ಮುಂಬೈ: ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಶುಕ್ರವಾರ (ಜುಲೈ 1) ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.
ಬಿಜೆಪಿ ವರಿಷ್ಟ ಮಂಡಳಿ ಈ ಸಂಬಂಧ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದೆ.
ಶಿವಸೇನೆಯ ಏಕನಾಥ್ ಶಿಂಧೆ ಬಣದ ಬೆಂಬಲ ಪಡೆದು ಬಿಜೆಪಿ ಸರ್ಕಾರ ರಚನೆ ಮಾಡಲಿದೆ.
ಖಾತೆ ಹಂಚಿಕೆ ಸಂಬಂಧ ಉಭಯ ಪಕ್ಷಗಳ ಮಧ್ಯೆ ಮಾತುಕತೆ ನಡೆದಿದೆ. ಶೇಕಡ 50ರ ಅನುಪಾತದಲ್ಲಿ ಖಾತೆ ಹಂಚಿಕೆ ತೀರ್ಮಾನಕ್ಕೆ ಬರಲಾಗಿದೆ ಎಂದು ವರದಿಯಾಗಿದೆ.
ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಅಧಿಕಾರಕ್ಕೆ ಬರುವುದು ಬಿಜೆಪಿಗೆ ಅನಿವಾರ್ಯವಾಗಿತ್ತು. ಕಳೆದ 30 ತಿಂಗಳಿನಿಂದ ಬಿಜೆಪಿ ಈ ನಿಟ್ಟಿನಲ್ಲಿ ಪ್ರಯತ್ನ ನಡೆಸಿತ್ತು.