Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗೋವುಗಳಿಗೆ ಹಿಂಸೆ: BJP ನಾಯಕರ ವಿರುದ್ಧ ಕೇಸ್
    Viral

    ಗೋವುಗಳಿಗೆ ಹಿಂಸೆ: BJP ನಾಯಕರ ವಿರುದ್ಧ ಕೇಸ್

    vartha chakraBy vartha chakraFebruary 11, 20244 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.11- ಹಾಲು ಉತ್ಪಾದಕರಿಗೆ ಸಹಾಯಧನ ನೀಡಿಲ್ಲ ಎಂದು ಆರೋಪಿಸಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ ಮಾಜಿ ಶಾಸಕ ಪಿ.ರಾಜೀವ್ ಸೇರಿದಂತೆ ಒಂಭತ್ತು ಮಂದಿ ಬಿಜೆಪಿ ನಾಯಕರ ವಿರುದ್ಧ ಪ್ರಾಣಿ ಹಿಂಸೆ ತಡೆ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಲಾಗಿದೆ.
    ಪ್ರತಿಭಟನೆ ಸಮಯದಲ್ಲಿ ಸರ್ಕಾರದ ಗಮನ ಸೆಳೆಯುವ ಸಲುವಾಗಿ ಈ ನಾಯಕರು ಆರು ಗೋವುಗಳನ್ನು ಫ್ರೀಡಂ ಪಾರ್ಕ್‌ಗೆ ತಂದಿದ್ದರು.

    ಈ ಹಿನ್ನೆಲೆಯಲ್ಲಿ 9 ಮಂದಿ ಬಿಜೆಪಿ ನಾಯಕರ ವಿರುದ್ಧ ಮನೇಕಾ ಗಾಂಧಿ ಕಾನೂನು ಎಂದೇ ಖ್ಯಾತಿ ಪಡೆದಿರುವ ಪ್ರಾಣಿ ಹಿಂಸೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
    ಹಾಲು ಉತ್ಪಾದಕರಿಗೆ ಬಾಕಿ ಇರುವ ಸಬ್ಸಿಡಿಯನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಬಿಜೆಪಿ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿರುದ್ಧ ಕಳೆದ ಫೆ.6ರಂದು ಫ್ರೀಡಂ ಪಾರ್ಕ್’ನಲ್ಲಿ  ಪ್ರತಿಭಟನೆ ನಡೆಸಿದರು. ಈ ವೇಳೆ ತಮ್ಮೊಂದಿಗೆ ಗೋವುಗಳನ್ನೂ ಕರೆತಂದಿದ್ದರು.
    ಪ್ರತಿಭಟನೆ ತಡೆಯಲು ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ಬಿಎಂಟಿಸಿ ಬಸ್ ಗಳಲ್ಲಿ ಹತ್ತಿಸಲು ಮುಂದಾಗಿದ್ದರು.ಈ ವೇಳೆ ಕೆಲ ನಾಯಕರು ಗೋವುಗಳನ್ನೂ ಕೂಡ ತಮ್ಮೊಂದಿಗೆ ಬಸ್ ಗಳಲ್ಲಿ ಹತ್ತಿಸಲು ಮುಂದಾಗಿದ್ದರು.

    ಬಸ್ ಗಳಲ್ಲಿ ಸಣ್ಣ ಬಾಗಿಲುಗಳಿರುವುದರಿಂದ ಅವುಗಳನ್ನು ಬಸ್ ಗಳ ಒಳಗೆ ಹತ್ತಿಸಲು ಸಾಧ್ಯವಾಗುತ್ತಿರಲಿಲ್ಲ. ಗೋವುಗಳ ರಕ್ಷಣೆ ಮಾಡಲು ಹರಸಾಹಸ ಪಡಬೇಕಾಯಿತು. ಪ್ರತಿಭಟನಾ ಸ್ಥಳದಲ್ಲಿ ದೊಡ್ಡ ದೊಡ್ಡ ಸ್ಪೀಕರ್ ಗಳಲ್ಲಿ ಬರುತ್ತಿದ್ದ ಧ್ವನಿಯಿಂದಾಗಿ ಗೋವುಗಳು ಭೀತಿಗೊಳಗಾಗಿ ವಿವಿಧ ದಿಕ್ಕುಗಳಲ್ಲಿ ಓಡಲು ಪ್ರಯತ್ನಿಸುತ್ತಿದ್ದವು ಎಂದು ಪೊಲೀಸರು ಹೇಳಿದ್ದಾರೆ.
    ಈ ಹಿನ್ನೆಲೆಯಲ್ಲಿ ಪ್ರತಿಭಟನೆ ವೇಳೆ ಗೋವುಗಳಿಗೆ ಹಿಂಸೆ ನೀಡಿದವರ ವಿರುದ್ಧ ಉಪ್ಪಾರಪೇಟೆ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಪ್ರಶಾಂತ್ ಅವರು ದೂರು ದಾಖಲಿಸಿದ್ದಾರೆ.

    ಮಾಜಿ ಶಾಸಕ ಪಿ ರಾಜೀವ್,ಶಾಸಕ ಎ.ಎಸ್. ಪಾಟೀಲ್ ನಡಹಳ್ಳಿ, ಹರೀಶ್, ಸಪ್ತಗಿರಿಗೌಡ ಸೇರಿದಂತೆ ಒಂಭತ್ತು ಜನರ ವಿರುದ್ಧ ದೂರು ದಾಖಲಾಗಿದೆ. ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲು ಅನುಮತಿ ನೀಡಿದ್ದರೂ, ಪ್ರತಿಭಟನೆಗೆ ಪ್ರಾಣಿಗಳನ್ನು ಕರೆತರುವುದು ಕಾನೂನುಬಾಹಿರವಾಗಿದೆ. ಆರು ಹಸುಗಳನ್ನು ಪ್ರತಿಭಟನಾಕಾರರು ಅಮಾನವೀಯವಾಗಿ ನಡೆಸಿಕೊಂಡರು. ಈ ಜಾನುವಾರುಗಳ ಮಾಲೀಕರ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ. ದಂಡದ ರೂಪದಲ್ಲಿ ಶಿಕ್ಷೆಯಾಗಿದ್ದರೂ, ಇನ್ನು ಮುಂದೆ ಯಾವುದೇ ಪ್ರತಿಭಟನೆಗೆ ಪ್ರಾಣಿಗಳನ್ನು ಕರೆತರದಂತೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    Verbattle
    Verbattle
    Verbattle
    BJP ಕಾಂಗ್ರೆಸ್ ಕಾನೂನು ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಕಬ್ಬನ್ ಪಾರ್ಕ್ ನಲ್ಲಿ ವಾಹನ ಸಂಚಾರಕ್ಕೆ ಅನುಮತಿ | Cubbon Park
    Next Article ಯುದ್ಧ ಮಾಡುವ ದೇಶಗಳಿಗೆ ಬೇಕಾಗಿದೆ ಭಾರತೀಯ ಮತ್ತು ನೇಪಾಳಿ ಗಂಡಸರು!
    vartha chakra
    • Website

    Related Posts

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Clydebek on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • Dennisjaick on ದೆಹಲಿಯಲ್ಲಿ ನಾಪತ್ತೆ ಪ್ರಕರಣಗಳ ಏರಿಕೆ: 2026ರ ಮೊದಲ 15 ದಿನಗಳಲ್ಲಿ 800ಕ್ಕೂ ಹೆಚ್ಚು ಜನ ನಾಪತ್ತೆ
    • Nyqbzi on ಹುಲ್ಲು ತಿಂದು ಕೊಳಚೆ ನೀರು ಕುಡಿದು ಬದುಕುತ್ತಿರುವ ಪೆಲೆಸ್ತೀನಿಯರು | Palestine
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.