Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕರೆಂಟ್ ಕಳ್ಳತನ ‌ಮಾಡಿದ ಕುಮಾರಸ್ವಾಮಿ | Kumaraswamy
    ಸುದ್ದಿ

    ಕರೆಂಟ್ ಕಳ್ಳತನ ‌ಮಾಡಿದ ಕುಮಾರಸ್ವಾಮಿ | Kumaraswamy

    vartha chakraBy vartha chakraNovember 14, 20237 Comments3 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ (Kumaraswamy) ಕರೆಂಟ್ ಕಳ್ಳತನ ಮಾಡಿದ್ದಾರಾ.? ಇಂತಹದೊಂದು ಆರೋಪ ಇದೀಗ ಅವರ ಮೇಲೆ ಕೇಳಿಬಂದಿದೆ. ಬೆಳಕಿನ ಹಬ್ಬ ದೀಪಾವಳಿಯ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಅವರ ಬೆಂಗಳೂರಿನ ಜೆ.ಪಿ ನಗರದಲ್ಲಿನ ನಿವಾಸಕ್ಕೆ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ.
    ಅವರ ಮನೆಗೆ ಮೀನುಗುವ ಎಲೆಕ್ಟ್ರಿಕಲ್ ದೀಪಗಳನ್ನು ಅಳವಡಿಸಿರುವ ಕಾರ್ಮಿಕರು ಅದಕ್ಕೆ ಬೇಕಾಗುವ ವಿದ್ಯುತ್ ಅನ್ನು ನೇರವಾಗಿ ವಿದ್ಯುತ್ ಕಂಬದಿಂದ ಪಡೆದುಕೊಂಡಿದ್ದಾರೆ.ಈ‌ ರೀತಿಯಲ್ಲಿ ಕಂಬದಿಂದ ನೇರವಾಗಿ ವಿದ್ಯುತ್ ಸಂಪರ್ಕ ಪಡೆಯುವುದು ಕಾನೂನು ಬಾಹಿರ ಎಂದು ಘೋಷಿಸಲಾಗಿದೆ.

    ಕುಮಾರಸ್ವಾಮಿ (Kumaraswamy) ಅವರ ನಿವಾಸಕ್ಕೆ ಈ ರೀತಿಯಲ್ಲಿ ವಿದ್ಯುತ್ ಸಂಪರ್ಕ ಪಡೆಯಲಾಗಿದೆ ಎಂಬ ಮಾಹಿತಿ ಬರುತ್ತಿದ್ದಂತೆ ಎಕ್ಸ್ ನಲ್ಲಿ ಟೀಕೆ ಹೇಳಿಕೆ ಪೋಸ್ಟ್ ಮಾಡಿರುವ ಕಾಂಗ್ರೆಸ್ ಜಗತ್ತಿನ ಏಕೈಕ ಮಹಾ ಪ್ರಾಮಾಣಿಕ ಹೆಚ್.ಡಿ ಕುಮಾರಸ್ವಾಮಿಯವರ ಜೆ ಪಿ ನಗರದ ನಿವಾಸದ ದೀಪಾವಳಿಯ ದೀಪಾಲಂಕಾರಕ್ಕೆ ನೇರವಾಗಿ ವಿದ್ಯುತ್ ಕಂಬದಿಂದ ಅಕ್ರಮ ವಿದ್ಯುತ್ ಸಂಪರ್ಕ ಪಡೆದಿದ್ದಾರೆ. ಒಬ್ಬ ಮಾಜಿ ಸಿಎಂ ಆಗಿ ವಿದ್ಯುತ್ ಕಳ್ಳತನ ಮಾಡುವ ದಾರಿದ್ರ್ಯ ಬಂದಿದ್ದು ದುರಂತ ಎಂದು ಉಲ್ಲೇಖಿಸಿ,ಈ ಕುರಿತಾಸ ವಿಡಿಯೋ ಬಿಡುಗಡೆ ಮಾಡಿದೆ.
    ಕುಮಾರಸ್ವಾಮಿ ಅವರೇ ನಮ್ಮ ಸರ್ಕಾರ ಗೃಹಜ್ಯೋತಿಯಲ್ಲಿ 200 ಯೂನಿಟ್ ಉಚಿತ ಕೊಡುತ್ತಿದೆಯೇ ಹೊರತು 2000 ಯೂನಿಟ್ ಅಲ್ಲ. ತಮಗೆ ಅಷ್ಟೊಂದು ದಾರಿದ್ರ್ಯ ಬಂದಿದ್ದರೆ ಗೃಹಜ್ಯೋತಿ ಯೋಜನೆಗೆ ಒಂದು ಅರ್ಜಿ ಹಾಕಬಹುದಿತ್ತಲ್ಲ, ಒಹ್, ತಿಳಿದಿರಲಿಲ್ಲ ಗೃಹಜ್ಯೋತಿಯಲ್ಲಿ ಒಬ್ಬರಿಗೆ ಒಂದು ಮೀಟರ್ ಗೆ ಅವಕಾಶವಿದೆ, ತಮ್ಮ ಹೆಸರಲ್ಲಿ ಹಲವು ಮೀಟರ್ ಗಳಿವೆಯಲ್ಲವೇ ಎಂದು ವ್ಯಂಗ್ಯವಾಡಿದೆ.

    ರಾಜ್ಯದ ವಿದ್ಯುತ್ ಕೊರತೆಯ ನಡುವೆಯೂ ರೈತರಿಗೆ 7 ಗಂಟೆ ವಿದ್ಯುತ್ ಕೊಡುವ ಕ್ರಮ ಕೈಗೊಂಡಿದ್ದರೂ ಪುಂಖಾನುಪುಂಕವಾಗಿ ಮಾತಾನಾಡುವ ತಾವು ಇಂತಹ ಚೀಪ್ ಕಳ್ಳತನಕ್ಕೆ ಇಳಿಯುವಷ್ಟು “ಬರ” ಎದುರಿಸುತ್ತಿದ್ದೀರಾ? ಅದೇನೋ ಪತ್ರಿಕಾಗೋಷ್ಠಿ ನಡೆಸಿ “ಕರ್ನಾಟಕ ಕತ್ತಲಲ್ಲಿದೆ“ ಎನ್ನುತ್ತಾ ಬಡಬಡಿಸಿದ್ದಿರಲ್ಲವೇ, ಈಗ ಕದ್ದ ವಿದ್ಯುತ್ತಿನಲ್ಲಿ ನಿಮ್ಮ ಮನೆಗೆ ಬೆಳಕು ಮಾಡಿಕೊಂಡಿದ್ದೀರಿ, ನಿಮ್ಮ ಮನೆ ಹೀಗೆ ಜಗಮಗ ಹೊಳೆಯುತ್ತಿರುವಾಗ ಅದ್ಯಾವ ಬಾಯಲ್ಲಿ ಕರ್ನಾಟಕ ಕತ್ತಲಲ್ಲಿದೆ ಎನ್ನುವಿರಿ ಸ್ವಾಮಿ? ಎಂದು ಪ್ರಶ್ನಿಸಿದೆ.
    ನಿಮ್ಮದೇ ಶೈಲಿಯ ಪ್ರಶ್ನೆ ಕೇಳಬೇಕೆಂದರೆ, ರಾಜ್ಯ ಬರ ಎದುರಿಸುತ್ತಿರುವಾಗ ನಿಮ್ಮ ಮನೆ ಮಾತ್ರ ಜಗಮಗಿಸಬೇಕೆ? ರೈತರ ಪಾಲಿನ ವಿದ್ಯುತ್ ಕಳ್ಳತನ ಮಾಡಿ ಮೋಜು ಮಾಡಬೇಕೆ? ನಿಮ್ಮ ಮನೆಯ ದೀಪಾವಳಿಗೆ ರಾಜ್ಯದ ಜನರ “ದಿವಾಳಿ”ಯನ್ನು ಬಯಸುತ್ತಿದ್ದೀರಾ? ವಿದ್ಯುತ್ತನ್ನೇ ಬಿಡದೆ ಲೂಟಿ ಮಾಡುವ ತಾವು ರಾಜ್ಯವನ್ನು ಇನ್ನೆಷ್ಟು ಲೂಟಿ ಮಾಡಿರಬಹುದು? ಎಂದು ಟೀಕಿಸಿದೆ.ಇದಾದ ಕೆಲ ಹೊತ್ತಿನಲ್ಲೇ ಕಾರ್ಯಾಚರಣೆಗಿಳಿದ ಬೆಸ್ಕಾಂ ಅಧಿಕಾರಿಗಳು ಅಕ್ರಮ ವಿದ್ಯುತ್ ಸಂಪರ್ಕ ಕುರಿತಾಗಿ ಕುಮಾರಸ್ವಾಮಿ ಅವರಿಗೆ ನೋಟೀಸ್ ನೀಡಿದೆ.

    ಹರಿಶ್ಚಂದ್ರ ಅಲ್ಲ:
    ಈ ಎಲ್ಲಾ ಬೆಳವಣಿಗೆಯ ನಡುವೆ ಎಕ್ಸ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಕುಮಾರಸ್ವಾಮಿ ನಾನೇನೂ‌ ಹರಿಶ್ಚಂದ್ರ ಅಲ್ಲ.ತಮ್ಮ ಮನೆಯ ವಿದ್ಯುತ್ ದೀಪಾಲಂಕರಕ್ಕೆ ಕರೆಂಟ್ ಬಳಸುವ ವಿಷಯದಲ್ಲಿ ತಪ್ಪಾಗಿದೆ ಒಪ್ಪಿಕೊಳ್ಳುತ್ತೇನೆ.ಇದಕ್ಕಾಗಿ ನಿಯಮ ಪ್ರಕಾರ ವಿಧಿಸುವ ದಂಡ ಪಾವತಿಸುತ್ತೇನೆ ಎಂದು ಹೇಳಿದ್ದಾರೆ.
    ನಾನೇನು ರಾಜ್ಯದ ಆಸ್ತಿ ಕಬಳಿಸಿಲ್ಲ. ಕಂಡವರ ಭೂಮಿಗೆ ಬೇಲಿ ಹಾಕಿಲ್ಲ. ಇನ್ನೊಬ್ಬರ ರಕ್ತ ಕುಡಿದು ಧನದಾಹ ತೀರಿಸಿಕೊಂಡಿಲ್ಲ. ಕುಮಾರಸ್ವಾಮಿ ವಿದ್ಯುತ್ ಕಳ್ಳತನ ಮಾಡಿದ್ದಾರೆ, ಬೆಸ್ಕಾಂ ಕ್ರಮ ಕೈಗೊಳ್ಳಲಿ ಎಂದು ಉಪ ಮುಖ್ಯಮಂತ್ರಿಗಳು ಹೇಳಿದ್ದಾರೆ. ನಾನು ಮನೆಯಲ್ಲೇ ಇದ್ದೇನೆ. ಬೆಸ್ಕಾಂ ಅಧಿಕಾರಿಗಳು ಬರಲಿ. ಅವರ ಯಾವುದೇ ಕ್ರಮಕ್ಕೆ ನಾನು ಸಿದ್ಧನಿದ್ದೇನೆ ಎಂದಿದ್ದಾರೆ.

    ದೀಪಾವಳಿ ಹಬ್ಬಕ್ಕೆ ನನ್ನ ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಲು ಖಾಸಗಿ ಡೆಕೋರೇಟರ್ ಒಬ್ಬರಿಗೆ ಹೇಳಲಾಗಿತ್ತು. ಅವರು ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಿದ ಮೇಲೆ ಪಕ್ಕದಲ್ಲಿಯೇ ಇದ್ದ ಕಂಬದಿಂದ ವಿದ್ಯುತ್ ಸಂಪರ್ಕ ಪಡೆದು ಪರೀಕ್ಷೆ ಮಾಡಿದ್ದಾರೆ. ಆಗ ನಾನು ಬಿಡದಿಯ ತೋಟದಲ್ಲಿದ್ದೆ. ನಿನ್ನೆ ರಾತ್ರಿ ಮನೆಗೆ ವಾಪಸ್ ಬಂದಾಗ ಈ ವಿಷಯ ನನ್ನ ಗಮನಕ್ಕೆ ಬಂತು. ತಕ್ಷಣ ಅದನ್ನು ತೆಗೆಸಿ ಮನೆಯ ಮೀಟರ್ ಬೋರ್ಡ್ ನಿಂದಲೇ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಮಾಡಿದ್ದೇನೆ. ಇದು ವಾಸ್ತವ ಸ್ಥಿತಿ. ಇದರಲ್ಲಿ ಮುಚ್ಚುಮರೆ ಏನೂ ಇಲ್ಲ.ಈ ಅಚಾತುರ್ಯಕ್ಕೆ ನನ್ನ ವಿಷಾದವಿದೆ. ಬೆಸ್ಕಾಂ ಅಧಿಕಾರಿಗಳು ಬಂದು ಪರೀಕ್ಷೆ ಮಾಡಿ ನೋಟಿಸ್ ನೀಡಲಿ. ದಂಡ ಕಟ್ಟುತ್ತೇನೆ. ಇದನ್ನೇ ಕಾಂಗ್ರೆಸ್ ದೊಡ್ಡದು ಮಾಡಿ ಪ್ರಚಾರ ಗಿಟ್ಟಿಸುವ ಕೆಲಸ ಮಾಡುತ್ತಿದೆ. ಆ ಪಕ್ಷದ ಕ್ಷುಲ್ಲಕ ಮನಃಸ್ಥಿತಿಯ ಬಗ್ಗೆ ನನಗೆ ಮರುಕ ಇದೆ ಎಂದಿದ್ದಾರೆ.
    ಸ್ವಾಗತಾರ್ಹ; ಈ ಘಟನೆ ಬಳಿಕ ಪ್ರತಿಕ್ರಿಯೆ ನೀಡಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿದ್ಯುತ್ ಕಳ್ಳತನ ಒಪ್ಪಿಕೊಂಡ ಕುಮಾರಸ್ವಾಮಿಗೆ ಅಭಿನಂದನೆ: ಡಿಸಿಎಂ ಡಿ.ಕೆ.ಶಿವಕುಮಾರ್ ಅಚಾತುರ್ಯವೋ, ಕಳ್ಳತನವೋ ಒಟ್ಟಿನಲ್ಲಿ ವಿದ್ಯುತ್ ಕಳ್ಳತನದ ಬಗ್ಗೆ ಕುಮಾರಸ್ವಾಮಿ ಅವರು ಒಪ್ಪಿಕೊಂಡು, ದಂಡ ಕಟ್ಟುತ್ತೇನೆ ಎಂದು ಹೇಳಿರುವುದು ಅಭಿನಂದನೀಯ ಎಂದು ಹೇಳಿದರು.

    ಕುಮಾರಸ್ವಾಮಿ ಮನೆಗೆ ವಿದ್ಯುತ್ ಕಳವು ವಿಚಾರವನ್ನು ಮಾಧ್ಯಮಗಳಲ್ಲಿ ಗಮನಿಸಿದೆ. ಅವರ ನೆರೆಹೊರೆಯವರೇ ಅಕ್ರಮ ವಿದ್ಯುತ್ ಸಂಪರ್ಕದ ವಿಡಿಯೋ ಮಾಡಿ ಮಾಧ್ಯಮಗಳಿಗೆ ನೀಡಿದ್ದಾರೆ. ಆನಂತರ ನಮ್ಮ ಪಕ್ಷದ ಸಾಮಾಜಿಕ ಜಾಲತಾಣ ಘಟಕ ಏನು ಕೆಲಸ ಮಾಡಬೇಕೊ ಅದನ್ನು ಮಾಡಿದೆ. ಅವರ ಪಕ್ಷದ ಸೋಶಿಯಲ್ ಮೀಡಿಯಾದಲ್ಲಿ ಬೇಕಾದಷ್ಟು ಬರೆದಂತೆ, ನಮ್ಮ ಪಕ್ಷದವರು ಏನು ಕೆಲಸ ಮಾಡಬೇಕೋ ಅದನ್ನು ಮಾಡಿದ್ದಾರೆ. ಅವರು ಮಾಡೋದನ್ನು ನೋಡಿಕೊಂಡು ಸುಮ್ಮನೆ ಕುಳಿತುಕೊಳ್ಳಲು ಆಗುತ್ತದೆಯೇ?” ಎಂದು ಮರುಪ್ರಶ್ನಿಸಿದರು.
    ವಿದ್ಯುತ್ ಕಳ್ಳತನ ಮಾಡಬಾರದು, ಜವಾಬ್ದಾರಿಯುತ ಸ್ಥಾನದಲ್ಲಿ ಇರುವ ನಮ್ಮಂತವವರೇ ಹೀಗೆ ಕಳವು ಮಾಡಿದರೆ ತಪ್ಪಲ್ಲವೇ? ಸಂಬಂಧಿಸಿದ ಇಲಾಖೆಯವರು ಏನು ಕ್ರಮ ತೆಗೆದುಕೊಳ್ಳುತ್ತಾರೋ ನೋಡೋಣ. ಈ ವಿಚಾರವಾಗಿ ಸರ್ಕಾರ ಮಧ್ಯಪ್ರವೇಶ ಮಾಡುವುದಿಲ್ಲ, ನಮಗೆ ಅದರ ಅವಶ್ಯಕತೆಯೂ ಇಲ್ಲ ಮತ್ತು ಸಮಯವೂ ಇಲ್ಲ. ಬೆಸ್ಕಾಂನವರು ಕ್ರಮ ತೆಗೆದುಕೊಳ್ಳುತ್ತಾರೆ”  ಎಂದರು.

    Verbattle
    Verbattle
    Verbattle
    Government JDS Karnataka kumaraswamy m News Politics Trending ಕಳ್ಳತನ ಕಾಂಗ್ರೆಸ್ ಕಾನೂನು
    Share. Facebook Twitter Pinterest LinkedIn Tumblr Email WhatsApp
    Previous Articleಪಟಾಕಿ‌ ಸಿಡಿಸುವಾಗ ಅವಘಡ | Fire Crackers
    Next Article ಆಪರೇಷನ್ ಭೀತಿ-ಜೆಡಿಎಸ್ ರೆಸಾರ್ಟ್ ರಾಜಕಾರಣ | JDS
    vartha chakra
    • Website

    Related Posts

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    March 8, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    March 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    March 5, 2026

    7 Comments

    1. Arijzw on February 19, 2026 12:21 am

      Immerse yourself in a wave of emotions from games. crown coin casino official site offers convenient payments and support. Become a lucky one today!

      Reply
    2. Zpidks on February 21, 2026 12:07 am

      Feast on massive potential in Sweet Bonanza: scatters trigger free spins sweet bonanza, bombs multiply prizes sky-high. One spin can deliver thousands of times your bet. Play and prosper!

      Reply
    3. Njeodh on February 25, 2026 9:16 am

      Roar with excitement as buffalos charge across your screen! aristocrat buffalo slot offers 1024 ways to win, stacked wilds, and golden jackpot features that explode your balance. Play now for legendary payouts!

      Reply
    4. Ibuhnr on February 27, 2026 1:15 pm

      Get in on the action with chumba casino free play generous free Sweeps Coins bonus. Play premium games daily and redeem Sweeps for cash prizes. Start winning now!

      Reply
    5. Jfgjik on March 1, 2026 6:59 pm

      stake bonus Originals + Pragmatic Play + Evolution + Hacksaw + Nolimit = unbeatable game selection. Crypto speed included.

      Reply
    6. Oebmga on March 3, 2026 11:51 am

      Experience DraftKings jackpot Casino magic now. New players get 500 spins for $5 + up to $1K credits on first-day net losses. Spin, win, repeat!

      Reply
    7. Gspygi on March 6, 2026 8:19 am

      Opravdova lekarna = opravdove uspory az 80 % na lecich
      opravdovalekarna

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DavidLag on ಪ್ರಹ್ಲಾದ್ ಜೋಷಿ ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸವಾಲು
    • Jamesjaini on ರಾಮೋತ್ಸವಕ್ಕೆ ಸಜ್ಜಾದ ಮುಸ್ಲಿಂ ಶಾಸಕ | Ramotsava
    • ThomasZes on ಎದೆ ನಡುಗಿಸಿದ ಭೀಕರ ಹತ್ಯೆ.
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    March 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    March 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    March 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.