Bengaluru
ತೆರಿಗೆ ವಂಚನೆ ಮತ್ತು ಹವಾಲಾ ವಹಿವಾಟಿನ ಆರೋಪಕ್ಕೆ ಸಂಬಂಧಿಸಿದಂತೆ KPCC ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬೆನ್ನು ಹತ್ತಿರುವ ED ಅಧಿಕಾರಿಗಳು ಮಾಹಿತಿ ಸಂಗ್ರಹಣೆಯಲ್ಲಿ ತೊಡಗಿದ್ದಾರೆ. ಶಿವಕುಮಾರ್ ಅವರ ಎಲ್ಲಾ ವ್ಯವಹಾರಗಳ ಮೇಲೆ ತೀವ್ರ ನಿಗಾ ಇಟ್ಟಿರುವ ED ತಂಡ ಅವರ ಎಲ್ಲಾ ಹಣಕಾಸಿನ ವಹಿವಾಟುಗಳ ವಿವರ ಸಂಗ್ರಹಿಸತೊಡಗಿದೆ.
ಇತ್ತೀಚೆಗಷ್ಟೇ ಶಿವಕುಮಾರ್ ಒಡೆತನದ ಶಿಕ್ಷಣ ಸಂಸ್ಥೆಗಳ ಮಾಹಿತಿ ಸಂಗ್ರಹಿಸಿದ್ದ ED ಅಧಿಕಾರಿಗಳು ಇದೀಗ ಶಾಲಾ ಆಡಳಿತ ಮಂಡಳಿಗೆ ಪತ್ರ ಬರೆದು ಶಾಲೆಯಲ್ಲಿ ನೀಡಲಾದ ಪ್ರವೇಶ, ವಿದ್ಯಾರ್ಥಿಗಳಿಂದ ಪಡೆದ ಶುಲ್ಕ ಸೇರಿದಂತೆ ಎಲ್ಲಾ ಮಾಹಿತಿಗಳನ್ನು ನೀಡುವಂತೆ ಕೋರಿದೆ. ವಿಧಾನಸಭೆ Electionಗೂ ಮುನ್ನ ಈ ಮಾಹಿತಿ ಸಂಗ್ರಹಿಸುತ್ತಿರುವ ಅಧಿಕಾರಿಗಳು ಹವಾಲಾ ಅಥವಾ ತೆರಿಗೆ ವಂಚನೆ ಆರೋಪದಲ್ಲಿ ಸಿಲುಕಿಸುವ ಪ್ರಯತ್ನ ನಡೆಸಿದೆ ಎಂದು ಆರೋಪಿಸಲಾಗಿದೆ.