ಬೆಂಗಳೂರು, ಜ. 1- ಮುಂಬರುವ ಲೋಕಸಭಾ Electionಯಲ್ಲಿ ರಾಜ್ಯದಲ್ಲಿ ಕನಿಷ್ಠ 2೦ ಸ್ಥಾನಗಳನ್ನು ಗೆಲ್ಲುವ ಗುರಿ ಹಾಕಿಕೊಂಡಿರುವ ರಾಜ್ಯ ಕಾಂಗ್ರೆಸ್ (Congress) ನಾಯಕರಿಗೆ ತಮ್ಮ ಕಾರ್ಯತಂತ್ರದೊಂದಿಗೆ ದೆಹಲಿಗೆ ಬರುವಂತೆ ಆಹ್ವಾನಿಸಲಾಗಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಚುನಾವಣಾ ಸಿದ್ಧತೆ, ರಣತಂತ್ರಗಳ ಬಗ್ಗೆ ಚರ್ಚೆ ನಡೆಸಲು ಜನವರಿ 4 ರಂದು ಸಭೆ ಆಯೋಜಿಸಿದ್ದು ಅದರಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಸೂಚನೆ ನೀಡಿದ್ದಾರೆ.
ಲೋಕಸಭಾ ಚುನಾವಣೆಗೆ ಭರದ ತಯಾರಿ ನಡೆಸಿರುವ ಕಾಂಗ್ರೆಸ್ (Congress) ಜನವರಿ 15 ರಂದು ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿ,ಚುನಾವಣೆ ರಣತಂತ್ರ ರೂಪಿಸಲು ಸಿದ್ಧತೆ ನಡೆಸಿದೆ ಎಂದು ಗೊತ್ತಾಗಿದೆ.
ಹೀಗಾಗಿ ಸಭೆ ಆಯೋಜಿಸಿದ್ದು ಇದರಲ್ಲಿ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಯಾವೆಲ್ಲಾ ರಣತಂತ್ರಗಳನ್ನು ರೂಪಿಸಬೇಕು, ಯಾವ ಯಾವ ಕ್ಷೇತ್ರಗಳಿಗೆ ಯಾರನ್ನು ಅಭ್ಯರ್ಥಿಯನ್ನಾಗಿಸಬೇಕು ಎಂಬೆಲ್ಲಾ ಬಗ್ಗೆ ಚರ್ಚೆ ನಡೆಸಲಿದ್ದಾರೆ.
ಅಭ್ಯರ್ಥಿಗಳ ಆಯ್ಕೆ ಸಂಬಂಧ ಎಲ್ಲ ಕ್ಷೇತ್ರಗಳ ಉಸ್ತುವಾರಿ ಸಚಿವರುಗಳಿಗೂ ತಮ್ಮ ವ್ಯಾಪ್ತಿಯ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಸಮೀಕ್ಷೆ ನಡೆಸಿ ವರದಿ ನೀಡುವಂತೆ ಕೆಪಿಸಿಸಿ ಈಗಾಗಲೇ ಸೂಚನೆ ನೀಡಿದೆ.
ಅದರಂತೆ ಎರಡು ದಿನಗಳಲ್ಲಿ ಎಲ್ಲ ಸಚಿವರುಗಳು ಅಭ್ಯರ್ಥಿಗಳ ಆಯ್ಕೆ ಬಗ್ಗೆ ವರದಿಯನ್ನು ಕೆಪಿಸಿಸಿಗೆ ಸಲ್ಲಿಸುವರು.ಈ ವರದಿಯೊಂದಿಗೆ ದೆಹಲಿಗೆ ತೆರಳುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಂಭಾವ್ಯ ಅಭ್ಯರ್ಥಿಗಳ ಆಯ್ಕೆ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಸುವರು.