Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸೋನಿಯಾ ಗಾಂಧಿ ನಿಲುವಿಗೆ ವಿರುದ್ಧವಾ ಕಾಂಗ್ರೆಸ್ ಸರ್ಕಾರ? | Sonia Gandhi
    ಸುದ್ದಿ

    ಸೋನಿಯಾ ಗಾಂಧಿ ನಿಲುವಿಗೆ ವಿರುದ್ಧವಾ ಕಾಂಗ್ರೆಸ್ ಸರ್ಕಾರ? | Sonia Gandhi

    vartha chakraBy vartha chakraNovember 30, 202327 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ನ.30- ಕಾಂಗ್ರೆಸ್ ‌ಹಿರಿಯ ನಾಯಕಿ ಸೋನಿಯಾ ಗಾಂಧಿ (Sonia Gandhi) ಅವರದ್ದು ಒಂದು ನಿಲುವಾದರೆ,ರಾಜ್ಯದ ಕಾಂಗ್ರೆಸ್ ನೇತೃತ್ವದ ಸರ್ಕಾರದ್ದೇ ಮತ್ತೊಂದು ನಿಲುವು. ಸೋನಿಯಾ ಅವರು ಪ್ಯಾಲೆಸ್ತೀನ್ ರ ಪರವಾಗಿ ಧ್ವನಿ ಎತ್ತಿ ಲೇಖನ ಬರೆದಿದ್ದಾರೆ. ಹಿಂಸಾಚಾರದಿಂದ ನಲುಗಿದ ಪ್ಯಾಲೆಸ್ತೀನ್ ಜನರ ಪರವಾಗಿ ನಿಂತಿದ್ದಾರೆ.
    ಆದರೆ,ಕರ್ನಾಟಕ ಸರ್ಕಾರ ಪ್ಯಾಲೆಸ್ತೀನ್ ಪರವಾಗಿ ಧ್ವನಿ ಎತ್ತಲು ಅವಕಾಶ ನೀಡುತ್ತಿಲ್ಲ ಎಂದು ಆರೋಪಿಸಲಾಗುತ್ತಿದೆ.
    ಇಸ್ರೇಲ್ ದಾಳಿಯಿಂದ ಪ್ಯಾಲೆಸ್ತೀನ್‌ನಲ್ಲಿ ಉಂಟಾಗಿರುವ ಮಾನವೀಯ ಬಿಕ್ಕಟ್ಟಿನ ಕುರಿತು ಜೆ.ಪಿ.ನಗರದಲ್ಲಿ ಪ್ರಗತಿಪರರು ಆಯೋಜಿಸಿದ್ದ ಕಾರ್ಯಕ್ರಮಕ್ಕೆ ನಗರದ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ.

    ಜೆಪಿ ನಗರದ ರಂಗಶಂಕರದಲ್ಲಿ ಗಾಯಕಿ ಎಂ.ಡಿ.ಪಲ್ಲವಿ ಸೇರಿದಂತೆ ಹಲವರ ನೇತೃತ್ವದಲ್ಲಿ ಪ್ಯಾಲೇಸ್ತೀನ್ ಪರ ಕಿರು ನಾಟಕ, ಕವನ ವಾಚನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ.
    ಭದ್ರತಾ ದೃಷ್ಟಿಯಿಂದ ದಕ್ಷಿಣ ವಿಭಾಗದ ಪೊಲೀಸರು ಕೊನೆಯ ಕ್ಷಣದಲ್ಲಿ ಕಾರ್ಯಕ್ರಮ ರದ್ದುಗೊಳಿಸುವಂತೆ ಸಂಘಟಕರಿಗೆ ಸೂಚಿಸಿದ್ದಾರೆ.ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಿರುವ ಹಿನ್ನೆಲೆಯಲ್ಲಿ ಕಲಾವಿದ ರಮಣೀಕ್ ಸಿಂಗ್ ಅವರು ಪೊಲೀಸರ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ.

    ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಖ್ಯಾತ ರಂಗಭೂಮಿ ಕಲಾವಿದರಾದ ಪಲ್ಲವಿ ಎಂ.ಡಿ ಮತ್ತು ಶ್ವೇತಾಂಶು ಬೋರಾ ಜೊತೆ ನಾವು ಕವಿತೆಗಳನ್ನು ಓದಲು ನಿರ್ಧರಿಸಿದ್ದೆವು. ಈ ಕಾರ್ಯಕ್ರಮವನ್ನು ರದ್ದುಗೊಳಿಸುವಂತೆ ರಂಗಶಂಕರದಂತಹ ಸಂಸ್ಥೆಯನ್ನು ಬೆದರಿಸುವ ಮೂಲಕ ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಪ್ರಜಾಪ್ರಭುತ್ವದ ಮೇಲಿನ ತನ್ನ ಬದ್ಧತೆ ಕೊರತೆಯನ್ನು ಮತ್ತೊಮ್ಮೆ ತೋರಿಸಿದೆ, ಪ್ಯಾಲೇಸ್ತೀನ್ ಜೊತೆ ಒಗ್ಗಟ್ಟು ಪ್ರದರ್ಶಿಸಿ ಒಂದು ಸಣ್ಣ ನಾಟಕ ಮಾಡಲು ಮತ್ತು ಕವನ ವಾಚಿಸಲು ನಾವು ನಿರ್ಧಿಸಿದ್ದೆವು. ನಮ್ಮದು ಒಳಾಂಗಣ ಕಾರ್ಯಕ್ರಮವಾಗಿದೆ. ಇದಕ್ಕೆ ಪೊಲೀಸರ ಅನುಮತಿ ಪಡೆಯುವ ಅಗತ್ಯ ಇಲ್ಲ. ಆದರೂ, ಪೊಲೀಸರು ನಮ್ಮ ಕಾರ್ಯಕ್ರಮದ ಸಂಪೂರ್ಣ ಮಾಹಿತಿ, ಕಲಾವಿದರ ವಿವರಗಳು ಮತ್ತು ಆಧಾರ್ ಕಾರ್ಡ್ ಪ್ರತಿಗಳನ್ನು ಕೇಳಿದ್ದರು. ನಾವು ಆಧಾರ್ ಕಾರ್ಡ್ ಪ್ರತಿಗಳನ್ನು ಹೊರತುಪಡಿಸಿ ಉಳಿದೆಲ್ಲವನ್ನೂ ಒದಗಿಸಿದ್ದೇವೆ. ಆದರೆ, ಅವರು ರಂಗಶಂಕರದ ಮೇಲೆ ಒತ್ತಡ ಹೇರಿದ್ದಾರೆ.

     

    ಪರಿಣಾಮ ಕೊನೆ ಗಳಿಗೆಯಲ್ಲಿ ಕಾರ್ಯಕ್ರಮ ರದ್ದುಗೊಳಿಸಲಾಗಿದೆ, ಪೊಲೀಸರು ಒತ್ತಡ ಹೇರಿದ ಕಾರಣ ಕಾರ್ಯಕ್ರಮ ರದ್ದಾಗಿದೆ. ಆದರೆ, ಒಂದಂತು ತಿಳಿದುಕೊಳ್ಳಿ, ಇದು ಒಳಾಂಗಣ ಕಾರ್ಯಕ್ರಮ ಪೊಲೀಸರ ಅನುಮತಿ ಅಗತ್ಯವಿಲ್ಲ. ಬೆಂಗಳೂರು ಪೊಲೀಸರು ಮತ್ತು ಕರ್ನಾಟಕ ಸರ್ಕಾರಕ್ಕೆ ನಾಚಿಕೆಯಾಗಬೇಕು. ದಯವಿಟ್ಟು ಇದನ್ನು ವ್ಯಾಪಕವಾಗಿ ಪ್ರಚಾರ ಮಾಡಿ. ಪ್ರೇಕ್ಷಕರನ್ನು ಸೇರಿಸಲು ನಮಗೆ ಸಹಾಯ ಮಾಡಿ. ನಾವು ಪ್ಯಾಲೇಸ್ತೀನ್ ಬಗ್ಗೆ ಕವನ ಓದುತ್ತೇವೆ. ಕಿರು ನಾಟಕ ಪ್ರದರ್ಶನ ಮಾಡುತ್ತೇವೆ ಎಂದು ಬರೆದುಕೊಂಡಿದ್ದಾರೆ.

    Verbattle
    Verbattle
    Verbattle
    NIA sonia gandhi ಕಾಂಗ್ರೆಸ್
    Share. Facebook Twitter Pinterest LinkedIn Tumblr Email WhatsApp
    Previous Articleಅಕ್ರಮ ಕಟ್ಟಡ ಸಕ್ರಮಕ್ಕೆ ಸಿದ್ಧತೆ | Akrama Sakrama
    Next Article ಆಸ್ತಿ ವಿವರ ಸಲ್ಲಿಸಲು ಶಾಸಕ, ಸಚಿವರು ರೆಡಿ ಇಲ್ಲ | Karnataka Lokayukta
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on Drugs peddler ಗಳ ಜೊತೆ ಇದ್ದ ಪೊಲೀಸರು.
    • Glennhof on ಮತ್ತೊಂದು ಆರೋಪದಲ್ಲಿ ಸಿಲುಕಿದ ಶರಣರು
    • LinwoodGah on ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.