Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹಣ ಕೇಳಿದ್ದಕ್ಕೆ ಕತ್ತು ಕೊಯ್ದ!
    ಅಪರಾಧ

    ಹಣ ಕೇಳಿದ್ದಕ್ಕೆ ಕತ್ತು ಕೊಯ್ದ!

    vartha chakraBy vartha chakraFebruary 19, 202325 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹಾಸನ, ಫೆ.19-

    ಬುಕ್ ಮಾಡಿದ್ದ ಐಫೋನ್‌ (iPhone) ಗೆ ಕೊಡಲು ಹಣವಿಲ್ಲದೆ ಡೆಲಿವೆರಿ ಬಾಯ್‌ನ ಕತ್ತು ಕೊಯ್ದು ಕೊಲೆ ಮಾಡಿ ಮನೆಯಲ್ಲಿಯೇ ಮೃತದೇಹವನ್ನು ನಾಲ್ಕು ದಿನ ಇಟ್ಟುಕೊಂಡಿದ್ದ ಮೃಗೀಯ ಘಟನೆ ಅರಸೀಕೆರೆ (Arsikere) ಪಟ್ಟಣದ ಅಂಚೆಕೊಪ್ಪಲಿನಲ್ಲಿ ನಡೆದಿದ್ದು ಜಿಲ್ಲೆಯ ಜನತೆ ಬೆಚ್ಚಿಬಿದ್ದಿದೆ.

    ಕಳೆದ ಫೆಬ್ರವರಿ 11 ರಂದು ಅಂಚೆಕೊಪ್ಪಲು ಸಮೀಪದ ರೈಲ್ವೆ ಟ್ರ‍್ಯಾಕ್ ಬಳಿ ಸುಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದ್ದ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಅರಸೀಕೆರೆ ನಗರ ಪೊಲೀಸರು, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಕೊಲೆ ಆರೋಪಿ ಹೇಮಂತ್ ದತ್ತ (20) ಸಿಕ್ಕಿಬಿದ್ದಿದ್ದು, ಹೇಮಂತ್ ನಾಯ್ಕ (23) ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ. ಆರೋಪಿ ಹೇಮಂತ್ ದತ್ತ ಕೊಲೆ ಮಾಡಿ ಮೃತದೇಹವನ್ನು ನಾಲ್ಕು ದಿನ ಮನೆಯಲ್ಲೇ ಇಟ್ಟುಕೊಂಡಿರುವುದು ತನಿಖೆಯಲ್ಲಿ ಪತ್ತೆಯಾಗಿದೆ.

    ಮೃತ ಹೇಮಂತ್ ನಾಯ್ಕ ಇ-ಕಾರ್ಟ್ ಎಕ್ಸ್‌ಪ್ರೆಸ್‌ (Ekart express) ನಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದು, ಆರೋಪಿ ಹೇಮಂತ್ ದತ್ತ ಇತ್ತೀಚೆಗೆ ಫ್ಲಿಪ್‌ಕಾರ್ಟ್‌ (Flipkart) ನಲ್ಲಿ 46 ಸಾವಿರ ಮೌಲ್ಯದ ಸೆಕೆಂಡ್ ಹ್ಯಾಂಡ್ ಐಫೋನ್ ಬುಕ್ ಮಾಡಿದ್ದ. ಇದರಿಂದ ಹೇಮಂತ್ ನಾಯ್ಕ ಫೆಬ್ರವರಿ 7ರಂದು ಅರಸೀಕೆರೆ ಪಟ್ಟಣದ, ಲಕ್ಷ್ಮೀಪುರ ಬಡಾವಣೆಯಲ್ಲಿರುವ ಹೇಮಂತ್ ದತ್ತ ಮನೆಗೆ ಐಫೋನ್ ಡೆಲಿವರಿ ಕೊಡಲು ಬಂದಿದ್ದ.

    ಅಲ್ಲಿಗೆ ಬಂದೊಡನೆ ಹೇಮಂತ್ ದತ್ತ ಐಫೋನ್ ಬಾಕ್ಸ್‌ ಅನ್ನು ಓಪನ್ ಮಾಡುವಂತೆ ಹೇಳಿದ್ದ. ಆದರೆ  ಅದಕ್ಕೆ ನಿರಾಕರಿಸಿದ ನಾಯ್ಕ ತನ್ನಿಂದ ಅದನ್ನು ಓಪನ್ ಮಾಡಲು ಸಾಧ್ಯವಿಲ್ಲ ಹಾಗೆ ಮಾಡಿದರೆ, ಹಿಂದಿರುಗಿಸಿಲು ಸಾಧ್ಯವಿಲ್ಲ, ಎಂದು ಹೇಳಿ 46 ಸಾವಿರ ಹಣ ಕೊಡಿ ಎಂದು ಕೇಳಿದ್ದ. ಇದನ್ನು ಕೇಳಿದ ನಂತರ ಹೇಮಂತ್ ದತ್ತ ಇಲ್ಲೇ ಕುಳಿತುಕೊ ಹಣ ಕೊಡುತ್ತೇನೆ ಎಂದು ಹೇಳಿ ಹೋಗಿದ್ದ. ಹೊರಗೆ ಹೋದ ಹೇಮಂತ್ ದತ್ತ ಡೆಲಿವರಿ ಬಾಯ್ ಗೆ ಕೊಡಲು ಹಣವಿಲ್ಲದೇ ವಾಪಸ್ ಬಂದ.

    ಈ ವೇಳೆ ಮನೆಯೊಳಗೆ ಕುಳಿತು ಮೊಬೈಲ್ ನೋಡುತ್ತಿದ್ದ ಹೇಮಂತ್ ನಾಯ್ಕನನ್ನು ನೋಡಿ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ. ನಂತರ ಮೃತದೇಹವನ್ನು ಏನು ಮಾಡಬೇಕೆಂದು ತಿಳಿಯದೆ ನಾಲ್ಕು ದಿನಗಳವರೆಗೆ  ಮನೆಯಲ್ಲೇ ಇಟ್ಟುಕೊಂಡಿದ್ದ. ನಾಲ್ಕು ದಿನಗಳ ನಂತರ ಹೆಣ ವಾಸನೆ ಬರತೊಡಗಿತು. ಅದನ್ನು ತಡೆಯಲಾರದೆ ಫೆ.11 ರಂದು ಗೋಣಿಚೀಲದಲ್ಲಿ ಹೆಣ ತುಂಬಿ ಬೈಕ್‌ನಲ್ಲಿ ತೆಗೆದುಕೊಂಡು ಅಂಚೆಕೊಪ್ಪಲು ರೈಲ್ವೆ ಬ್ರಿಡ್ಜ್ ಬಳಿ ತೆರಳಿ‌ ಅಲ್ಲಿ ಪೆಟ್ರೋಲ್, ಸೀಮೆಎಣ್ಣೆ ಸುರಿದು ಮೃತದೇಹ ಸುಟ್ಟು ಹಾಕಿ ತೆಪ್ಪಗಾಗಿದ್ದ.

    ಇತ್ತ‌ ಮೃತನ ಸೋದರ ಕೆಲಸಕ್ಕೆ ಹೋಗಿದ್ದ ತನ್ನ ತಮ್ಮ ಎರಡು ದಿನವಾದರೂ ಮನೆಗೆ ಬಂದಿಲ್ಲ ಎಂದು ಪೊಲೀಸರಿಗೆ ದೂರು ನೀಡಿದ್ದರು. ಈ ಸಂಬಂಧ ಅರಸೀಕೆರೆ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದರು. ತನಿಖೆ ವೇಳೆ ಪೊಲೀಸರು  ಬೆಚ್ಚಿಬೀಳಿಸುವ ಸಂಗತಿಯನ್ನು ಬಯಲಿಗೆಳೆದಿದ್ದಾರೆ. ಐ ಫೋನ್ ಡೆಲಿವರಿಗೆ ಬಂದಿದ್ದ ವಿಳಾಸ ಪತ್ತೆ ಹಚ್ಚಿ ಆರೋಪಿ ಹೇಮಂತ್ ದತ್ತನನ್ನ ವಿಚಾರಣೆ ನಡೆಸಿದಾಗ, ಇಡೀ ಪ್ರಕರಣ ಬೆಳಕಿಗೆ ಬಂದಿದೆ.

    Verbattle
    Verbattle
    Verbattle
    arsikere art deliver boy Ekart flipkart hassan iPhone online shopping ಕೊಲೆ ಬೈಕ್ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಉತ್ತರ ಕೊಡಿ Rohini Sindhuri – IPS Roopa
    Next Article BJP ಪರ ಅಲೆ‌ ಸೃಷ್ಟಿಗೆ‌ Nadda, Shah ಕಾರ್ಯತಂತ್ರ
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax on ಐಪಿಎಲ್‌ಗೂ ತಟ್ಟಿದ ಬಾಂಗ್ಲಾ ಸಂಘರ್ಷದ ಕಿಚ್ಚು
    • Briansix on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • LinwoodGah on ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.