ಹುಬ್ಬಳ್ಳಿ.
‘ರಾಜ್ಯದಲ್ಲಿ BJP ಪರವಾದ ಅಲೆ ಬೀಸುತ್ತಿದೆ. ಪ್ರಧಾನಿ ಮತ್ತು ಅಮಿತ್ ಶಾ ಅವರ ಜನಪ್ರಿಯತೆಯಿಂದ Congress ನಾಯಕರಿಗೆ BJP ಸಿಂಹಸ್ವಪ್ನವಾಗಿದೆ. ಇದರಿಂದ ಅವರು ಇಲ್ಲ ಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಪಾದಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಆಗಮನದಿಂದ ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಲಿದ್ದು, ಸ್ಫೂರ್ತಿ ದೊರೆಯಲಿದೆ.ಈ ಹಿಂದೆ ಹಳೆ ಮೈಸೂರು ಭಾಗಕ್ಕೆ ಆಗಮಿಸಿದ್ದ ಅಮಿತ್ ಶಾ ಅವರು, ಇದೀಗ ಕಿತ್ತೂರು ಕರ್ನಾಟಕಕ್ಕೆ ಆಗಮಿಸಿದ್ದು ಮುಂದಿನ ತಿಂಗಳು ಕಲ್ಯಾಣ ಕರ್ನಾಟಕಕ್ಕೆ ಹೋಗಲಿದ್ದಾರೆ’ ಎಂದರು.
‘ರಾಜ್ಯ ಸರಕಾರದ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ, ಶಂಕುಸ್ಥಾಪನೆ ಕೈಗೊಳ್ಳಲಾಗುತ್ತಿದೆ. ಇದಕ್ಕೆ ಪಕ್ಷದ ರಾಷ್ಟ್ರೀಯ ನಾಯಕರನ್ನು ಆಹ್ವಾನಿಸಲಾಗುತ್ತಿದ್ದು, ರಾಷ್ಟ್ರೀಯ ನಾಯಕರು ಬಂದಾಗ ಜನರ ಮೇಲೆ ಪ್ರಭಾವ ಬೀರಲಿದೆ’ ಎಂದು ಹೇಳಿದರು. ‘BJP ಯ ಅಭಿವೃದ್ಧಿ ಕಾರ್ಯಗಳನ್ನು ಕಾಂಗ್ರೆಸ್ ನವರಿಗೆ ಸಹಿಸಿಕೊಳ್ಳಲಾಗುತ್ತಿಲ್ಲ. ಹೀಗಾಗಿ ಸರ್ಕಾರದ ವಿರುದ್ಧ ಇಲ್ಲ ಸಲ್ಲದ ಆರೋಪಗಳನ್ನು ಮಾಡತ್ತಿದ್ದಾರೆ’ ಎಂದು ದೂರಿದರು.