ಬೆಂಗಳೂರು, ಡಿ. 9: ಹಣವನ್ನು ಪೆಟ್ಟಿಗೆಯಲ್ಲಿ ಕೂಡಿಟ್ಟರೆ ಐಟಿ ದಾಳಿ ಸೇರಿದಂತೆ ನಾನಾ ತೊಂದರೆಗಳು ಬರುತ್ತವೆ. ಅದೇ ರೀತಿ ರಕ್ತವನ್ನು ದೇಹದಲ್ಲಿ ಕೂಡಿಟ್ಟರೂ ತೊಂದರೆ. ಹೀಗಾಗಿ ಎರಡನ್ನೂ ಆಗಾಗ್ಗೆ ದಾನ ಮಾಡಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಅವರು ಕಿವಿಮಾತು ಹೇಳಿದ್ದಾರೆ
ಬೆಂಗಳೂರಿನಲ್ಲಿ ಎಚ್.ಡಿ.ಎಫ್. ಸಿ.ಬ್ಯಾಂಕ್ ಏರ್ಪಡಿಸಿದದ್ದ 15 ನೇ ವರ್ಷದ ರಕ್ತದಾನ ಶಿಬಿರದಲ್ಲಿ ಮಾತನಾಡಿದ ಅವರು,ಹಣಕೊಟ್ಟು ಜೀವ ಪಡೆಯಲು ಆಗುವುದಿಲ್ಲ. ಆದ ಕಾರಣ ಜೀವ ಉಳಿಸುವ ರಕ್ತವನ್ನು ಸ್ವಯಂಪ್ರೇರಿತರಾಗಿ ದಾನ ಮಾಡಬೇಕು ಎಂದರು.
ದೇಹದಲ್ಲಿ ರಕ್ತ ಕೂಡಿಟ್ಟುಕೊಂಡರೆ ಮಧುಮೇಹ, ಹೃದಯಾಘಾತ ಸೇರಿದಂತೆ ಅನೇಕ ರೋಗಗಳು ಬರುತ್ತವೆ. ಬಡ ರೋಗಿಗಳಿಗೆ, ಅವಶ್ಯಕತೆ ಇರುವವರಿಗೆ ರಕ್ತದಾನ ಮಾಡುವ ಮೂಲಕ ಅವರ ಆರೋಗ್ಯಕ್ಕೆ ನೆರವಾಗಬೇಕು, ರಕ್ತ ಮತ್ತು ಹಣ ಎರಡೂ ಸಮಾಜದಲ್ಲಿ ಸಮಪ್ರಮಾಣದಲ್ಲಿ ಬಳಕೆಯಾಗಬೇಕು. ಆಗ ಮಾತ್ರ ನಮ್ಮ ಸಮಾಜ ಆರೋಗ್ಯವಾಗಿರುತ್ತದೆ ಎಂದು ಹೇಳಿದರು.
ಬ್ಯಾಂಕಿನವರು ಸಹ ಹಣವನ್ನು ಕೂಡಿಟ್ಟುಕೊಳ್ಳದೆ, ಜನರ ನಡುವೆ ಹಂಚಬೇಕು. ಹಣದ ಹರಿವು ಹೆಚ್ಚಾದಷ್ಟು ಲಾಭ, ಇಲ್ಲದಿದ್ದರೆ ತೊಂದರೆಗಳು ಬರುತ್ತವೆ ಎಂದರು.
ರಾಜ್ಯದ 2 ಸಾವಿರ ಗ್ರಾಮೀಣ ಶಾಲೆಗಳನ್ನ ಸಿಎಸ್ಆರ್ ಅನುದಾನದ ಅಡಿಯಲ್ಲಿ ಅಭಿವೃದ್ಧಿ ಮಾಡಲಾಗುವುದು. ಈ ಬಗ್ಗೆ ಖಾಸಗಿ ಕಂಪೆನಿಗಳ ಆಡಳಿತ ಮಂಡಳಿಗಳ ಜೊತೆ ಮಾತುಕತೆ ಸಡೆಸಲಾಗಿದೆ.ಕರ್ನಾಟಕದ ಶಾಲೆಗಳಲ್ಲಿ 50 ಸಾವಿರ ಶಿಕ್ಷಕರ ಕೊರತೆ ಇದೆ. ಈಗಾಗಲೆ ಎಲ್ಲಾ ಖಾಸಗಿ ಶಾಲಾ ಆಡಳಿತ ಮಂಡಳಿಗಳ ಜೊತೆ ಮಾತುಕತೆ ನಡೆಸಿ ಗ್ರಾಮೀಣ ಭಾಗದ ಒಂದೊಂದು ಶಾಲೆಗಳ ನಿರ್ವಹಣೆ ಮಾಡುವುದರ ಬಗ್ಗೆ ಚರ್ಚೆ ಮಾಡಲಾಗಿದೆ ಎಂದು ವಿವರಿಸಿದರು.
ಸರ್ಕಾರದಿಂದ ಒಂದು ಸಮಿತಿ ರಚನೆ ಮಾಡಿ ಕಾರ್ಪೊರೇಟ್ ವಲಯದಿಂದ 2 ಸಾವಿರ ಶಾಲೆಗಳ ಅಭಿವೃದ್ಧಿ ಹಾಗೂ ನಿರ್ವಹಣೆಗೆ ಯೋಜನೆ ರೂಪಿಸಲಾಗಿದೆ. ಕಂಪೆನಿಗಳು ಅವರಿಗೆ ಅನುಕೂಲವಾಗುವ ಸ್ಥಳಗಳಲ್ಲಿ ಶಾಲೆಗಳ ಉಸ್ತುವಾರಿ ನೋಡಿಕೊಳ್ಳಬಹುದು. ಸರ್ಕಾರ ಸಮಾಜಮುಖಿ ಕೆಲಸಗಳಲ್ಲಿ ಮಧ್ಯ ಪ್ರವೇಶ ಮಾಡುವುದಿಲ್ಲ ನೀವು ಆಯ್ಕೆ ಮಾಡಿಕೊಂಡ ಶಾಲೆಗಳ ಮುಂದೆ ಎಚ್.ಡಿ.ಎಫ್. ಸಿ. ಬ್ಯಾಂಕ್ ಅಭಿವೃದ್ದಿ ಪಡಿಸಿದ ಶಾಲೆ ಎಂದು ಹೆಸರಿಸಿಕೊಳ್ಳಬಹುದು. ಈ ಕಾರ್ಯಕ್ರಮವನ್ನು ತೆಲಂಗಾಣದ ನಮ್ಮ ಪಕ್ಷದ ಪ್ರಣಾಳಿಕೆಯಲ್ಲೂ ಉಲ್ಲೇಖಿಸಲಾಗಿದೆ ಎಂದು ವಿವರಿಸಿದರು.
ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳ ಅಭಿವೃದ್ದಿಗೆ ಸಿಎಸ್ಆರ್ ಅನುದಾನ ಬಳಸಿ ಎಂದು ಕರೆ ನೀಡಿದಾಗ ಎಚ್ಡಿಎಫ್ಸಿ ಬ್ಯಾಂಕ್ ಮುಂದೆ ಬಂತು. ಇದು ಕರ್ನಾಟಕದ ಮತ್ತು ಕಾಂಗ್ರೆಸ್ ಸರ್ಕಾರದ ಅತ್ಯಮೂಲ್ಯವಾದ ಯೋಜನೆ. ಗ್ರಾಮೀಣ ಪ್ರದೇಶದ ಜನರು ತಮ್ಮ ಮಕ್ಕಳನ್ನು ವಿದ್ಯಾಭ್ಯಾಸಕ್ಕಾಗಿ ನಗರಕ್ಕೆ ವಲಸೆ ಬರುವುದನ್ನು ತಪ್ಪಿಸಬೇಕು. ನಗರ ಪ್ರದೇಶದ ಮೇಲಿನ ಒತ್ತಡ ಕಡಿಮೆ ಮಾಡಬೇಕು. ಇದಕ್ಕೆ ಎಲ್ಲರೂ ಕೈ ಜೋಡಿಸಬೇಕು ಎಂದು ಕರೆ ನೀಡಿದರು.
LATEST KANNADA NEWS
ಪೊಲೀಸರಿಗೆ ಕೊಟ್ಟ ದೂರನ್ನೇ ಬದಲಾಯಿಸಿದ ಲಕ್ಷ್ಮಿ ಹೆಬ್ಬಾಳ್ಕರ್ | Lakshmi Hebbalkar
5 Comments
мини бизнес мини бизнес .
Rus-Evakuator http://www.evakuator-mow.ru/ .
алкогольное отравление лечение [url=https://xn—–7kcablenaafvie2ajgchok2abjaz3cd3a1k2h.xn--p1ai/]xn—–7kcablenaafvie2ajgchok2abjaz3cd3a1k2h.xn--p1ai[/url] .
allows you to view instagram allows you to view instagram .
Планируете устроить романтический вечер со своей второй половинкой? Сауны Москвы идеально подходят для создания атмосферы любви и уюта. Проведите время вдвоём в одном из наших заведений. Ознакомиться с предложениями можно здесь https://dai-zharu.ru/