ಬೆಂಗಳೂರು, ಅ.16:
ಚುನಾವಣಾ ಆಯೋಗ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ದಿನಾಂಕ ಘೋಷಿಸಿದ್ದು, ಉಪಚುನಾವಣೆ ಸೇರಿದಂತೆ ಎಲ್ಲಾ ಚುನಾವಣೆಗೂ ಕಾಂಗ್ರೆಸ್ ಪಕ್ಷ ಸಜ್ಜಾಗಿದ್ದು, ಮೂರು ಕ್ಷೇತ್ರಗಳಲ್ಲೂ ನಾವು ಗೆದ್ದೇ ಗೆಲ್ಲುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿಶ್ವಾಸ ವ್ಯಕ್ತಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಉಪಚುನಾವಣೆಗೆ ಆಯೋಗ ದಿನಾಂಕ ಘೋಷಣೆ ಮಾಡಿರುವುದನ್ನು ನಾನು ಸ್ವಾಗತಿಸುತ್ತೇನೆ. ಈ ಕ್ಷೇತ್ರಗಳಲ್ಲಿ ಶಾಸಕ ಸ್ಥಾನ ಖಾಲಿಯಾದಾಗಿನಿಂದಲೇ ನಮ್ಮ ತಯಾರಿ ಆರಂಭವಾಗಿದೆ. ನಮ್ಮ ಕೆಲಸ ನಾವು ಮಾಡುತ್ತಿದ್ದೇವೆ” ಎಂದು ತಿಳಿಸಿದರು.
ಈ ಚುನಾವಣೆಗಳಲ್ಲಿ ನಾವೇ ಅಭ್ಯರ್ಥಿಗಳು” ಎಂದು ತಿಳಿಸಿದ ಅವರು ಚನ್ನಪಟ್ಟಣದಲ್ಲಿ ಯೋಗೇಶ್ವರ್ ಬಂಡಾಯ ಎದ್ದಿರುವ ಬಗ್ಗೆ ಕೇಳಿದಾಗ, “ಈ ವಿಚಾರವಾಗಿ ನಾನು ಮಾಧ್ಯಮಗಳ ಮಾತನ್ನು ಕೇಳುವುದಿಲ್ಲ. ಅವರ ಪಕ್ಷಗಳಿಂದ ಅಭ್ಯರ್ಥಿ ಅಂತಿಮ ಆಯ್ಕೆಯಾಗಲಿ. ಅವರು ಕೈಗೊಳ್ಳುವ ನಿರ್ಧಾರದ ಬಗ್ಗೆ ಅಧಿಕೃತವಾಗಿ ಪ್ರಕಟಿಸಲಿ, ಆಗ ನಾನು ಅದನ್ನು ನಂಬುತ್ತೇನೆ” ಎಂದು ತಿಳಿಸಿದರು.
Previous Articleಮುನಿರತ್ನ ಅವರಿಗೆ ಜಾಮೀನು.
Next Article ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರಿಗೌಡ ರಾಜೀನಾಮೆ.


1 Comment
Кто-нибудь брал ипотеку под новостройку? Здесь работают с банками, но какие условия?