ಬೆಂಗಳೂರು,ಸೆ.10-ಕಾಂಗ್ರೆಸ್ ಮುಖಂಡ ಹಾಗೂ ಶಾಸಕ ದಿನೇಶ್ ಗುಂಡೂರಾವ್ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ವ್ಯಕ್ತಿ ನಾಪತ್ತೆಯಾಗಿರುವ ಬಗ್ಗೆ ಸಂಜಯನಗರ ಠಾಣೆಯಲ್ಲಿ ದೂರು ದಾಖಲಾಗಿದೆ.
ಕಳೆದ ಮೂರು ವರ್ಷಗಳಿಂದ ದಿನೇಶ್ ಗುಂಡೂರಾವ್ ಮನೆಯಲ್ಲಿ ಪಶ್ಚಿಮ ಬಂಗಾಳ ಮೂಲದ ಸಂಜು ಶರ್ಮಾ (41) ಕೆಲಸ ಮಾಡಿಕೊಂಡಿದ್ದಾನೆ.
ಕಳೆದ ಸೆ. 2 ರಂದು ಆತ ಬೆಳಗ್ಗೆ ಮನೆಯಿಂದ ಹೊರ ಹೋದಾತ ವಾಪಸ್ ಬಂದಿಲ್ಲ ಎಂದು ದಿನೇಶ್ ಗುಂಡೂರಾವ್ ಆಪ್ತ ಸಹಾಯಕರಿಂದ ಸಂಜಯನಗರ ಠಾಣೆಯಲ್ಲಿ ದೂರು ದಾಖಲಾಗಿದೆ.
ದೂರು ದಾಖಲಾದ ಬೆನ್ನಲ್ಲೇ ಪ್ರಕರಣ ದಾಖಲಿಸಿಕೊಂಡ ಸಂಜಯನಗರ ಪೊಲೀಸರು ಸಂಜು ಶರ್ಮಾ ಪತ್ತೆಗೆ ತೀವ್ರ ಶೋಧ ಕೈಗೊಂಡಿದ್ದಾರೆ.
Previous Articleಪೊಲೀಸರ ರಾತ್ರಿ ಪ್ರಯಾಣಕ್ಕೆ ಬ್ರೇಕ್
Next Article Honey trap ಖೆಡ್ಡಾಕ್ಕೆ ಬಿದ್ದ ಬಿಜೆಪಿ ಮುಖಂಡ!