ಬೆಂಗಳೂರು.
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಾಟಕ್ಕೆ ಪರಪ್ಪನ ಅಗ್ರಹಾರ ಜೈಲು ಸಿಬ್ಬಂದಿ ಮತ್ತು ಕೈದಿಗಳು ತತ್ತರಿಸಿ ಹೋಗಿದ್ದಾರೆ.ಸಾಕಪ್ಪ ಸಾಕು ಇವರ ಕಾಟ ನಮಗೆ ಎನ್ನುತ್ತಿರುವ ಕೈದಿಗಳು ತಮ್ಮನ್ನು ಬೇರೆ ಜೈಲಿಗೆ ವರ್ಗಾಯಿಸಿ ಎಂದು ಮನವಿ ಮಾಡುತ್ತಿದ್ದಾರೆ.
ತೆರೆಯ ಮೇಲೆ ಮಹಾರಾಜನಂತೆ ವಿಜೃಂಭಿಸುತ್ತಾ ಕೈಗೊಬ್ಬ ಕಾಲಿಗೊಬ್ಬ ಆಳುಗಳನ್ನು ಇಟ್ಟುಕೊಂಡು ಡಿ ಬಾಸ್ ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುತ್ತಿದ್ದ ದರ್ಶನ ಇದೀಗ ಊಟಕ್ಕಾಗಿ ಜೈಲಿನಲ್ಲಿ ತಟ್ಟೆ ಹಿಡಿದು ಸರದಿ ಸಾಲಿನಲ್ಲಿ ನಿಲ್ಲುತ್ತಿದ್ದಾರೆ. ಇದರಿಂದ ಸಮತೋಲನ ಕಳೆದುಕೊಂಡವರಂತೆ ಆಡುತ್ತಿದ್ದಾರೆ.
ದರ್ಶನ್ ಜೊತೆ ಒಂದೇ ಸೆಲ್‌ನಲ್ಲಿ ಅನುಕುಮಾರ್, ಜಗ್ಗ, ನಾಗರಾಜು, ಪ್ರದೋಶ್, ಲಕ್ಷ್ಮಣ್ ಇದ್ದಾರೆ. ಇವರೆಲ್ಲರೂ ರೇಣುಕಾಸ್ವಾಮಿ ಕೊಲೆ ಕೇಸ್ ಅಲ್ಲಿ ಜೈಲು ಸೇರಿದವರೇ.
ನಾಗರಾಜು ಅವರನ್ನು ಹೊರತುಪಡಿಸಿ ಉಳಿದ ಆರೋಪಿಗಳಿಗೆ ದರ್ಶನ್ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡುತ್ತಿದ್ದಾರೆ ಎನ್ನಲಾಗಿದೆ. ಅದರಲ್ಲೂ ದರ್ಶನ್ ತಮ್ಮ ಆಪ್ತರಾದ ಮನುಕುಮಾರ್ ಮತ್ತು ಜಗದೀಶ್ ಜೊತೆ ಸದಾ ಜಗಳ ಮಾಡುತ್ತಿದ್ದಾರಂತೆ ಇತ್ತೀಚೆಗೆ ದರ್ಶನ್ ಸೆಲ್‌ನಲ್ಲಿ ದೊಡ್ಡ ಜಗಳ ನಡೆದು ಹೋಗಿದೆ. ಜಗ್ಗ ಹಾಗೂ ದರ್ಶನ್ ಮಧ್ಯೆ ದೊಡ್ಡ ಜಗಳ ಆಗಿದೆಯಂತೆ. ಇಬ್ಬರ ಜಗಳ ಜೋರಾಗುತ್ತಿದ್ದಂತೆ ಜೈಲಧಿಕಾರಿಗಳು ಬಂದು ಜಗಳ ಬಿಡಿಸಿದ್ದಾರೆ. ಇನ್ನು, ಮಲಗಿದ್ದ ಸಹ ಕೈದಿಗಳನ್ನು ಕಾಲಿನಲ್ಲಿ ಒದ್ದು ಎಬ್ಬಿಸಿರೋ ದರ್ಶನ್ ಅವಾಚ್ಯ ಶಬ್ದಗಳಿಂದ ಬೈದಿದ್ದಾರೆ.
ಟಾರ್ಚರ್ ತಡೆಯಲಾರದೆ ಅನುಕುಮಾರ್, ಜಗದೀಶ್ ಅವರು ತಮ್ಮನ್ನು ಚಿತ್ರದುರ್ಗ ಜೈಲಿಗೆ ಶಿಫ್ಟ್ ಮಾಡಲು ಮನವಿ ಮಾಡಿದ್ದಾರೆ.
ಇತ್ತೀಚೆಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ಐಷಾರಾಮಿ ಸೌಲಭ್ಯಗಳು ಸಿಗುತ್ತಿವೆ ಎಂಬ ಸುದ್ದಿಗಳು ವಿಡಿಯೋ ಸಮೇತ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು ಇದಾದ ನಂತರ ರಾಜ್ಯ ಸರ್ಕಾರ ಎಚ್ಚರಿಕೆ ನೀಡಿ ಹಲವರ ವಿರುದ್ಧ ಕ್ರಮ ಜರುಗಿಸಿದೆ ಹೀಗಾಗಿ ಇದೀಗ ಜೈಲಿನಲ್ಲಿ ಕಠಿಣ ನಿಯಮ ಜಾರಿಯಲ್ಲಿದೆ. ಅಲ್ಲದೆ, ಐಪಿಎಸ್ ಅಧಿಕಾರಿ ಅಂಶು ಕುಮಾರ್ ಜೈಲಿನ ಮುಖ್ಯ ಸೂಪರಿಂಟೆಂಡೆಂಟ್ ಆಗಿ ನೇಮಕಗೊಂಡಿದ್ದು, ಜೈಲಿನಲ್ಲಿ ಅತಿ ಕಠಿಣ ರೂಲ್ಸ್ ಜಾರಿಗೆ ತಂದಿದ್ದಾರೆ. ದರ್ಶನ್ ಅವರು ಸಾಲಿನಲ್ಲಿ ನಿಂತು ತಾವೇ ಊಟ ತೆಗೆದುಕೊಂಡು ಬರಬೇಕಿದೆ. ಒಳಗಿನ ಶೌಚಾಲಯ ಕೂಡ ತಾವೇ ಕ್ಲೀನ್ ಮಾಡಬೇಕಿದೆ. ಈ ನಿಯಮಗಳಿಂದ ದರ್ಶನ್ ತತ್ತರಿಸಿ ಹೋಗಿದ್ದಾರೆ. ಇದರ ಪರಿಣಾಮ ಎಲ್ಲರ ಮೇಲೆ ಜಗಳಕ್ಕೆ ಹೋಗುವುದು ಬಾಯಿಗೆ ಬಂದಂತೆ ನಿಂದಿಸುವುದು ಮತ್ತು ಒಡೆಯಲು ಕೂಡ ಹೋಗುತ್ತಿರುವುದರಿಂದ ಇವರನ್ನು ನಿಯಂತ್ರಿಸುವುದೇ ಜೈಲು ಸಿಬ್ಬಂದಿಗೆ ದೊಡ್ಡ ಕೆಲಸವಾಗಿದೆಯಂತೆ.
Previous ArticleKSCA ಗೆ ವೆಂಕಟೇಶ್ ಪ್ರಸಾದ್ ಸಾರಥಿ
Next Article ಭಾರತದ ಜೊತೆ ನಾಟಕ ಮಾಡುತ್ತಿದ್ದಾರಾ ಪುತಿನ್?

