ಬೆಂಗಳೂರು, ಜ.20: ಅಯೋಧ್ಯೆಯ ಶ್ರೀರಾಮಮಂದಿರದಲ್ಲಿ ಸೋಮವಾರ ಬಾಲರಾಮನ ವಿಗ್ರಹ ಪ್ರಾಣಪ್ರತಿಷ್ಠೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಕಿಡಿಗೇಡಿಗಳು ಕೋಮುಗಲಭೆಗೆ ಸಂಚು ನಡೆಸಿದ್ದಾರೆ ಎಂದು ಗುಪ್ತದಳ ಎಚ್ಚರಿಕೆ ಸಂದೇಶ ರವಾನಿಸಿದೆ.
ರಾಮ ಮಂದಿರ ಲೋಕಾರ್ಪಣೆ ಸಮಯದಲ್ಲಿ ಹಾಗೂ ನಂತರದಲ್ಲೂ ಕೆಲವು ಕಡೆ ಅಶಾಂತಿ ಮೂಡಿಸಲು ಪ್ರಯತ್ನ ನಡೆದಿದ್ದು ವ್ಯಾಪಕ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸಲಹೆ ಮಾಡಿದೆ.
ಪ್ರಮುಖವಾಗಿ ಕರಾವಳಿ ಜಿಲ್ಲೆಗಳು,ಬೆಳಗಾವಿ, ಹುಬ್ಬಳ್ಳಿ– ಧಾರವಾಡ,ಶಿವಮೊಗ್ಗ, ಚಿಕ್ಕಮಗಳೂರು,
ಮಂಡ್ಯ ರಾಮನಗರ, ಚಿಕ್ಕಬಳ್ಳಾಪುರ ಸೇರಿದಂತೆ ಕೆಲವು ಸೂಕ್ಷ್ಮ ಪ್ರದೇಶಗಳಲ್ಲಿ ವ್ಯಾಪಕ ಬಂದೋಬಸ್ತ್ ಮಾಡುವಂತೆ ಕೇಂದ್ರ ಗುಪ್ತದಳ ರಾಜ್ಯ ಸರ್ಕಾರಕ್ಕೆ ಸೂಚಿಸಿರುವುದಾಗಿ ಗೊತ್ತಾಗಿದೆ
ಗುಪ್ತಚರ ಸಂಸ್ಥೆಯ ಎಚ್ಚರಿಕೆ ಸಂದೇಶದ ಬೆನ್ನಲ್ಲೇ ಸಕ್ರಿಯವಾಗಿರುವ ರಾಜ್ಯ ಪೊಲೀಸರು, ಈ ಹಿಂದೆ ರಾಜ್ಯದ ವಿವಿಧೆಡೆ ನಡೆದ ಕೋಮಗಲಭೆಗಳಲ್ಲಿ ಬಾಗಿಯಾಗಿದ್ದವರು,ರೌಡಿ ಪಟ್ಟಿಯಲ್ಲಿರುವ ಅನೇಕರನ್ನು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ಪಡೆಯತೊಡಗಿದ್ದಾರೆ.ಇನ್ನೂ ಕೆಲವರ ಚಲನವಲನಗಳ ಮೇಲೆ ತೀವ್ರ ನಿಗಾವಹಿಸಿದ್ದಾರೆ.
ಮುಂಜಾಗ್ರತಾ ಕ್ರಮವಾಗಿ ರಾಜ್ಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳು,ಪಟ್ಟಣಗಳ ಸೂಕ್ಷ್ಮ, ಅತಿಸೂಕ್ಷ್ಮ ಪ್ರದೇಶಗಳು,ಪ್ರಾರ್ಥನಾ ಮಂದಿರಗಳ ಬಳಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.
ಪರಿಸ್ಥಿತಿಯ ಮೇಲೆ ಹಿರಿಯ ಪೊಲೀಸ್ ಅಧಿಕಾರಿಗಳು ನಿಗಾ ವಹಿಸಿದ್ದಾರೆ.
ಈ ಹಿಂದಿನ ಕೋಮುಗಲಭೆಗಳ ಬಗ್ಗೆ ಮಾಹಿತಿ ಪಡೆದಿರುವ ಪೊಲೀಸರು, ಅಂತಹ ಗಲಭೆಗಳಲ್ಲಿ ಭಾಗಿಯಾಗಿದ್ದವರ ಮೇಲೂ ಹದ್ದಿನ ಕಣ್ಣು ಇಡಲಾಗಿದೆ. ಜೊತೆಗೆ ಆಯಾ ಪೊಲೀಸ್ ಠಾಣೆಗಳ ರೌಡಿಶೀಟರ್‌ಗಳು ಹಳೆಯ ಆರೋಪಿಗಳು,ಸಮಾಜದ ಸ್ವಾಥ್ಯ ಕದಡುವ ವ್ಯಕ್ತಿಗಳ ಚಟುವಟಿಕೆಗಳ ಮೇಲೆ ನಿಗಾ ವಹಿಸಲಾಗಿದೆ.
ಅಲ್ಲದೇ ಎಲ್ಲಾ ಠಾಣೆಗಳ ವ್ಯಾಪ್ತಿಯಲ್ಲಿ ಇನ್ಸ್‌ಪೆಕ್ಟರ್‌ಗಳು ಎಲ್ಲಾ ಧರ್ಮಗಳ ಮುಖಂಡರನ್ನು ಕರೆಸಿ ಶಾಂತಿಪಾಲನಾ ಸಭೆ ನಡೆಸಿ ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ತಮ್ಮ ಸಮುದಾಯದ ಮುಖಂಡರಿಗೆ ಸಲಹೆ ನೀಡಿ, ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸುವವರ ಬಗ್ಗೆ ಮಾಹಿತಿ ನೀಡಲು ತಿಳಿಸುವಂತೆ ಹಿರಿಯ ಅಧಿಕಾರಿಗಳು ಸೂಚಸಿದ್ದಾರೆ.
2 Comments
лучшие онлайн казино лучшие онлайн казино .
купить семена в россии http://semenaplus74.ru .