ಬೆಂಗಳೂರು: ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವುದರಿಂದ ರಾಜ್ಯದ ಸಾರ್ವಜನಿಕ ಪ್ರದೇಶದಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲು ಮಾರ್ಷಲ್‌ಗಳು ಅಥವ ಪೊಲೀಸ್ ಸಿಬ್ಬಂದಿ ನೆರವು ಪಡೆಯುವಂತೆ ಜಿಲ್ಲಾಡಳಿತಗಳಿಗೆ ಸೂಚಿಸಿ ಆರೋಗ್ಯ ಇಲಾಖೆ ಶುಕ್ರವಾರ ಸುತ್ತೋಲೆ ಹೊರಡಿಸಿದೆ.
ಶಾಪಿಂಗ್ ಮಾಲ್‌ಗಳು, ರೆಸ್ಟೊರೆಂಟ್‌ಗಳು, ಪಬ್‌ಗಳು, ಹೋಟೆಲ್‌ಗಳು, ಶೈಕ್ಷಣಿಕ ಸಂಸ್ಥೆಗಳು, ಹಾಸ್ಟೆಲ್‌ಗಳು, ಕಚೇರಿಗಳು, ಕಾರ್ಖಾನೆ ಇತ್ಯಾದಿ ಪ್ರದೇಶಗಳಲ್ಲಿ ಸಿಬ್ಬಂದಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಬೇಕು. ಮಾಸ್ಕ್ ಧರಿಸಿದ್ದರೆ ಮಾತ್ರವೇ ಪ್ರವೇಶ ಕಲ್ಪಿಸುವುದು ಆಯಾ ಸಂಸ್ಥೆಯ ಮಾಲೀಕರು, ಆಡಳಿತ ಮಂಡಳಿಗಳ ಜವಾಬ್ದಾರಿಯಾಗಿದೆ ಎಂದು ಆರೋಗ್ಯ ಇಲಾಖೆ ಆಯುಕ್ತ ಡಿ. ರಂದೀಪ್ ಸೂಚಿಸಿದ್ದಾರೆ.
ಸ್ವಂತ ವಾಹನಗಳು ಹಾಗು ಸಾರ್ವಜನಿಕ ಸಾರಿಗೆ ವಾಹನಗಳಲ್ಲಿ (ಬಸ್ ಹಾಗೂ ರೈಲು) ಪ್ರಯಾಣಿಸುವ ಸಂದರ್ಭಗಳಲ್ಲೂ ನಾಗರಿಕರು ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ ಎಂದು ಹೇಳಿದ್ದಾರೆ.
ವಿಷಮ ಶೀತ ಜ್ವರ ಮತ್ತು ತೀವ್ರ ಉಸಿರಾಟದ ತೊಂದರೆ ಲಕ್ಷಣ ಹೊಂದಿದವರು ಹಾಗು ಇತರ ಆರೋಗ್ಯ ಸಮಸ್ಯೆಗಳಿರುವವರು ಪರೀಕ್ಷೆಗೆ ಒಳಗಾಗಬೇಕು. ಪರೀಕ್ಷಾ ಫಲಿತಾಂಶ ಲಭ್ಯವಾಗುವವರೆಗೆ ಮನೆಯಲ್ಲಿ ಪ್ರತ್ಯೇಕವಾಗಿರಬೇಕು ಎಂದು ಸಲಹೆ ನೀಡಿದ್ದಾರೆ.
ಕೊರೋನಾ ಸೋಂಕು ಹೆಚ್ಚಳ: ಮಾಸ್ಕ್ ಕಡ್ಡಾಯಗೊಳಿಸಿ ಸರ್ಕಾರ ಆದೇಶ
Previous Articleಪ್ರಾಣಿಗಳಿಗೂ ಬಂತು ಸ್ವದೇಶಿ ನಿರ್ಮಿತ ಕೋವಿಡ್ ಲಸಿಕೆ
Next Article ಹಿಂಸಾಚಾರ ನಡೆಯದಂತೆ ಕಟ್ಟೆಚ್ಚರ ವಹಿಸಲು ಸೂಚನೆ- ಸಿಎಂ