ಬೆಂಗಳೂರು, ಫೆ.8 – ಲೋಕಸಭೆ Election ಸನ್ನಿಹಿತವಾಗುತ್ತಿರುವ ಬೆನ್ನೆಲ್ಲೇ ರಾಜ್ಯ ಕಾಂಗ್ರೆಸ್ ನಲ್ಲಿ (Congress) ವಿದ್ಯಮಾನಗಳು ಬಿರುಸಿನಿಂದ ನಡೆಯುತ್ತಿವೆ. ಅಭ್ಯರ್ಥಿಗಳ ಆಯ್ಕೆ ಸೇರಿದಂತೆ ಹಲವಾರು ವಿಷಯಗಳಲ್ಲಿ ಪಕ್ಷದ ನಾಯಕತ್ವ ತಮ್ಮ ಅಭಿಪ್ರಾಯ ಕೇಳಬೇಕು ಎಂದು ಪರಿಶುದ್ಧ ಜಾತಿ ಮತ್ತು ವರ್ಗದ ಸಚಿವರು ಹೈಕಮಾಂಡ್ ಮೇಲೆ ಒತ್ತಡ ಹೇರಲು ತೀರ್ಮಾನಿಸಿದ್ದಾರೆ.
ಆಹಾರ ಸಚಿವ ಕೆಎಚ್ ಮುನಿಯಪ್ಪ ನಿವಾಸದಲ್ಲಿ ಉಪಹಾರಕೂಟ ನಡೆಸಿದ ಈ ವರ್ಗಕ್ಕೆ ಸೇರಿದ ಸಚಿವರಾದ ಸತೀಶ್ ಜಾರಕಿಹೊಳಿ ಜಿ ಪರಮೇಶ್ವರ್ ಎಚ್ಎಸ್ಸಿ ಮಹಾದೇವಪ್ಪ ಸೇರಿದಂತೆ ಹಲವರು ಹೈಕಮಾಂಡ್ ಏಕ ಪಕ್ಷಿಯ ತೀರ್ಮಾನ ಕೈಗೊಳ್ಳಬಾರದು ಆಗ್ರಹ ಮಂಡಿಸಲು ನಿರ್ಧರಿಸಿದ್ದಾರೆ.
ಸದ್ಯ ನಡೆಯುತ್ತಿರುವ ರಾಜ್ಯಸಭೆ ಚುನಾವಣೆ ಮತ್ತು ಮುಂಬರುವ ಲೋಕಸಭೆ ಚುನಾವಣೆ ಸಮಯದಲ್ಲಿ ಅಭ್ಯರ್ಥಿ ಆಯ್ಕೆ ವಿಚಾರಕ್ಕೆ ಬಂದಾಗ ತಮ್ಮ ಅಭಿಪ್ರಾಯಕ್ಕೆ ಮನ್ನಣೆ ನೀಡಬೇಕು ಜಿಲ್ಲಾ ಉಸ್ತುವಾರಿ ಮಂತ್ರಿಗಳಾಗಿ ಪಕ್ಷದ ವಿವಿಧ ಹುದ್ದೆಗಳನ್ನು ನಿಭಾಯಿಸಿರುವ ತಮ್ಮ ಅಭಿಪ್ರಾಯಗಳಿಗೆ ಮಾನ್ಯತೆ ನೀಡಬೇಕು ಎಂದು ವರಿಷ್ಠರ ಮೇಲೆ ಒತ್ತಡ ಹೇರಲು ನಿರ್ಧರಿಸಿದ್ದಾರೆ.
ಕಳೆದ ವಿಧಾನಸಭೆ ಚುನಾವಣೆ ಯಲ್ಲಿ ಪರಿಶಿಷ್ಟ ಜಾತಿ ಮತ್ತು ವರ್ಗಕ್ಕೆ ಸೇರಿದ ಮತದಾರರು ಹೆಚ್ಚಿನ ಪ್ರಮಾಣದಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದಾರೆ ಈ ಹಿಂದೆಯಲ್ಲಿ ಸದ್ಯ ನಡೆಯುತ್ತಿರುವ ರಾಜ್ಯಸಭೆ ಚುನಾವಣೆಯಲ್ಲಿ ಈ ಸಮುದಾಯಕ್ಕೆ ಸೇರಿದವರಿಗೆ ಒಂದು ಸ್ಥಾನ ನೀಡಬೇಕು ಅದೇ ರೀತಿ ಪಕ್ಷದಲ್ಲಿ ಅತ್ಯಂತ ಹಿರಿಯರಾಗಿರುವ ಬಿ ಎಲ್ ಶಂಕರ್ ಮತ್ತು ತೀರಾ ಹಿಂದುಳಿದ ಸಮುದಾಯಕ್ಕೆ ಸೇರಿದ ಎಂಸಿ ವೇಣುಗೋಪಾಲ್ ಅವರಿಗೆ ಅವಕಾಶ ನೀಡಬೇಕು ಎಂದು ಹೈಕಮಾಂಡ್ ಮೇಲೆ ಒತ್ತಡ ಹೇರಲು ತೀರ್ಮಾನಿಸಿರುವುದಾಗಿ ಮೂಲಗಳು ತಿಳಿಸಿವೆ.
ಪರಿಶಿಷ್ಟ ವರ್ಗಕ್ಕೆ ಸೇರಿದ ರಾಯಚೂರು ಮತ್ತು ಬಳ್ಳಾರಿ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಮಾತ್ರವಲ್ಲದೆ ಬೆಳಗಾವಿ ಮತ್ತು ಚಿಕ್ಕೋಡಿ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಸತೀಶ್ ಜಾರಕಿಹೊಳಿ ಅವರ ಅಭಿಪ್ರಾಯ ಅಂತಿಮವಾಗಬೇಕು ಎಂದು ಒತ್ತಡ ಹೇರಲು ನಿರ್ಧರಿಸಿರುವುದಾಗಿ ಮೂಲಗಳು ತಿಳಿಸಿವೆ.
ಅದೇ ರೀತಿಯಲ್ಲಿ ಚಾಮರಾಜನಗರ ಕ್ಷೇತ್ರಕ್ಕೆ ಬಂದಾಗ ಮಹಾದೇವಪ್ಪ ಅವರ ಮಾತು ಅಂತಿಮವಾಗಬೇಕು ತುಮಕೂರು ಕೋಲಾರ ಚಿತ್ರದುರ್ಗ ಮತ್ತು ವಿಜಯಪುರ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ವಿಚಾರಕ್ಕೆ ಬಂದಾಗ ಪರಮೇಶ್ವರ್ ಮುನಿಯಪ್ಪ ಮತ್ತು ಆರ್ ಬಿ ತಿಮ್ಮಾಪುರ ಅವರ ಮಾತುಗಳಿಗೆ ಮಾನ್ಯತೆ ನೀಡಬೇಕು ಎಂದು ವರಿಷ್ಠರ ಮೇಲೆ ಒತ್ತಡ ಹೇರಲು ತೀರ್ಮಾನಿಸಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಸ್ಥಳೀಯ ಘಟಕಗಳು ಮತ್ತು ಉಸ್ತುವಾರಿ ಸಚಿವರ ಅಭಿಪ್ರಾಯ ಆಲಿಸಲಾಗಿದೆ ಎಂದು ಹೇಳಿ ಪ್ರದೇಶ ಕಾಂಗ್ರೆಸ್ ಈ ಕ್ಷೇತ್ರಗಳಿಗೆ ಕೆಲವು ಸಂಭಾವ್ಯ ಅಭ್ಯರ್ಥಿಗಳ ಹೆಸರನ್ನು ಪಟ್ಟಿಮಾಡಿದೆ. ಆದರೆ ಇದರಲ್ಲಿ ತಮ್ಮ ಅಭಿಪ್ರಾಯಗಳಿಗೆ ಸಣ್ಣ ಮಾನ್ಯತೆಯು ಇಲ್ಲವಾಗಿದೆ ಎಂದು ಸಭೆಯಲ್ಲಿ ಪಾಲ್ಗೊಂಡಿದ್ದ ನಾಯಕರು ಅಸಮಾಧಾನ ಹೊರಹಾಕಿದ್ದು ಈ ಕುರಿತಂತೆ ಸದ್ಯದಲ್ಲೇ ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡುವುದು ಸೂಕ್ತ ಎಂಬ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಗೊತ್ತಾಗಿದೆ.