ಮುಂಬೈ: ಬಾಲಿವುಡ್ ಗಾಯಕ, ಕೆಕೆ ಎಂದೇ ಖ್ಯಾತರಾಗಿದ್ದ ಕೃಷ್ಣಕುಮಾರ್ ಕುನ್ನತ್ (53) ಅವರು ಮೇ 31ರಂದು ಸಂಜೆ ನಿಧನರಾದರು.
ಕೋಲ್ಕತಾದಲ್ಲಿ ಸಂಗೀತ ಕಾರ್ಯಕ್ರಮಕ್ಕೆ ಆಗಮಿಸಿದ್ದ ಅವರು ಕಾರ್ಯಕ್ರಮದ ಬಳಿಕ ಕುಸಿದು ಬಿದ್ದಿದ್ದು, ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಕೆಕೆ ಹಿಂದಿ, ತಮಿಳು, ತೆಲುಗು, ಕನ್ನಡ ಮತ್ತು ಬೆಂಗಾಲಿ ಸೇರಿದಂತೆ ಹಲವಾರು ಭಾಷೆಗಳಲ್ಲಿ ಹಾಡುಗಳನ್ನು ರೆಕಾರ್ಡ್ ಮಾಡಿದ್ದಾರೆ. ಅಲ್ಲದೆ ಕೋಲ್ಕತ್ತಾದ ನಜ್ರುಲ್ ಮಂಚದಲ್ಲಿ ಅವರ ಸಂಗೀತ ಕಚೇರಿಯ ಫೋಟೋಗಳನ್ನು ಪೋಸ್ಟ್ ಮಾಡಿದ್ದರು.
ಇದೀಗ ಕೆಕೆ ಸಾವಿನ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಕೋಲ್ಕತ್ತಾದ ಪೊಲೀಸರು ಅಸಹಜ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ನ್ಯೂ ಮಾರ್ಕೆಟ್ ಪೊಲೀಸ್ ಸ್ಟೇಷನ್‌ನಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸ್ ಮೂಲಗಳು ನೀಡಿದ ಮಾಹಿತಿ ಪ್ರಕಾರ ಗಾಯಕ ಕೆಕೆ ಮುಖ ಮತ್ತು ತಲೆಯಲ್ಲಿ ಗಾಯಗಳಾಗಿವೆ. ಸಾವಿನ ನಿಖರ ಕಾರಣ ತಿಳಿಯಲು ಶವಪರೀಕ್ಷೆಯ ವರದಿ ಬರಬೇಕಿದೆ. ಇಂದು (ಜೂನ್ 1) ಕೋಲ್ಕತ್ತಾದ ಎಸ್ ಎಸ್ ಕೆಎಂ ಆಸ್ಪತ್ರೆಯಲ್ಲಿ ಶವಪರೀಕ್ಷೆ ನಡೆಯಲಿದೆ. ಪೊಲೀಸರು ಈಗಾಗಲೇ ಕೆಕೆ ತಂಗಿದ್ದ ಹೋಟೆಲ್ ಸಿಬ್ಬಂದಿ ಮತ್ತು ಕಾರ್ಯಕ್ರಮದ ಆಯೋಜಕರ ಜೊತೆ ಮಾತುಕತೆ ನಡೆಸುತ್ತಿದ್ದಾರೆ.
Previous Articleಮತ್ತೆ ನಾಲ್ವರು ಲೇಖಕರಿಂದ ಪಠ್ಯ ಅನುಮತಿ ವಾಪಸ್
Next Article ಜಾನುವಾರು ಅಕ್ರಮ ಸಾಗಾಣಿಕೆ