ಬೆಂಗಳೂರು,
ಮರಕ್ಕೆ ಬೇರು ಎಷ್ಟು ಮುಖ್ಯವೋ, ಮನುಷ್ಯನಿಗೆ ನಂಬಿಕೆಯೂ ಅಷ್ಟೇ ಮುಖ್ಯ ಎನ್ನುವ ಮೂಲಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧಿಕಾರ ಹಂಚಿಕೆ ವಿಳಂಬಕ್ಕೆ ಪರೋಕ್ಷವಾಗಿ ಮತ್ತೆ ಬೇಸರ ವ್ಯಕ್ತಪಡಿಸಿದ್ದಾರೆ.
ಸಾರ್ವಜನಿಕ ವೇದಿಕೆಗಳಲ್ಲಿ ಒಂದಲ್ಲಾ ಒಂದು ರೀತಿ ನಂಬಿಕೆ ಮತ್ತು ಭರವಸೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರ ರಚನೆ ಸಮಯದಲ್ಲಿ ನೀಡಿದ್ದಾರೆ ಎನ್ನಲಾದ ಮಾತಿನ ಬಗ್ಗೆ ನೆನಪಿಸುತ್ತಿದ್ದಾರೆ.
ಈ ಮೂಲಕ ತಾವು ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು ಎಂಬ ಸಂದೇಶ ರವಾನಿಸುತ್ತಿದ್ದಾರೆ
ಮನುಷ್ಯತ್ವ ಮೋಕ್ಷಕ್ಕೆ ಮೂಲ, ಮಾನವೀಯತೆಯನ್ನು ಎಂದಿಗೂ ಮರೆಯಬಾರದು, ತರಳಬಾಳು ಹುಣ್ಣಿಮೆ ಮಹೋತ್ಸವದಿಂದ ಎಲ್ಲಾ ಸಮಾಜಕ್ಕೂ ಬೆಳಕು, ಭರವಸೆ, ಬದಲಾವಣೆ ಸಿಗಬೇಕು.
ನನಗೆ ಪೂರ್ವನಿಯೋಜಿತ ಕಾರ್ಯಕ್ರಮಗಳು ಇದ್ದರೂ ತರಳಬಾಳು ಹುಣ್ಣಿಮೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೇನೆ, ಧರ್ಮ ಯಾವುದಾದರೂ ತತ್ವವೊಂದೆ, ನಾಮ ನೂರಾದರೂ ದೈವವೊಂದೆ, ಪೂಜೆ ಯಾವುದಾದರೂ ಭಕ್ತಿಯೊಂದೆ, ಕರ್ಮ ಹಲವಾದರೂ ನಿಷ್ಠೆಯೊಂದೆ, ದೇವನೊಬ್ಬ ನಾಮ ಹಲವು, ಇದರ ಮೇಲೆ ನಂಬಿಕೆ ಇಟ್ಟು ಇಂತಹ ಭವ್ಯ ಸಭೆಯಲ್ಲಿ ನಾವು ಸೇರಿದ್ದೇವೆ.
ನಾನು ಶ್ರೀಗಂಗಾಧರ ಅಜ್ಜಯ್ಯ ಅವರ ಶಿಷ್ಯ, ಅವರು ಮಾನವ ಧರ್ಮಕ್ಕೆ ಜಯವಾಗಲಿ, ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಸಿಗಲಿ ಎಂಬ ಸಂದೇಶ ಕೊಟ್ಟಿದ್ದಾರೆ, ನಾನು ಅದನ್ನು ಪಾಲನೆ ಮಾಡಿಕೊಂಡು ಬರುತ್ತಿದ್ದೇನೆ, ಅಮ್ಮನ ನೆನಪು ಪ್ರೀತಿಯ ಮೂಲ, ದೇವರ ನೆನಪು ಭಕ್ತಿಯ ಮೂಲ, ಗುರುವಿನ ನೆನಪು ಜ್ಞಾನದ ಮೂಲ, ಈ ಮೂರರ ನೆನಪು ಮನುಷ್ಯತ್ವದ ಮೂಲ, ಮನುಷ್ಯತ್ವ ಮೋಕ್ಷಕ್ಕೆ ಮೂಲ, ಮೋಕ್ಷ ಪಡೆಯಲು ಲಕ್ಷಾಂತರ ಜನ ಶ್ರೀಗಳ ಮಾತು ಕೇಳಲು ಬಂದಿದ್ದೀರಿ.
ಮನುಷ್ಯನ ಹುಟ್ಟು ಆಕಸ್ಮಿಕ, ಸಾವು ಅನಿವಾರ್ಯ, ಜನನ ಉಚಿತ, ಮರಣ ಖಚಿತ, ಈ ಹುಟ್ಟು ಸಾವಿನ ನಡುವೆ ನಾವು ಏನು ಮಾಡುತ್ತೇವೆ ಎಂಬುದು ಬಹಳ ಮುಖ್ಯ. ಉಳಿ ಪೆಟ್ಟು ಬೀಳದೆ ಕಲ್ಲು ಶಿಲೆಯಾಗುವುದಿಲ್ಲ, ನೇಗಿಲಿನಿಂದ ಉಳುಮೆ ಮಾಡದೇ ಯಾವುದೇ ಭೂಮಿ ಮಟ್ಟ ಮಾಡಲು ಆಗುವುದಿಲ್ಲ, ನಿಮ್ಮ ಬದುಕಿನಲ್ಲಿ ನೀವು ಶ್ರಮಪಟ್ಟರೆ ಮಾತ್ರ ಫಲ ಅನುಭವಿಸಲು ಸಾಧ್ಯ ಎಂದು ಹೇಳಿದರು
ದೇವರು ನಮಗೆ ವರ, ಶಾಪ ನೀಡುವುದಿಲ್ಲ, ಕೇವಲ ಅವಕಾಶ ಮಾತ್ರ ನೀಡುತ್ತಾನೆ, ನಮಗೆ ಸಿಕ್ಕ ಅವಕಾಶದಲ್ಲಿ ನಾವು ಏನು ಮಾಡುತ್ತೇವೆ ಎಂಬುದು ಮುಖ್ಯ, ನಮಗೆ ಅವಕಾಶ ಸಿಕ್ಕಾಗ ಸಾಕ್ಷಿಗುಡ್ಡೆ ಬಿಟ್ಟು ಹೋಗಬೇಕು. ಅಲೆಗ್ಸಾಂಡರ್ ಭಾರತಕ್ಕೆ ಬರುವಾಗ ಅವರ ಗುರು ಭಾರತದಿಂದ ಐದು ವಸ್ತು ತೆಗೆದುಕೊಂಡು ಬಾ, ಆಗ ನೀನು ಇಡೀ ಭಾರತ ಗೆದ್ದಂತೆ ಎಂದು ಹೇಳುತ್ತಾನೆ, ಆ ಐದು ವಸ್ತುಗಳೆಂದರೆ, ರಾಮಾಯಣ, ಮಹಾಭಾರತ ಗ್ರಂಥ, ಗಂಗಾ ಜಲ, ಕೃಷ್ಣನ ಕೊಳಲು, ತತ್ವಜ್ಞಾನ ತಂದರೆ ಇಡೀ ಭಾರತವನ್ನೇ ತಂದಂತೆ ಎಂದಿದ್ದರು.
ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕಾರಣ ಇರಬಾರದು, ಯಾವುದೇ ಧರ್ಮ ಬೇರೆಯವರಿಗೆ ತೊಂದರೆ ಮಾಡು ಎಂದು ಹೇಳುವುದಿಲ್ಲ, ಶುಭಂ ಕರೋತಿ ಕಲ್ಯಾಣಂ ಆರೋಗ್ಯಂ ಧನ ಸಂಪದ, ಜ್ಞಾನ ಶಕ್ತಿ ಸ್ವರೂಪಸ್ಯ ದೀಪ ಜ್ಯೋತಿ ಪ್ರಕಾಶಿತ.
ಎಲ್ಲರಿಗೂ ಮಂಗಳವಾಗಲಿ, ಶುಭವಾಗಲಿ, ಆರೋಗ್ಯವಾಗಿರಿ ಎಂಬುದಾಗಿ ಹಾರೈಸಿ ಶ್ರೀಗಳು ಹಚ್ಚಿದ ಜ್ಯೋತಿ ಬೆಳಗುತ್ತಿದೆ, ನಾನು ಮಠದ ಅಭಿಮಾನಿಯಾಗಿ, ಸರ್ಕಾರದ ಪ್ರತಿನಿಧಿಯಾಗಿ ಬಂದಿದ್ದೇನೆ, ಗುರುಗಳ ಮಾರ್ಗದರ್ಶನವನ್ನು ನಾವು ಯಾವ ರೀತಿ ಪಡೆದುಕೊಳ್ಳುತ್ತೇವೆ ಎಂಬುದು ಬಹಳ ಮುಖ್ಯ ಎಂದರು.
Previous Articleಭಿನ್ನಾಭಿಪ್ರಾಯಗಳಿಗೆ ತೆರೆ ಎಳೆದ ಶಶಿ ತರೂರ್!
Next Article ಕೊಲೆ ಮಾಡಿ ಮನೆಯಲ್ಲಿ ಹೂತು ಹಾಕಿದ ಪಾಪಿ

