ಬೆಂಗಳೂರು: ಅ,5 – ಇತ್ತೀಚಿನ ದಿನಗಳಲ್ಲಿ ಬಿಎಂಟಿಸಿ ಚಾಲಕರು ಮತ್ತು ನಿರ್ವಾಹಕರ ಮೇಲೆ ಹಲ್ಲೆ ಪ್ರಕರಣಗಳು ಹೆಚ್ಚಾಗುತ್ತಿವೆ, ಇದಕ್ಕೆ ಸಂಬಂಧಿಸಿದಂತೆ ಅ.1ರ ಮಂಗಳವಾರ ಸಂಜೆ 7 ಗಂಟೆ ಸುಮಾರಿಗೆ ವೈಟ್ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಿಎಂಟಿಸಿ 13ನೇ ಘಟಕದ ವೋಲ್ವೋ ಬಸ್ ನಿರ್ವಾಹಕ ಯೋಗೇಶ್ ಎಂಬುವವರಿಗೆ ಪ್ರಯಾಣಿಕನೊಬ್ಬ ಚಾಕು ಇರಿದಿದ್ದ ಘಟನೆ ನಡೆದಿತ್ತು. ಈ ಘಟನೆ ಬೆನ್ನಲ್ಲೇ ಈಗ ಬಿಎಂಟಿಸಿಯ ಕಂಡಕ್ಟರ್, ಡ್ರೈವರ್ಗಳು ಬಿಎಂಟಿಸಿ ಎಂಡಿಗೆ ಪತ್ರ ಬರೆದಿದ್ದು ಗನ್ ಇಟ್ಟುಕೊಳ್ಳಲು ಅನುಮತಿ ನೀಡುವಂತೆ ಕೋರಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಎಂಟಿಸಿ ಎಂಡಿ ರಾಮಚಂದ್ರನ್ ಅವರಿಗೆ ಪತ್ರ ಬರೆದಿರುವ ಬಿಎಂಟಿಸಿಯ ನೌಕರ ಯೋಗೇಶ್ ಪ್ರತಿನಿತ್ಯ ಬೆಂಗಳೂರಿನಲ್ಲಿ ಭಾರೀ ವಾಹನ ದಟ್ಟಣೆ ಹಾಗೂ ಕಲುಷಿತ ಮಾಲಿನ್ಯದ ನಡುವೆ ಕರ್ತವ್ಯ ನಿರ್ವಹಿಸುತ್ತಾ ಈಗಾಗಲೇ ಬಿಎಂಟಿಸಿ ಬಸ್ನ ಚಾಲಕ ಮತ್ತು ನಿರ್ವಾಹಕರು ಮಾನಸಿಕವಾಗಿ ಕುಗ್ಗಿ ಹೋಗಿದ್ದಾರೆ. ಈ ನಡುವೆ ಡ್ರೈವರ್ ಮತ್ತು ಕಂಡಕ್ಟರ್ ಮೇಲೆ ಪ್ರಯಾಣಿಕರು ಸುಖಾ ಸುಮ್ಮನೆ ಕಾಲು ಕೆರೆದು ಜಗಳ ಮಾಡುವುದು ಹೆಚ್ಚಾಗುತ್ತಿದೆ. ಕೆಲವರು ಗುಂಪು ಕಟ್ಟಿಕೊಂಡು ಹಲ್ಲೆಯನ್ನೂ ಮಾಡುತ್ತಿದ್ದಾರೆ. , ಕೆಲಸದ ಒತ್ತಡದಿಂದ ಕುಟುಂಬದೊಂದಿಗೆ ಸಮಯ ಕಳೆಯಲು ಆಗುತ್ತಿಲ್ಲ. ಜೊತೆಗೆ, ಸಂಸ್ಥೆಯ ಕನ್ನಡಿಗರ ನೌಕರರ ಮೇಲೆ ಅನ್ಯ ರಾಜ್ಯದ ಪ್ರಯಾಣಿಕರಿಂದ ಮಾರಣಾಂತಿಕ ಹಲ್ಲೆಯಾಗುತ್ತಿದೆ. ಆದ್ದರಿಂದ ತಮ್ಮ ರಕ್ಷಣೆಗಾಗಿ ಗನ್ ಇಟ್ಟುಕೊಳ್ಳಲು ಲೈಸೆನ್ಸ್ ನೀಡಬೇಕು ಬೇಕು ಎಂದು ಎಲ್ಲ ನೌಕರರ ಪರವಾಗಿ ಪತ್ರ ಬರೆದಿದ್ದು ಇದನ್ನು ವ್ಯವಸ್ಥಾಪಕ ನಿರ್ದೇಶನಾಲಯ ಸ್ವೀಕರಿಸಿದ್ದು ಇನ್ನು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
Previous Articleಮೆಟ್ರೋ ಪ್ರಯಾಣ ದರ ಹೆಚ್ಚಳಕ್ಕೆ BMRCL ಚಿಂತನೆ, ಪ್ರಯಾಣಿಕರಿಗೆ ಶಾಕ್.
Next Article ಬೆಂಗಳೂರಿನಲ್ಲಿ ಆಂಬುಲೆನ್ಸ್ ಗಿಲ್ಲ ಅಡ್ಡಿ.