Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೀಗೂ ನಡೆಯುತ್ತದೆ ಮಕ್ಕಳ ಮಾರಾಟ ಜಾಲ | Child Trafficking
    ಸುದ್ದಿ

    ಹೀಗೂ ನಡೆಯುತ್ತದೆ ಮಕ್ಕಳ ಮಾರಾಟ ಜಾಲ | Child Trafficking

    vartha chakraBy vartha chakraNovember 28, 2023No Comments3 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ನ.28- ಕುಡುಕನೋರ್ವ ಮದ್ಯದ ಅಮಲಿನಲ್ಲಿ ಬಡ ಬಡಿಸುತ್ತಾ ನೀಡಿದ ಮಾಹಿತಿಯನ್ನು ಆಧರಿಸಿ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ಇಡೀ ದೇಶವೇ ಬೆಚ್ಚಿ ಬೀಳುವಂತಹ ಪ್ರಕರಣವನ್ನು ಬೇಧಿಸಿದ್ದಾರೆ.
    ಇದು ಅಂತಿಂತಹ ವಿದ್ಯಮಾನವಲ್ಲ. ಸೆಲ್ಯುಲಾಯ್ಡ್ ಪರದೆ ಮೇಲೆ ನೋಡುವ ಸಿನಿಮಾದ ಕತೆಯನ್ನು ಮೀರಿಸಿದ ವಿದ್ಯಮಾನ.ವೈದ್ಯರು, ಹಣದ ಅಗತ್ಯವಿರುವರು ಒಟ್ಟಾಗಿ ಸೇರಿ ಹೆಣೆದ ವ್ಯವಸ್ಥಿತ ಹಸುಗೂಸುಗಳ ಮಾರಾಟ ಜಾಲ.
    ಈ ವ್ಯವಸ್ಥಿತ ಜಾಲವನ್ನು ಬೇಧಿಸಿ ಮಕ್ಕಳನ್ನು ಮಾರಾಟಕ್ಕಾಗಿಯೇ ಜನ್ಮ ನೀಡುವ ದೊಡ್ಡ ರಾಕೆಟ್  ಬಯಲಿಗೆ ಬಂದಿದೆ.ಇದರ ಮಾಸ್ಟರ್ ಮೈಂಡ್ ಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

    ಕರ್ನಾಟಕ-ತಮಿಳುನಾಡು ರಾಜ್ಯಗಳಲ್ಲಿ ಅವ್ಯಾಹತವಾಗಿ ಹಸುಗೂಸು ಮಗು ಮಾರಾಟ ಜಾಲವು ಯಾವುದೇ ಸಿನಿಮಾಗೂ ಕಡಿಮೆ ಇಲ್ಲದ ರೀತಿಯಲ್ಲಿ ನಡೆಯುತ್ತಿದ್ದು ಜಾಲದಲ್ಲಿದ್ದ ಎಂಟು ಮಂದಿಯನ್ನು ಬಂಧಿಸಲಾಗಿದೆ.
    ಬಂಧಿತರಲ್ಲಿ ಒಬ್ಬ ಪುರುಷನಾದರೆ, ಉಳಿದ ಏಳು ಮಂದಿ ಮಹಿಳೆಯರು. ಇವರನ್ನು ಕಣ್ಣನ್ ರಾಮಸ್ವಾಮಿ, ಮುರುಗೇಶ್ವರಿ, ಸುಹಾಸಿನಿ, ಶರಣ್ಯ, ಹೇಮಲತಾ, ಮಹಾಲಕ್ಷ್ಮಿ, ಗೋಮತಿ, ರಾಧಾಮಣಿ ಎಂದು ಗುರುತಿಸಲಾಗಿದೆ.
    ಈ ದಂಧೆ ಯಾವ ಮಟ್ಟದ್ದೆಂದರೆ ಇಲ್ಲಿ ಮಕ್ಕಳು ಹುಟ್ಟಿದ ಮೇಲೆ ಮಾರಾಟದ ಡೀಲ್‌ ಆಗುವುದಿಲ್ಲ.ಬದಲಿಗೆ ಮಕ್ಕಳು ಹುಟ್ಟುವ ಮೊದಲೇ ಅಥವಾ ಗರ್ಭ ಧರಿಸುವ ಮೊದಲೇ ಡೀಲ್‌ ಆಗುತ್ತದೆ.

    ಕಂದಮ್ಮಗಳಿಗೆ ಹೆಚ್ಚಿನ ಬೇಡಿಕೆ ಇರುವುದನ್ನು ಗಮನಿಸಿದ ಖದೀಮರು ಇದಕ್ಕಾಗಿಯೇ ಒಂದು ನೆಟ್ ವರ್ಕ್ ಸಿದ್ದಪಡಿಸಿ ಈ ದಂಧೆಯನ್ನು ನಡೆಸುತ್ತಿದ್ದಾರೆ. ಇದು ಹೇಗೆ ಕಾರ್ಯಾಚರಿಸುತ್ತದೆ ಎಂದರೆ, ಮೊದಲು ಗ್ಯಾಂಗ್ ನ ಆರೋಪಿಗಳು ಬಡ ಮಹಿಳೆಯರನ್ನು ಮತ್ತು ಅವರ ಕುಟುಂಬವನ್ನು ಗುರಿಯಾಗಿಸಿಕೊಂಡು ಅದರಲ್ಲೂ  ಚಿಕ್ಕ ವಯಸ್ಸಿನಲ್ಲಿ ಮದುವೆಯಾಗಿ ಹಲವು ಮಕ್ಕಳನ್ನು ಪಡೆಯುವ ಕೆಲವು ವರ್ಗಗಳನ್ನು ಗುರುತಿಸುತ್ತದೆ. ಅವರಿಗೆ ಹಣದ ಆಮಿಷವೊಡ್ಡಿ ಮಗು ಹುಟ್ಟುವ ಮೊದಲೇ ಡೀಲ್‌ ಮಾಡಿಕೊಳ್ಳಲಾಗುತ್ತದೆ. ಅವರು ಗರ್ಭ ಧರಿಸಿ ಮಕ್ಕಳಾದ ಬಳಿಕ ಅವುಗಳನ್ನು ಈ ಟೀಮ್‌ ಖರೀದಿ ಮಾಡುತ್ತದೆ. ಬಳಿಕ ಅದನ್ನು ಬೇರೆಯವರಿಗೆ ಮಾರಾಟ ಮಾಡುತ್ತಾರೆ.
    ಒಂದು ಗುಂಪು ಗರ್ಭ ಧರಿಸುವ ಯುವತಿರನ್ನು ಗುರಿ ಮಾಡಿಕೊಂಡಿದ್ದರೆ, ಇನ್ನೊಂದು ಕಡೆಯಲ್ಲಿ ಮತ್ತೊಂದು ತಂಡ ಮಕ್ಕಳಿಗಾಗಿ ಬೇಡಿಕೆ ಇಡುವ ಪೋಷಕರ ಜತೆಗೂ ಇವರು ನೆಟ್‌ವರ್ಕ್‌ ರಚನೆ ಮಾಡಿಕೊಂಡಿರುತ್ತದೆ. ಹಾಗೆ ಇಲ್ಲಿ ಮಕ್ಕಳು ಹುಟ್ಟುತ್ತಿದ್ದಂತೆಯೇ ಅವರಿಗೆ ಮಾರಾಟ ಮಾಡಲಾಗುತ್ತದೆ. ಈ ದಂಧೆಕೋರರ ಕೈಯಲ್ಲಿ ಆಗಲೇ 60 ಮಕ್ಕಳಿಗೆ ಬೇಡಿಕೆ ಇತ್ತು ಎಂದು ತನಿಖೆಯಲ್ಲಿ ತಿಳಿದುಬಂದಿದೆ.

    ಗೊತ್ತಾಗಿದ್ದು ಹೇಗೆ:
    ಮುರುಗೇಶ್ವರಿ ಎಂಬ ಮಹಿಳೆ ಗರ್ಭ ಧರಿಸಿರುತ್ತಾರೆ ಆಕೆಗೆ ಹಣಕಾಸು ಮತ್ತಿತರ ಸಮಸ್ಯೆಯಿರುವ ಅಸಹಾಯಕತೆ  ಗ್ಯಾಂಗ್‌ನ ಗಮನಕ್ಕೆ ಬಂದಿತ್ತು. ಬಹುಶಃ ಆಕೆಯನ್ನು ಪರೀಕ್ಷೆ ಮಾಡುತ್ತಿದ್ದ ವೈದ್ಯರೇ ಈ ಗ್ಯಾಂಗ್‌ನ ಪರಿಚಯ ಮಾಡಿಸಿರುವ ಸಾಧ್ಯತೆಗಳಿವೆ. ಮರುಗೇಶ್ವರಿಯನ್ನು ಭೇಟಿ ಮಾಡಿದ ಗ್ಯಾಂಗ್‌ ಆಕೆಗೆ ಹಣಕಾಸು ಸೇರಿದಂತೆ ಎಲ್ಲಾ ರೀತಿಯ ಬೆಂಬಲವನ್ನು ನೀಡುವುದಾಗಿ ಹೇಳಿತ್ತು. ಮತ್ತು ಆಕೆಯನ್ನು ಪೋಷಣೆ ಮಾಡುತಿತ್ತು.
    ಈ ಒಂದು ಡೀಲ್‌ನ ಬಗ್ಗೆ ಅದ್ಯಾವುದೋ ಮೂಲದಿಂದ ಪೊಲೀಸರಿಗೆ ಮಾಹಿತಿ ಸಿಕ್ಕಿದೆ.
    ಅದರ ಜತೆಗೆ ನವೆಂಬರ್‌ 24ರಂದು ಒಂದು ಮಗುವಿನ ಮಾರಾಟದ ಡೀಲ್‌ ನಡೆಯಲಿದೆ ಎಂಬ ಮಾಹಿತಿ ಇದಾಗಿತ್ತು. ಹೀಗಾಗಿ ಪೊಲೀಸರು ಡೀಲ್‌ ನಡೆಯಲಿದೆ ಎಂದು ನಿಗದಿಯಾಗಿದ್ದ ಆರ್‌.ಆರ್‌. ನಗರ ದೇವಸ್ಥಾನದ ಬಳಿ ಹೊಂಚು ಹಾಕಿ ಕುಳಿತಿದ್ದರು. ಮಧ್ಯವರ್ತಿಗಳು ತಮಿಳುನಾಡು ನೋಂದಣಿಯ ಕಾರಿನಲ್ಲಿ ಬಂದಿದ್ದರೆ, ಸಿಸಿಬಿ ಅಧಿಕಾರಿಗಳು ಕೆಂಪು ಬಣ್ಣದ ಸ್ವಿಫ್ಟ್ ಕಾರಿನಲ್ಲಿ ಬಂದಿದ್ದರು. ಅಲ್ಲೇ ಈ ದಂಧೆಕೋರರನ್ನು ಮಟ್ಟ ಹಾಕಲಾಗಿದೆ.

    ವೈದ್ಯರು ಭಾಗಿ:
    ಈ ದಂಧೆಕೋರರು ಎಷ್ಟೊಂದು ಪ್ರಭಾವಿಗಳಾಗಿದ್ದಾರೆ ಎಂದರೆ ಇವರು ಪ್ರತಿಷ್ಠಿತ ಆಸ್ಪತ್ರೆಗಳ ವೈದ್ಯರನ್ನು ಕೂಡಾ ತಮ್ಮ ಬುಟ್ಟಿಗೆ ಹಾಕಿಕೊಂಡಿದ್ದಾರೆ. ಐವಿಎಫ್‌ ಮತ್ತಿತರ ಕೃತಕ ಗರ್ಭಧಾರಣಾ ವಿಧಾನಗಳ ಮೂಲಕವೂ ಮಕ್ಕಳನ್ನು ಸೃಷ್ಟಿಸಿ ಮಾರಾಟ ಮಾಡಲಾಗುತ್ತಿದೆ.
    ಅಂದರೆ ಅಸಹಾಯಕ ಯುವತಿಯರ ಗುರುತಿಸಿ ಒಂದೋ ಅವರಿಗೆ ಅವರದೇ ಪತಿಯ ಮೂಲಕ ಮಗುವನ್ನು ಪಡೆದು ಮಾರಾಟ ಮಾಡುವಂತೆ ಹೇಳುವುದು, ಇಲ್ಲವೇ ಕೃತಕ ಗರ್ಭಧಾರಣೆಯ ಮೂಲಕ ಮಗುವನ್ನು ಪಡೆಯುವಂತೆ ಆಮಿಷ ಒಡ್ಡಲಾಗುತ್ತದೆ. ಒಮ್ಮೆ ಆ ಮಹಿಳೆ ಈ ಗ್ಯಾಂಗ್‌ ಜತೆ ಒಪ್ಪಂದ ಮಾಡಿಕೊಂಡಳೆಂದರೆ ಬಳಿಕ ಆಕೆಯ ಎಲ್ಲಾ ಆರೋಗ್ಯ ತಪಾಸಣೆಯ ನಿಗಾವನ್ನು ಇದೇ ತಂಡ ವಹಿಸಿಕೊಳ್ಳುತ್ತದೆ. ಕೊನೆಗೆ ಹೆರಿಗೆಯ ಹಂತದಲ್ಲಿ ಆಸ್ಪತ್ರೆಗೆ ಸೇರಿಸುವ ಕೆಲಸವನ್ನು ಮಾಡುತ್ತದೆ. ಬಳಿಕ ಆಸ್ಪತ್ರೆಯಿಂದಲೇ ಮಗುವನ್ನು ಹಸ್ತಾಂತರಿಸಲಾಗುತ್ತದೆ. ಇದು ಅತ್ಯಂತ ಗೌಪ್ಯವಾಗಿ ನಡೆಯುತ್ತಿದ್ದು, ಕುಟುಂಬದ ಕೆಲವರಿಗಷ್ಟೇ ಗೊತ್ತಿರುತ್ತದೆ.
    ಕೊನೆಗೆ ಹೆರಿಗೆ ಹಂತದಲ್ಲೇ ಮಗು ಸಾವಾಗಿದೆ ಎಂತಲೋ, ಹುಟ್ಟಿದ ಬಳಿಕ ಪ್ರಾಣ ಬಿಟ್ಟಿದೆ ಎಂತಲೋ ಕತೆ ಕಟ್ಟಲಾಗುತ್ತದೆ. ಆದರೆ, ಮಗು ಮಾತ್ರ ಇನ್ಯಾರದೋ ಪಾಲಾಗಿರುತ್ತದೆ.

    8ರಿಂದ 15 ಲಕ್ಷ ನಿಗಧಿ:
    ಈ ಜಾಲ ಒಂದು ಮಗುವಿನ ಮಾರಾಟಕ್ಕೆ ಪಡೆಯುವ ಮೊತ್ತ 8ರಿಂದ 15 ಲಕ್ಷ ರೂ. ಈಗ ಬಂಧನಕ್ಕೆ ಒಳಗಾಗಿರುವ ತಂಡವು ಇದುವರೆಗೆ ಸುಮಾರು 60 ಶಿಶುಗಳ ಮಾರಾಟ ಮಾಡಿದ್ದಾಗಿ ತಪ್ಪೊಪ್ಪಿಕೊಂಡಿದೆ.
    ಈ ನಡುವೆ, ಹತ್ತು ಮಕ್ಕಳನ್ನು ಬುಕ್‌ ಮಾಡಿಕೊಂಡ ಪೋಷಕರ ಬಗ್ಗೆಯೂ ಮಾಹಿತಿ ಲಭ್ಯವಾಗಿದೆ. ಉಳಿದವರ ಮಾಹಿತಿ ಪಡೆಯಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ಈಗ ಬಂಧನದಲ್ಲಿರುವ ಎಂಟು ಮಂದಿಯನ್ನು ಕೂಡಾ ತೀವ್ರ ವಿಚಾರಣೆ ಮಾಡಲಾಗುತ್ತಿದೆ.

    child Child Trafficking crime Karnataka News traffic Trending ಆರೋಗ್ಯ ಮದುವೆ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಜನರ ಮನಸ್ಸು ಮತ್ತು ನಾಲಿಗೆ ಬಗ್ಗೆ ಶಿವಕುಮಾರ್ ಗೆ ಈಗ ಗೊತ್ತಾಗುತ್ತಿದೆಯಂತೆ | DK Shivakumar
    Next Article ಪೂಜಾ ಗಾಂಧಿ ಮಂತ್ರ ಮಾಂಗಲ್ಯದ ಮೂಲಕ ಮದುವೆ | Pooja Gandhi
    vartha chakra
    • Website

    Related Posts

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    December 22, 2025

    ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ

    December 21, 2025

    ಕೆ.ಎನ್‌.ರಾಜಣ್ಣ ನನಗೆ ಅತ್ಯಂತ ಆಪ್ತ ಎಂದ ಡಿಸಿಎಂ!

    December 21, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DanielTauth on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • rylonnie shtori na plastikovie okna s elektroprivodom_hqSn on ಬೆಂಗಳೂರಿಗೆ ಎರಡು ಸಾವಿರ ಹೆಚ್ಚುವರಿ ಪೊಲೀಸ್
    • elektrokarniz kypit_wlsl on ಬೆಂಗಳೂರಿಗೆ ಎರಡು ಸಾವಿರ ಹೆಚ್ಚುವರಿ ಪೊಲೀಸ್
    Latest Kannada News

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    December 22, 2025

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    December 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    December 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್.#varthachakra #mallikarjunkharge #siddaramaiah #dkshivakumar
    Subscribe