದರಿಂದ ಅವರನ್ನು ಸಂಪರ್ಕಿಸುವ ಕೆಲಸವನ್ನೂ ಮಾಡುವಂತೆ ಸೂಚಿಸಿದ್ದಾರೆ.
ಚಾಮರಾಜನಗರ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಲಿಂಗಾಯತ ಸಮುದಾಯ ಗಣನೀಯ ಪ್ರಮಾಣದಲ್ಲಿದ್ದು ಈ ಮತಗಳನ್ನು ಹೆಚ್ಚು ಪಡೆಯುವ ಬಗ್ಗೆ ಗಮನಹರಿಸಬೇಕು. 2018 ರ ಚುನಾವಣೆಯಲ್ಲಿ ಸೋತ ವಿಧಾನಸಭಾ ಕ್ಷೇತ್ರಗಳಲ್ಲಿ ಈ ಬಾರಿ ಶೇ 20 ರಿಂದಶೇ 25 ರಷ್ಟು ಹೆಚ್ಚು ಮತದಾನ ಆಗುವಂತೆ ನೋಡಿಕೊಳ್ಳಬೇಕು. ಇದರಿಂದ ಪಕ್ಷದ ಅಭ್ಯರ್ಥಿ ಗೆಲ್ಲಲು ಸಾಧ್ಯ ಎಂದು ಅವರು ಸಲಹೆ ನೀಡಿದ್ದಾರೆ.
ಯಾವ ಕ್ಷೇತ್ರಗಳಲ್ಲಿ ಹೊಸ ಮುಖಗಳನ್ನು ಕಣಕ್ಕಿಳಿಸಲಾಗಿದೆಯೋ ಅಲ್ಲಿ ಹೆಚ್ಚು ಗಮನ ಕೇಂದ್ರೀಕರಿಸಲಾಗಿದೆ. ಶಿಕಾರಿಪುರದಲ್ಲಿ ಬಿ.ವೈ.ವಿಜಯೇಂದ್ರ, ಮಹದೇವಪುರದಲ್ಲಿ ಅರವಿಂದ ಲಿಂಬಾವಳಿ ಅವರ ಪತ್ನಿ ಸ್ಪರ್ಧಿಸಿದ್ದು, ಇವೆರಡೂ ಬಿಜೆಪಿ ಭದ್ರಕೋಟೆಯಾಗಿರುವುದರಿಂದ ಈ ಕ್ಷೇತ್ರದಲ್ಲಿ ಹೆಚ್ಚಿನ ಗಮನ ಹರಿಸುವ ಅಗತ್ಯವಿಲ್ಲ. ಆದರೆ, ಬಿಜೆಪಿ ಭದ್ರಕೋಟೆ ಅಲ್ಲದ ಕಡೆಗಳಲ್ಲಿ ಹೆಚ್ಚಿನ ಪ್ರಯತ್ನ ಅಗತ್ಯವಿದೆ. ಇಂತಹ ಕಡೆಗಳಲ್ಲಿ ಗೆಲ್ಲಲೇಬೇಕಾಗಿದೆ. ಹೀಗಾಗಿ ಪ್ರತಿಯೊಂದು ಮತಗಟ್ಟೆಯಲ್ಲೂ ವೃತ್ತಿಪರರು, ಮಹಿಳೆಯರು, ಸ್ವಸಹಾಯ ಗುಂಪುಗಳ ಸದಸ್ಯರನ್ನು ಸಂಪರ್ಕಿಸಲಾಗುವುದು ಎಂದು ಮೂಲಗಳು ತಿಳಿಸಿವೆ. (BL Santhosh)
Also read
ಸಂಕಷ್ಟದಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ | Politics | Karnataka congress | Election