ಬೆಂಗಳೂರು,ಸೆ.15 – ಕಳ್ಳತನವಾಗುವ ವಾಹನಗಳ (Stolen Vehicle) ಬಗ್ಗೆ ಪೊಲೀಸ್ ಠಾಣೆಗೆ ಹೋಗಿ ದೂರು ನೀಡುವ ಅಗತ್ಯವಿಲ್ಲ,ಏಕೆಂದರೆ ರಾಜ್ಯ ಪೊಲೀಸ್ ಇಲಾಖೆಯು ಇದೇ ಮೊದಲ ಬಾರಿಗೆ ಇ-ಎಫ್ಐಆರ್ ವ್ಯವಸ್ಥೆಯನ್ನ ಪರಿಚಯಸಿದೆ.
ನಗರದ ನೃಪತುಂಗ ರಸ್ತೆಯ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಕಾಗದರಹಿತ ಹಾಗೂ ಪರಿಸರ ಸ್ನೇಹಿ ಒತ್ತುಕೊಡಲು ಇದೇ ಮೊದಲ ಬಾರಿಗೆ ಇ-ಎಫ್ಐಅರ್ ಸೌಲಭ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.
ದಿನೇ ದಿನೇ ಪೊಲೀಸ್ ಇಲಾಖೆಯು ಸ್ಮಾರ್ಟ್ ಆಗುತ್ತಿದ್ದು ಇ-ಎಫ್ಐಆರ್ ವ್ಯವಸ್ಥೆಯಿಂದ ಸಾರ್ವಜನಿಕರು ಸುಖಾಸುಮ್ಮನೆ ಪೊಲೀಸ್ ಠಾಣೆಗೆ ಅಲೆಯುವುದು ತಪ್ಪಲಿದೆ.
ರಾಜ್ಯ ಪೊಲೀಸ್ ಇಲಾಖೆಯ ಅಧಿಕೃತ ಜಾಲತಾಣ ಕರ್ನಾಟಕ ಪೊಲೀಸ್ ವೆಬ್ ಸೈಟಿಗೆ ಹೋಗಿ ಅಲ್ಲಿ ಸಿಟಿಜನ್ ಡೆಸ್ಕ್ ಮೇಲೆ ಕ್ಲಿಕ್ ಮಾಡಿ ನೋಂದಾಯಿಸಬೇಕಿದೆ. ಲಾಗಿನ್ ಆದ ಬಳಿಕ ಮೋಟಾರ್ ವಾಹನ ಕಳುವಿಗೆ ಸಂಬಂಧಪಟ್ಟಂತೆ ಇ-ಎಫ್ಐಅರ್ ದಾಖಲಿಸಬಹುದು. ವಾಹನದ ವಿವರ ಹಾಗೂ ದೂರುದಾರರ ಮಾಹಿತಿ ನಮೂದಿಸಬೇಕು. ಒಮ್ಮೆ ವಾಹನದ ನೋಂದಣಿ ಸಂಖ್ಯೆ ಹೆಸರು ನಮೂದಿಸಿದರೆ ಸ್ವಯಂಚಾಲಿತವಾಗಿ ವಾಹನದ ಎಲ್ಲಾ ದಾಖಲಾತಿ ತಾನಾಗೇ ಭರ್ತಿಯಾಗಲಿದೆ. ಅನಂತ ನಿಮ್ಮ ಮೊಬೈಲ್ ನಂಬರ್ ಮೇಸೆಜ್ ಬರಲಿದೆ. ಈ ಮೂಲಕ ಸ್ವಯಂಚಾಲಿತವಾಗಿ ಇ-ಎಫ್ಐಅರ್ ದಾಖಲಾಗಲಿದೆ.