ನವದೆಹಲಿ Sep 4 : ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಪಕ್ಷ ರಾಜಧಾನಿ ದೆಹಲಿಯಲ್ಲಿ ಬೃಹತ್ ಪ್ರತಿಭಟನಾ ರ್‍ಯಾಲಿ ನಡೆಸುವ ಮೂಲಕ ತನ್ನ ಶಕ್ತಿ ಪ್ರದರ್ಶನ ಮಾಡಿತು.
ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಈ ತಿಂಗಳು ನಡೆಯಲಿರುವ ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆಗೆ ಮುನ್ನುಡಿ ಎಂಬಂತೆ ಇಂದು ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ನಡೆದ ಈ ಬೃಹತ್ ರ್‍ಯಾಲಿ ಗಮನ ಸೆಳೆಯಿತು.
ಅಗತ್ಯ ವಸ್ತುಗಳ ಬೆಲೆಯೇರಿಕೆಗೆ ಕಡಿವಾಣ ಹಾಕುವ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದ ಬಿಜೆಪಿ ಯಾವುದೇ ಭರವಸೆ ಈಡೇರಿಸಿಲ್ಲ ಪ್ರಧಾನಿ ಮೋದಿ ಅವರ ಎಂಟು ವರ್ವಗಳ ಆಡಳಿತದಲ್ಲಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿದೆ. ಇದೆಲ್ಲದಕ್ಕೂ ಬರೆ ಹಾಕುವಂತೆ ಅಗತ್ಯ ವಸ್ತುಗಳ ಮೇಲೆ ಜಿಎಸ್‌ಟಿ ಹೇರಲಾಗಿದೆ ಎಂದು ಪ್ರತಿಭಟನಾಕಾರರು ಆಪಾದಿಸಿದರು.
ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ ಈ ಸರ್ಕಾರ ಕೇವಲ ಇಬ್ಬರಿಗಾಗಿ ಇಬ್ಬರಿಗೋಸ್ಕರವೇ ಇರುವ ಸರ್ಕಾರವಾಗಿದೆ ಎಂದು ದೂರಿದರು. ಈ ರ್‍ಯಾಲಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸೇರಿದಂತೆ ಎಲ್ಲ ರಾಜ್ಯಗಳ ಕೆಪಿಸಿಸಿ ಅಧ್ಯಕ್ಷರುಗಳು, ಪ್ರಮುಖ ಮುಖಂಡರುಗಳು ಭಾಗಿಯಾಗಿದ್ದು, ಸಾವಿರಾರು ಜನ ಕಾಂಗ್ರೆಸ್ ಕಾರ್ಯಕರ್ತರು ಈ ರ್‍ಯಾಲಿಯಲ್ಲಿ ಪಾಲ್ಗೊಂಡು ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು
Previous Articleಸರ್ವಜ್ಞನಗರದಲ್ಲಿ ಅಭೂತಪೂರ್ವ ಗಣೇಶೋತ್ಸವ
Next Article ಲೈಂಗಿಕ ಕಿರುಕುಳ ಆರೋಪ – ಸ್ವಾಮೀಜಿ ದುರ್ಮರಣ