Bengaluru
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಮತ್ತೆ ಅಧಿಕಾರ ಹಿಡಿಯಲೇಬೇಕು ಎಂಬ ಪಣ ತೊಟ್ಟಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai), ಪ್ರಸಕ್ತ ಸರ್ಕಾರದ ಕೊನೆಯ budget ಮಂಡಿಸಿದ್ದು, ಇದರಲ್ಲಿ ಎಲ್ಲಾ ವರ್ಗ, ಪ್ರದೇಶ ಹಾಗೂ ಸಮುದಾಯದ ಮತದಾರರನ್ನು ಸೆಳೆಯುವತ್ತ ಗಮನ ಹರಿಸಿದ್ದಾರೆ.
ದಾಖಲೆಯ ಒಟ್ಟು 3 ಲಕ್ಷದ 9 ಸಾವಿರದ 182 ಕೋಟಿ ರೂಪಾಯಿಗಳ ಬಜೆಟ್ ಮಂಡಿಸಿದ್ದು, ಶಿಕ್ಷಣ ಇಲಾಖೆ (Education Department) ಗೆ ಅತಿಹೆಚ್ಚಿನ ಅಂದರೆ 37,960 ಕೋಟಿ ರೂಪಾಯಿ ತೆಗೆದಿರಿಸಿದ್ದಾರೆ.
ನಂತರದಲ್ಲಿ ಜಲಸಂಪನ್ಮೂಲ ಇಲಾಖೆ (Water Resources Department) ಗೆ 22,854 ಕೋಟಿ ರೂ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ (Rural Development and Panchayati Raj) ಗೆ 20,494 ಕೋಟಿ ರೂ.,
ನಗರಾಭಿವೃದ್ಧಿ ಇಲಾಖೆಗೆ (Urban Development Department) 17,938 ಕೋಟಿ ರೂ.,
ಕಂದಾಯ ಇಲಾಖೆ (Revenue Department ) ಗೆ 15,943 ಕೋಟಿ ರೂ.,
ಆರೋಗ್ಯ ಮತ್ತು ಕುಟುಂಬ ಕಲ್ಯಾಣ (Health & Family Welfare Department) ಕ್ಕೆ 15,151 ಕೋಟಿ,
ಒಳಾಡಳಿತ ಮತ್ತು ಸಾರಿಗೆ ಇಲಾಖೆ (Transport Department) ಗೆ 14,509 ಕೋಟಿ,
ಇಂಧನ ಇಲಾಖೆ (Energy Department) ಗೆ 13,803 ಕೋಟಿ,
ವಸತಿ (Karnataka Housing Department) ಗೆ 3787.01 ಕೋಟಿ,
ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಗೆ 4,608 ಕೋಟಿ,
ಮಹಿಳಾ ಮತ್ತು ಮಕ್ಕಳ ಕಲ್ಯಾಣ (Department of Women and Child Development) ಕ್ಕೆ 5,676 ಕೋಟಿ
ಕೃಷಿ ಮತ್ತು ತೋಟಗಾರಿಕೆ (Horticulture Department) ಗೆ 9,456 ಕೋಟಿ,
ಲೋಕೋಪಯೋಗಿ ಇಲಾಖೆ (Public Works Department) ಗೆ 10,741 ಕೋಟಿ ಮತ್ತು
ಸಮಾಜಕಲ್ಯಾಣ ಇಲಾಖೆ (Social Welfare Department ) ಗೆ 11,163 ಕೋಟಿ ರೂಪಾಯಿ ಅನುದಾನ ನಿಗದಿ ಪಡಿಸಿದ್ದಾರೆ.
ಹೋಗುತಿದೆ ಹಳೆ ಕಾಲ, ಹೊಸ ಕಾಲ ಬರುತಲಿದೆ. ಬರುತಲಿದೆ ಹೊಸ ದೃಷ್ಟಿ, ಹಳೆಯ ಬಾಳು ಹೋಗುತಲಿದೆ, ಹೊಸ ಬಾಳು ಬರುತಿದೆ ಎಂಬ ಕುವೆಂಪು ಅವರ ಕವನದ ಸಾಲುಗಳನ್ನು ಓದುತ್ತಾ ಬಜೆಟ್ ಭಾಷಣ ಆರಂಭಿಸಿದ ಅವರು, ಹೊಸ ದೃಷ್ಟಿಕೋನದೊಂದಿಗೆ ಈ ಬಜೆಟ್ ಮಂಡಿಸುತ್ತಿದ್ದೇನೆ ಎಂದು ಹೇಳಿದರು. Covid ನಂತರದ ದಿನಗಳಲ್ಲಿ ಭಾರತ ಆರ್ಥಿಕವಾಗಿ ಪುಟಿದೆದ್ದಿದ್ದು, ಕರ್ನಾಟಕವೂ ಅದೇ ಹಾದಿಯಲ್ಲಿ ಸಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದ್ದೇವೆ ಎಂದರು.
ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಿರುವ ಅವರು, ನೂತನ ಕೃಷಿ ನೀತಿಯನ್ನು ಪ್ರಕಟಿಸಿದ್ದಾರೆ. ಇದರನ್ವಯ, ರೈತರಿಗೆ ನೀಡಲಾಗುತ್ತಿದ್ದ 3 ಲಕ್ಷ ರೂಪಾಯಿವರೆಗಿನ ಬಡ್ಡಿ ರಹಿತ ಸಾಲದ ಪ್ರಮಾಣವನ್ನು 5 ಲಕ್ಷ ರೂಪಾಯಿಗೆ ಹೆಚ್ಚಳ ಮಾಡಿದ್ದಾರೆ.
ಕಿಸಾನ್ ಕಾರ್ಡ್ (Kisan Card) ಹೊಂದಿರುವ ರೈತರಿಗೆ ‘ಭೂಸಿರಿ‘ ಎಂಬ ಯೋಜನೆ ಪ್ರಕಟಿಸಿದ್ದು, ಇದರನ್ವಯ ತುರ್ತು ಸಂದರ್ಭದಲ್ಲಿ ರೈತರಿಗೆ ಬೀಜ, ಗೊಬ್ಬರ ವಿತರಣೆಗೆ ಸಾಧ್ಯವಾಗುತ್ತದೆ. ಇದಕ್ಕಾಗಿ 10 ಸಾವಿರ ಕೋಟಿ ರೂಪಾಯಿ ಅನುದಾನ ಒದಗಿಸಿದ್ದಾರೆ.
ಸಣ್ಣ ಮತ್ತು ಅತಿ ಸಣ್ಣ ರೈತರಿಗಾಗಿ 180 ಕೋಟಿ ರೂಪಾಯಿ ವೆಚ್ಚದಲ್ಲಿ ‘ಜೀವನ್ ಜ್ಯೋತಿ ಕಿಸಾನ್‘ ಎಂಬ ಯೋಜನೆ ಘೋಷಿಸಿದ್ದು, ವಸತಿ ರಹಿತ ಮೀನುಗಾರರಿಗೆ ವಿಶೇಷ ಸೌಲಭ್ಯ, ದೋಣಿಗಳಿಗೆ ಮೋಟಾರ್ ಇಂಜಿನ್ ಅಳವಡಿಕೆ, ಮಹಿಳಾ ಕಾರ್ಮಿಕರಿಗೆ 500 ರೂ. ಸಹಾಯಧನ ನೀಡಲಾಗುವುದು, ಶಾಲಾ, ಕಾಲೇಜು ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.
ಆರ್ಥಿಕವಾಗಿ ಹಿಂದುಳಿದವರಿಗೆ ‘ನೆಲೆ‘ ಎಂಬ ವಸತಿ ಯೋಜನೆ ಘೋಷಿಸಲಾಗಿದ್ದು, ಈ ಯೋಜನೆಯಡಿ 10 ಸಾವಿರ ಸೈಟ್ ವಿತರಣೆ ಮಾಡಲಾಗುವುದ. ಪ್ರತಿ ಗ್ರಾ.ಪಂಗೆ 10 ಲಕ್ಷ ರೂ., ಬೆಂಗಳೂರು ಅಭಿವೃದ್ಧಿಗೆ 10 ಸಾವಿರ ಕೋಟಿ ರೂ., ‘ನೇಕಾರ ಸಮ್ಮಾನ್ ಯೋಜನೆ‘ಯಡಿ ಸಹಾಯಧನ ಮೊತ್ತವನ್ನು 3 ಸಾವಿರ ರೂ.ನಿಂದ 5 ಸಾವಿರ ರೂ.ಗೆ ಹೆಚ್ಚಳ ಮಾಡಲಾಗಿದೆ ಎಂದು ಹೇಳಿದ್ದಾರೆ.
ರೈತ ವಿದ್ಯಾನಿಧಿ ಯೋಜನೆ ವಿಸ್ತರಣೆ, ಮೀನುಗಾರರು, ಟ್ಯಾಕ್ಸಿ–ಆಟೋ ಚಾಲಕರ ಮಕ್ಕಳಿಗೂ ಯೋಜನೆ ವಿಸ್ತರಣೆ. ಇದಕ್ಕಾಗಿ ಸದ್ಯ ನೀಡಲಾಗುತ್ತಿರುವ ₹ 725 ಕೋಟಿ ಜೊತೆಗೆ ಹೆಚ್ಚುವರಿಯಾಗಿ ₹ 141 ಕೋಟಿ ಅನುದಾನ ನೀಡಲಾಗುವುದು ಎಂದು ಹೇಳಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯನ್ನು ವಿಭಜಿಸಿ, ಮಕ್ಕಳ ಪೌಷ್ಟಿಕತೆ ಹಾಗೂ ಮಹಿಳೆಯರ ಸಬಲೀಕರಣಕ್ಕೆ ಪ್ರತ್ಯೇಕ ಇಲಾಖೆಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.