ಬೆಂಗಳೂರು,ಜೂ.6- ರಾಜ್ಯದಲ್ಲಿ ಸಾಂಕ್ರಾಮಿಕ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ ಸರ್ಕಾರ ಇದನ್ನು ನಿಯಂತ್ರಿಸಲು ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದೆ. ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ನಾಲ್ಕೈದು ದಿನಗಳಿಂದ ಪ್ರಕರಣಗಳ ಸಂಖ್ಯೆ ಕೊಂಚ ಏರುಮುಖವಾಗಿದೆ. ಹಾಗೆಂದ ಮಾತ್ರಕ್ಕೆ ನಾಲ್ಕನೇ ಅಲೆ ಬಂದಿದೆ ಎಂದಲ್ಲ, ಆದರೂ ಸರ್ಕಾರ ನಿಯಂತ್ರಿಸಲು ಮುಂಜಾಗ್ರತಾ ಕ್ರಮ ತೆಗೆದುಕೊಂಡಿದೆ. ಯಾವುದೇ ರೀತಿಯ ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಮನವಿ ಮಾಡಿದರು.
ಈ ಕುರಿತಂತೆ ಕೇಂದ್ರ ಸರ್ಕಾರ ಕಾಲದಿಂದ ಕಾಲಕ್ಕೆ ನೀಡುತ್ತಿರುವ ಮಾರ್ಗಸೂಚಿಗಳನ್ನು ರಾಜ್ಯ ಸರ್ಕಾರ ಚಾಚುತಪ್ಪದೆ ಪಾಲನೆ ಮಾಡಿದೆ. ರಾಜ್ಯದಲ್ಲಿ ಆತಂಕಪಡುವ ಪರಿಸ್ಥಿತಿ ನಿರ್ಮಾಣವಾಗಿಲ್ಲ ಎಂದು ಹೇಳಿದರು.
ಸದ್ಯ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿರುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯದರ್ಶಿಗಳು ಸಭೆ ನಡೆಸಿ ನನಗೆ ವರದಿ ನೀಡಲಿದ್ದಾರೆ. ಬಳಿಕ ಸಂಬಂಧಪಟ್ಟ ಇಲಾಖೆಗಳ ಸಚಿವರು, ಕಾರ್ಯದರ್ಶಿಗಳು, ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸೇರಿದಂತೆ ಮತ್ತಿತರ ಸಭೆ ನಡೆಸಿ ಸೂಕ್ತ ತೀರ್ಮಾನವನ್ನು ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.
Previous Articleತತ್ತರಿಸಿದ ಬಿಜೆಪಿ.
Next Article ಕೇರಳದಲ್ಲಿ ನೊರೊ ವೈರಸ್ ಆತಂಕ: ಮಕ್ಕಳಿಬ್ಬರಿಗೆ ಸೋಂಕು