ಬೆಂಗಳೂರು, ಜೂ.21-ಬೈಕ್ ನಲ್ಲಿ ವೇಗವಾಗಿ ಬಂದು ನಡೆದುಕೊಂಡು ಹೋಗುವವರ ಚಿನ್ನದ ಸರ ಮೊಬೈಲ್ ದೋಚಿ ಪರಾರಿಯಾಗುತ್ತಿದ್ದ ಇಬ್ಬರು ಕುಖ್ಯಾತ ಕಳ್ಳರನನ್ನು ಅನ್ನಪೂರ್ಣೇಶ್ವರಿನಗರ ಪೊಲೀಸರು ಬಂಧಿಸಿದ್ದಾರೆ.
ಅನ್ನಪೂರ್ಣೇಶ್ವರಿನಗರದ ದರ್ಶನ್ ಹಾಗು ಮನೋಜ್ ಬಂಧಿತ ಆರೋಪಿಗಳಾಗಿದ್ದಾರೆ.
ಬಂಧಿತರಿಂದ 50 ಸಾವಿರ ಮೌಲ್ಯದ 12 ಗ್ರಾಂ ಚಿನ್ನದ ಸರ, ಬೈಕ್ ಚಾಕುವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಡಿಸಿಪಿ ಡಾ ಸಂಜೀವ್ ಪಾಟೀಲ್ ತಿಳಿಸಿದ್ದಾರೆ.
ಕಳೆದ ಜೂ.10 ರಂದು ಮಧ್ಯಾಹ್ನ 12-30 ಗಂಟೆ ಸಮಯದಲ್ಲಿ ವ್ಯಕ್ತಿಯೊಬ್ಬರು ಕಾಲೇಜು ಮುಗಿಸಿಕೊಂಡು ಅನ್ನಪೂರ್ಣೇಶ್ವರಿನಗರದ ಮನೆಗೆ ನಡೆದು ಹೋಗುತ್ತಿರುವಾಗ ಬೈಕ್ ನಲ್ಲಿ ಬಂದ ಆರೋಪಿಗಳು ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಸಿದು ಪರಾರಿಯಾಗಿದ್ದರು.
ಈ ಸಂಬಂಧ ಅನ್ನಪೂರ್ಣೇಶ್ವರಿನಗರ ಪೊಲೀಸ್ ಇನ್ಸ್‌ಪೆಕ್ಟರ್ ಲೋಹಿತ್ ಮತ್ತವರ ಸಿಬ್ಬಂದಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡು ಖಚಿತವಾದ ಮಾಹಿತಿಯನ್ನು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಗಳು ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣಾ ಸರಹದ್ದಿನಲ್ಲಿ ಸರ ಅಪಹರಣ ಮತ್ತು ಸುಲಿಗೆ ಮಾಡಲು ಪ್ರಯತ್ನಿಸಿರುವುದನ್ನು ಬಾಯ್ಬಿಟ್ಟಿದ್ದು ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದರು.