ಮಡಿಕೇರಿ: ಕೊಡಗಿನ ಗ್ರಾಮವೊಂದರಲ್ಲಿ ನಡೆದ ಬುರ್ಖಾ ಡ್ಯಾನ್ಸ್ ಚರ್ಚೆಗೆ ಗ್ರಾಸವಾಗಿದೆ.
ಕೊಡಗಿನ ಪೊನ್ನಂಪೇಟೆ ತಾಲೂಕಿನ ಸಾಯಿ ಶಂಕರ ಶಾಲಾ ಆವರಣದಲ್ಲಿ ಬಂದೂಕು ತರಬೇತಿ ಬಗ್ಗೆ ಸಾಕಷ್ಟು ಚರ್ಚೆಯಾಗಿತ್ತು. ಇದೀಗ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ನಾಪೋಕ್ಲು ಸಮೀಪದ ಕೊಳಕೇರಿ ಗ್ರಾಮದಲ್ಲಿ ಬುರ್ಖಾ ಹಾಕಿ ಕೆಲ ಯುವಕರು ನೃತ್ಯ ಮಾಡಿರುವುದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ.
ಕೊಳಕೇರಿ ಗ್ರಾಮದಲ್ಲಿ ಮೇ 28 ಮತ್ತು 29ರಂದು ಪಶ್ಚಿಮ ಕೊಳಕೇರಿ ಗ್ರಾಮಾಭಿವೃದ್ದಿ ಸಂಘದ ವಜ್ರಮಹೋತ್ಸವ ಆಚರಣೆಯನ್ನು ಏರ್ಪಡಿಸಲಾಗಿತ್ತು. ಈ ವೇಳೆ ವೇದಿಕೆ ಕಾರ್ಯಕ್ರಮದಲ್ಲಿ ಕೆಲ ಯುವಕರು ಬುರ್ಖಾ ಹಾಕಿ ಕೊಡವ ವಾಲಗಕ್ಕೆ ನೃತ್ಯ ಮಾಡಿದ್ದಾರೆ. ಈ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಜಿಲ್ಲೆಯ ಮುಸ್ಲಿಂ ಸಮುದಾಯದ ಮುಖಂಡರು ಅಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಮುಸ್ಲಿಂ ಧಾರ್ಮಿಕ ಉಡುಪುಗಳಿಗೆ ಅಪಮಾನ ಮಾಡಲಾಗಿದೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Previous Articleಪೆಟ್ರೋಲ್ ಬಂಕ್ ಮುಂದೆ ಜನವೋ.. ಜನ!
Next Article ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲೆ ಕೋಡಿಹಳ್ಳಿ