Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Delhi Marathon ಗೆ ರಂಗ ಸಜ್ಜು
    ರಾಜ್ಯ

    Delhi Marathon ಗೆ ರಂಗ ಸಜ್ಜು

    vartha chakraBy vartha chakraFebruary 3, 2023Updated:March 20, 202325 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ನವದೆಹಲಿ

    ಬಹುನಿರೀಕ್ಷಿತ ಏಳನೇ ಆವೃತ್ತಿಯ ನವದೆಹಲಿ ಮ್ಯಾರಥಾನ್ ಫೆಬ್ರವರಿ 26ರಂದು ಭಾನುವಾರ ನಡೆಯಲಿದೆ. ಇದು ಕ್ರೀಡಾ ಪ್ರೇಮಿಗಳಲ್ಲಿ‌ ಸಂಭ್ರಮ ಹಾಗೂ ಉತ್ಸಾಹಕ್ಕೆ ಕಾರಣವಾಗಿದೆ. ಬರುವ ಸೆಪ್ಟೆಂಬರ್ 23ರಿಂದ ಅಕ್ಟೋಬರ್ 8ರ ವರೆಗೆ ಚೀನಾದ ಹಾಂಗ್ಝೂ (Hangzhou) ನಲ್ಲಿ  ನಡೆಯಲಿರುವ ಏಷ್ಯನ್ ಗೇಮ್ಸ್‌ (Asian Games) ಗೆ ಅರ್ಹತೆ ಪಡೆಯಲು ಎದುರು ನೋಡುತ್ತಿರುವ ದೇಶದ ಅಗ್ರಮಾನ್ಯ ಓಟಗಾರರು ಈ ಮ್ಯಾರಥಾನ್ ಮೇಲೆ ಕಣ್ಣಿಟ್ಟಿದ್ದಾರೆ.

    ಭಾರತೀಯ ಅಥ್ಲೆಟಿಕ್ಸ್ ಫೆಡರೇಷನ್ ( Athletics Federation of India ) ಹಾಗೂ ಫಿಟ್ ಇಂಡಿಯಾ (FIT INDIA) ದ ನೇತೃತ್ವದಲ್ಲಿ ಆಯೋಜನೆಗೊಂಡಿರುವ ಮ್ಯಾರಥಾನ್  ಜವಾಹರ್‌ಲಾಲ್ ನೆಹರು ಕ್ರೀಡಾಂಗಣದಲ್ಲಿ ಆರಂಭಗೊಂಡು, ಅಲ್ಲೇ ಮುಕ್ತಾಯಗೊಳ್ಳಲಿದೆ. ದೆಹಲಿಯ ಚಳಿಗಾಲದಲ್ಲಿ ನಡೆಯಲಿರುವ ಮ್ಯಾರಥಾನ್ ನಗರದ ಐತಿಹಾಸಿಕ ತಾಣಗಳಾದ ಹುಮಾಯುನ್ ಸ್ಮಾರಕ (Humayun’s Tomb), ಲೋಧಿ ಗಾರ್ಡನ್ (Lodhi Garden) ಹಾಗೂ ಖಾನ್ ಮಾರ್ಕೆಟ್ (Khan Market) ಮೂಲಕ ಸಾಗಲಿದೆ.ಈ ಓಟವು ವಿಕಲಚೇತನರ ಪಾಲ್ಗೊಳ್ಳುವಿಕೆಗೂ ಸಾಕ್ಷಿಯಾಗಲಿದ್ದು, ಹಲವು ಹವ್ಯಾಸಿ ಓಟಗಾರರು ಸಹ ಭಾಗವಹಿಸಲಿದ್ದಾರೆ.

    ಮತ್ತೊಂದು ವಿಶೇಷ ಎಂದರೆ, ವರ್ಚುವಲ್ ಮ್ಯಾರಥಾನ್ ಮೂಲಕ 50,000ಕ್ಕೂ ಹೆಚ್ಚು ಮಂದಿ ವಿಶ್ವದ ವಿವಿಧ ಭಾಗಗಳಿಂದ 5 ದಿನಗಳ ವರೆಗೂ ಸ್ಪರ್ಧಿಸಲಿದ್ದಾರೆ. ಈ ಓಟವು ಫೆಬ್ರವರಿ 21ರಂದು ಆರಂಭಗೊಳ್ಳಲಿದೆ.

    ಸ್ಪರ್ಧೆಯು ನಾಲ್ಕು ವಿವಿಧ ವಿಭಾಗಗಳಲ್ಲಿ ನಡೆಯಲಿದೆ. ಪೂರ್ಣ ಮ್ಯಾರಥಾನ್, ಅರ್ಧ ಮ್ಯಾರಥಾನ್, 10ಕೆ ಮ್ಯಾರಥಾನ್ ಹಾಗೂ 5ಕೆ ಮ್ಯಾರಥಾನ್ ಅಲ್ಲದೆ ಸುಮಾರು 25 ಅಂಧ ಅಥ್ಲೀಟ್‌ಗಳು ತಮ್ಮ ಮಾರ್ಗದರ್ಶಕರ ಜೊತೆ ಓಡಲಿದ್ದಾರೆ. ಅಂತಾರಾಷ್ಟ್ರೀಯ ಪ್ಯಾರಾ ಅಥ್ಲೀಟ್‌ಗಳಾದ ಅರ್ಜುನ ಪ್ರಶಸ್ತಿ ವಿಜೇತ ಅಂಕುರ್ ಧಾಮ ಹಾಗೂ ಪ್ಯಾರಾಲಿಂಪಿಕ್ ಪದಕ ವಿಜೇತ ರಮಣ್‌ಜೀ 10ಕೆ ಓಟದಲ್ಲಿ ಸ್ಪರ್ಧಿಸಲಿದ್ದಾರೆ. ಅಂಧ ಓಟಗಾರರಿಗೆ ಗೈಡ್ ರನ್ನರ್ಸ್‌ ಇಂಡಿಯಾ (Guide Runners India) ತಂಡವು ಮಾರ್ಗದರ್ಶಕರನ್ನು ಒದಗಿಸಲಿದೆ. ಈ ತಂಡವು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವ ವಿಕಲಚೇತನರಿಗೆ ಫಿಟ್ನೆಸ್ ತರಬೇತಿಯ ಬಗ್ಗೆ ಮಾಹಿತಿಯನ್ನೂ ಒದಗಿಸಲಿದೆ.

    ದಿ ಚಾಲೆಂಜಿಂಗ್ ಒನ್ಸ್ (The Challenging Ones) ಮ್ಯಾರಥಾನ್‌ನಲ್ಲಿ ಪಾಲ್ಗೊಳ್ಳುವ ಮತ್ತೊಂದು ವಿಕಲಚೇತನರ ತಂಡ. ಈ ತಂಡವನ್ನು ಕಾರ್ಗಿಲ್ ಯುದ್ಧದಲ್ಲಿ ಪಾಲ್ಗೊಂಡಿದ್ದ ಯೋಧ ಹಾಗೂ ಅಂಗವಿಚ್ಛೇದಿತ ಕ್ರೀಡಾಪಟು ಮೇಜರ್ ಡಿ.ಪಿ.ಸಿಂಗ್ (Major D.P. Singh) ಮುನ್ನಡೆಸಲಿದ್ದಾರೆ. ‘ರಾಷ್ಟ್ರೀಯ ಮ್ಯಾರಥಾನ್‌ಗೆ ಇಷ್ಟು ಒಳ್ಳೆಯ ಪ್ರತಿಕ್ರಿಯೆ ಸಿಗುತ್ತಿರುವುದನ್ನು ನೋಡಲು ಖುಷಿಯಾಗುತ್ತಿದೆ. ನಮ್ಮ ಅಥ್ಲೀಟ್‌ಗಳು ದೇಶದ ಕೀರ್ತಿ ಹೆಚ್ಚಿಸುತ್ತ ಇರಲಿದ್ದಾರೆ ಎನ್ನುವ ವಿಶ್ವಾಸವಿದೆ. ವರ್ಚುವಲ್ ಸ್ಪರ್ಧೆಗೂ ಈ ಪ್ರಮಾಣದಲ್ಲಿ ಪ್ರತಿಕ್ರಿಯೆ ದೊರೆಯುತ್ತಿರುವುದನ್ನು ನೋಡಿ ಬೆರಗಾಗಿದ್ದೇವೆ’ ಎಂದು ಭಾರತೀಯ ಅಥ್ಲೆಟಿಕ್ಸ್ ಫೆಡರೇಷನ್‌ನ ಅಧ್ಯಕ್ಷ ಅಡಿಲೆ ಸುಮರಿವಾಲಾ (Adille Sumariwalla) ಹೇಳಿದ್ದಾರೆ.

    #delhi asian games asian games 2023 athlet athletes Athletics Federation of India china ED FIT INDIA HAL Hangzhou india m Major D.P. Singh marathon Sports
    Share. Facebook Twitter Pinterest LinkedIn Tumblr Email WhatsApp
    Previous Articleಮುನಿಸಿಕೊಂಡ G. Parameshwara ಮತ್ತು M.B.Patil
    Next Article Digital ಸಹಿ ದುರ್ಬಳಕೆ ಮಾಡಿದ ಡಿ ದರ್ಜೆ ನೌಕರ
    vartha chakra
    • Website

    Related Posts

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    October 4, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Rogertyday on CM ಮತ್ತು DCM ಬದಲಾವಣೆ ಚರ್ಚೆಯಲ್ಲಿ ಇವರಿಲ್ಲವಂತೆ.
    • доставка дизельного топлива on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • LewisWhoto on ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ !
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ಹೊಸ ಮನೆಗೂ ಸಿಕ್ಕಿಲ್ಲ ವಿದ್ಯುತ್ ಸಂಪರ್ಕ #varthachakra #cmhouse #siddaramaiah #mysore #electricity
    Subscribe