Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » CMಆಯ್ಕೆಗೆ DK ಶಿವಕುಮಾರ್ ಷರತ್ತು
    Bengaluru

    CMಆಯ್ಕೆಗೆ DK ಶಿವಕುಮಾರ್ ಷರತ್ತು

    vartha chakraBy vartha chakraMay 18, 2023Updated:May 18, 20231 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ಮುಖ್ಯಮಂತ್ರಿ ಆಯ್ಕೆ ವಿಚಾರವಾಗಿ ಕಳೆದ ಮೂರು ದಿನಗಳಿಂದ ಉಂಟಾಗಿದ್ದ ಬಿಕ್ಕಟ್ಟು ಕೊನೆಗೂ ಬಗೆಹರಿದಿದೆ. ಹಲವು ಸುತ್ತಿನ ರಾಜಿ ಸಂಧಾನದ ಬಳಿಕ ಮೊದಲ ಅವಧಿಗೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಲು ಸಮ್ಮತಿಸಿದ ಡಿಕೆ ಶಿವಕುಮಾರ್ ಇದಕ್ಕಾಗಿ ಷರತ್ತು ವಿಧಿಸಿದ್ದಾರೆ.
    ಎರಡೂವರೆ ವರ್ಷಗಳ ಬಳಿಕ ಅಧಿಕಾರ ಬಿಟ್ಟುಕೊಡುವ ವಾಗ್ದಾನವನ್ನು ಸಿದ್ದರಾಮಯ್ಯ ಅವರು ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾಡಬೇಕು ಎಂಬುದು ಡಿ.ಕೆ ಶಿವಕುಮಾರ್‌ ಅವರ ಷರತ್ತು ಇದಕ್ಕಾಗಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ.
    ಕಳೆದ ಎರಡು ದಿನಗಳಿಂದ ದೆಹಲಿಯಲ್ಲಿ ಮುಖ್ಯಮಂತ್ರಿ ಆಯ್ಕೆ ಕುರಿತಂತೆ ಸರಣಿ ಸಭೆಗಳು ನಡೆದವು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ತಮ್ಮ ನಿಲುವುಗಳಿಗೆ ಬಿಗಿಯಾಗಿ ಅಂಟಿಕೊಂಡ ಪರಿಣಾಮ ಬಿಕ್ಕಟ್ಟಿನ ವಾತಾವರಣ ಸೃಷ್ಟಿಯಾಗಿತ್ತು.
    ಅಂತಿಮವಾಗಿ ಕಳೆದ ರಾತ್ರಿ, ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್‌ ಜತೆಗೆ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್‌ ಮಾತುಕತೆ ನಡೆಸಿ, ಮುಖ್ಯಮಂತ್ರಿ ಸ್ಥಾನದ ವಿಚಾರವಾಗಿ ಅಂತಿಮ ನಿರ್ಧಾರ ಕೈಗೊಂಡರು. ನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ, ನಿರ್ಧಾರಕ್ಕೆ ಒಪ್ಪಿಗೆ ಪಡೆಯಲಾಯಿತು ಎಂದು ಮೂಲಗಳು ತಿಳಿಸಿವೆ.
    ತಲಾ ಎರಡೂವರೆ ವರ್ಷಗಳ ಅಧಿಕಾರ ಹಂಚಿಕೆಗೆ ಇಬ್ಬರೂ ನಾಯಕರು ಒಪ್ಪಿಕೊಂಡಿದ್ದಾರೆ. ಸಿದ್ದರಾಮಯ್ಯ ಮೊದಲ ಅವಧಿಯಲ್ಲಿ ಅಧಿಕಾರ ನಡೆಸಲಿದ್ದಾರೆ. ನಂತರದ ಅವಧಿಗೆ ಡಿ.ಕೆ ಶಿವಕುಮಾರ್‌ ಮುಖ್ಯಮಂತ್ರಿಯಾಗಲಿದ್ದಾರೆ.
    ಅಧಿಕಾರ ಹಂಚಿಕೆ ಮತ್ತು ಇತರ ವಿಷಯಗಳಲ್ಲಿ ಒಮ್ಮತಕ್ಕೆ ಬರುವ ಸಲುವಾಗಿಯೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಅವರು ಇಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಬೆಂಗಳೂರಿನ ಕ್ವೀನ್ಸ್‌ ರಸ್ತೆಯಲ್ಲಿರುವ ಇಂದಿರಾ ಭವನದಲ್ಲಿ ಸಂಜೆ 7 ಗಂಟೆಗೆ ಸಭೆ ನಡೆಯುತ್ತಿದ್ದು, ನೂತನ ಶಾಸಕರು, ವಿಧಾನ ಪರಿಷತ್‌ ಸದಸ್ಯರು, ಸಂಸದರು ಹಾಜರಿರಬೇಕಾಗಿ ಸೂಚಿಸಿದ್ದಾರೆ.
    ಈ ಸಭೆಯಲ್ಲಿ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಯಾಗಿ ಆಯ್ಕೆ ಮಾಡಿರುವ ನಿರ್ಧಾರ ಪ್ರಕಟಿಸಲಾಗುವುದು ನಂತರ ಸಿದ್ದರಾಮಯ್ಯ ಎರಡುವರೆ ವರ್ಷಗಳ ಅಧಿಕಾರ ಅವಧಿಯನ್ನು ಪೂರ್ಣಗೊಳಿಸಿ ಬಳಿಕ ಡಿಕೆ ಶಿವಕುಮಾರ್ ಅವರಿಗೆ ಅಧಿಕಾರ ಹಸ್ತಾಂತರದ ಘೋಷಣೆ ಮಾಡಲಿದ್ದಾರೆ ನಂತರ ಶಾಸಕರ ನಿಯೋಗ ರಾಜಭವನಕ್ಕೆ ತೆರಳಿ ಶಾಸಕಾಂಗ ನಾಯಕನ ಆಯ್ಕೆ ವಿಚಾರದ ಬಗ್ಗೆ ಪತ್ರ ನೀಡಿ ಪ್ರಮಾಣವಚನ ಸ್ವೀಕಾರ ಸಮಾರಂಭ ಆಯೋಜಿಸಲು ಮನವಿ ಮಾಡಲಿದೆ.
    ಉನ್ನತ ಮೂಲಗಳ ಪ್ರಕಾರ ಶನಿವಾರ ಪ್ರಮಾಣ ವಚನ ಸಮಾರಂಭ ನಡೆಯಲಿದ್ದು ಇದಕ್ಕಾಗಿ ಈಗಾಗಲೇ ಕಂಠೀರವ ಕ್ರೀಡಾಂಗಣದಲ್ಲಿ ಸಿದ್ಧತೆಗಳು ನಡೆದಿದೆ.

    Verbattle
    Verbattle
    Verbattle
    m ಕಾಂಗ್ರೆಸ್ ಡಿ.ಕೆ ಶಿವಕುಮಾರ್ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಪರಮೇಶ್ವರ್ ಆಗುತ್ತಾರಂತೆ CM!
    Next Article ಅಬ್ಬಾ, ಸಮೀರ್ ವಾಂಖಡೆ ಬಳಿ ಎಷ್ಟೊಂದು ಆಸ್ತಿ!
    vartha chakra
    • Website

    Related Posts

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax on ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?
    • LinwoodGah on ಧರೆಗುರುಳಿದ ಭಾರೀ ಗಾತ್ರದ ತೇರು | Anekal
    • LinwoodGah on ಬಲೆಗೆ ಬಿದ್ದ ಡ್ರಗ್ ಫೆಡ್ಲರ್ ಗಳು
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.