ಬೆಂಗಳೂರು,ಸೆ.15-
ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಜಾರಿ ನಿರ್ದೇಶನಾಲಯ(ಇ.ಡಿ) ಕಂಟಕ ಎದುರಾಗಿದೆ.ಇವರ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಮತ್ತೊಮ್ಮೆ ಸಮನ್ಸ್ ಜಾರಿ ಮಾಡಿದೆ.
ಸ್ವತಃ ಶಿವಕುಮಾರ್ ಅವರೇ ಟ್ವೀಟ್ ಮೂಲಕ ಈ ವಿಷಯ ಧೃಡ ಪಡಿಸಿದ್ದು ಭಾರತ್ ಜೋಡೊ ಯಾತ್ರೆ ಹಾಗೂ ವಿಧಾನಸಭೆ ಅಧಿವೇಶನ ನಡೆಯುತ್ತಿರುವ ಮಧ್ಯೆಯೇ ಮತ್ತೊಮ್ಮೆ ಇ.ಡಿ ನನಗೆ ಸಮನ್ಸ್ ನೀಡಿದೆ. ತನಿಖೆಗೆನಾನು ಸಹಕರಿಸಲು ಸಿದ್ಧ. ಆದರೆ, ಈ ಸಮನ್ಸ್ ನೀಡಿರುವ ಸಮಯ ಹಾಗೂ ಮೇಲಿಂದ ಮೇಲೆ ನೀಡುತ್ತಿರುವ ಕಿರುಕುಳದಿಂದಾಗಿ ಸಾಂವಿಧಾನಿಕ ಮತ್ತು ರಾಜಕೀಯ ಕರ್ತವ್ಯಗಳನ್ನು ನಿರ್ವಹಿಸಲು ತೊಂದರೆಯಾಗುತ್ತಿದೆ’ ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.
ದೆಹಲಿಯ ಸಫ್ದರ್‌ಜಂಗ್ ಎನ್‌ಕ್ಲೇವ್‌ನಲ್ಲಿರುವ ಶಿವಕುಮಾರ್ ಅವರ ನಿವಾಸದ ಮೇಲೆ ತನಿಖಾ ಸಂಸ್ಥೆಗಳು ದಾಳಿ ನಡೆಸಿದ ವೇಳೆ 8.59 ಕೋಟಿ ರೂಪಾಯಿ ನಗದು ದೊರೆತಿದ್ದರಿಂದ, ಐಪಿಸಿಯ ಕಲಂ 120 ‘ಬಿ’ ಅಡಿ ಪ್ರಕರಣ ದಾಖಲಿಸಲಾಗಿದೆ
Previous Articleಹೊರಟ್ಟಿ ಪರಿಷತ್ ಸಭಾಪತಿಯಾಗಲಿದ್ದಾರೆ
Next Article ಸೆರೆವಾಸ ಮುಗಿಸಿದವರ ಜೀವನಕ್ಕೆ ಆಧಾರ