ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 11,793 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ.
ಕಳೆದ 24 ಗಂಟೆಗಳಲ್ಲಿ 27 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 9486 ಮಂದಿ ಕೊರೋನಾದಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಸೋಮವಾರದಂದು 17,073 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದವು. 21 ಮಂದಿ ಸಾವನ್ನಪ್ಪಿದ್ದರು.
ದೇಶದಲ್ಲಿ ಪ್ರಸ್ತುತ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 96,700ಕ್ಕೆ ಏರಿಕೆ ಕಂಡಿದೆ. ಹಾಗೂ ಒಟ್ಟು ಕೋವಿಡ್ ಸಾವಿನ ಸಂಖ್ಯೆ 5,25,047 ಕ್ಕೆ ತಲುಪಿದೆ.
Previous Articleಅನುಶ್ರೀಗೆ ಜಾಕೆಟ್ ಗಿಫ್ಟ್ ಮಾಡಿದ ಶಿವಣ್ಣ !
Next Article ಕೊಡಗಿನಲ್ಲಿ ಮತ್ತೆ ಭೂಕಂಪ: ಜನರಲ್ಲಿ ಹೆಚ್ಚಿದ ಆತಂಕ