ಬೆಂಗಳೂರು, ಜ. 15: ಮುಂಬರುವ ಲೋಕಸಭಾ Electionಯಲ್ಲಿ ಅತ್ಯಧಿಕ ಸ್ಥಾನಗಳಿಸಲು ರಣತಂತ್ರ ರೂಪಿಸುತ್ತಿರುವ ರಾಜ್ಯ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡಿದೆ.
ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಎಲ್ಲಾ ಜಿಲ್ಲಾ ಘಟಕಗಳಿಂದ ವರದಿ ಪಡೆಯಲಾಗಿದ್ದು ಇದೇ ತಿಂಗಳ 19 ರಂದು ಗಂಟೆಗೆ ಬೆಂಗಳೂರಿನಲ್ಲಿ ರಾಜ್ಯದ ಲೋಕಸಭೆ ಚುನಾವಣೆ ಸಮಿತಿ ಸಭೆ ಕರೆಯಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸಭೆಗೆ ದೆಹಲಿಯಿಂದ ವೀಕ್ಷಕರು ಕೂಡ ಆಗಮಿಸಲಿದ್ದು, ಜಿಲ್ಲಾ ಸಚಿವರು ಅಭ್ಯರ್ಥಿ ಆಯ್ಕೆ ವಿಚಾರವಾಗಿ ನೀಡಿರುವ ವರದಿ ಬಗ್ಗೆ ಚರ್ಚೆ ಮಾಡಲಾಗುವುದು. ಆದಷ್ಟು ಬೇಗ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕಿದೆ ಎಂದು ಹೇಳಿದರು.
ಚುನಾವಣೆಗೆ ರಣಕಹಳೆ ಮೊಳಗಿಸುವ ದೃಷ್ಟಿಯಿಂದ ವಿವಿಧ ಸಮಾವೇಶಗಳನ್ನು ಆಯೋಜಿಸಲಾಗುತ್ತಿದ್ದು ಜನವರಿ 21 ರಂದು ಮಂಗಳೂರಲ್ಲಿ ರಾಜ್ಯಮಟ್ಟದ ಕಾರ್ಯಕರ್ತರ ಸಭೆ ನಡೆಯಲಿದೆ ನಡೆಯಲಿದೆ. ಎಐಸಿಸಿ ಅಧ್ಯಕ್ಷರು ಈ ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದರು
ಯಾವ ಕ್ಷಣದಲ್ಲಿ ಬೇಕಾದರೂ ನಿಗಮ, ಮಂಡಳಿ ಆಯ್ಕೆ ಪಟ್ಟಿ ಪ್ರಕಟವಾಗಬಹುದು. ಈ ಪಟ್ಟಿ ಮುಂದೂಡುವ ಸಾಧ್ಯತೆ ಇಲ್ಲ. ಚುನಾವಣೆ ಸಮಯದಲ್ಲಿ ನಾವು ಯಾರಿಗೆ ಮಾತು ಕೊಟ್ಟಿದ್ದೆವೋ ಅವರಿಗೆ ಸ್ಥಾನಮಾನ ನೀಡಲಾಗುತ್ತದೆ” ಎಂದು ತಿಳಿಸಿದರು.
ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ಅವರ ವಿವಾದಾತ್ಮಕ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, “ಮಾನಸಿಕ ಸ್ಥಿಮಿತ ಇರುವವರು ಈ ರೀತಿ ಮಾತನಾಡುವುದಿಲ್ಲ. ಅವರ ಮಾತು ತಪ್ಪು ಎಂದು ಅವರ ನಾಯಕರುಗಳಿಗೆ ಅರ್ಥವಾಗಿರುವುದು ಉತ್ತಮ ಬೆಳವಣಿಗೆ. ಅನಂತ ಕುಮಾರ್ ಹೆಗಡೆ ಅವರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಲಿ” ಎಂದು ತಿಳಿಸಿದರು.
3 Comments
Айтек multimedijnyj-integrator.ru .
наркологическая помощь москва http://skoraya-narkologicheskaya-pomoshch11.ru/ .
Профессиональный сервисный центр по ремонту бытовой техники с выездом на дом.
Мы предлагаем:ремонт бытовой техники в мск
Наши мастера оперативно устранят неисправности вашего устройства в сервисе или с выездом на дом!