ಬೆಂಗಳೂರು,ಜೂ.11- ಡ್ರಗ್ ಪೆಡ್ಲಿಂಗ್‍ನಲ್ಲಿ ತೊಡಗಿದ್ದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿ 10 ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ವಿದ್ಯಾರಣ್ಯಪುರದ ಪ್ರದೇಶವೊಂದರಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ 10 ಲಕ್ಷ ಮೌಲ್ಯದ 11 ಗ್ರಾಂ ಎಂಡಿಎಂಎ ಕ್ರಿಸ್ಟೆಲ್, 6 ಕೆಜಿ ಗಾಂಜಾ, ಮಾರುತಿ ಸುಜುಕಿ ಸ್ವಿಫ್ಟ್ ಕಾರು, 3 ಮೊಬೈಲ್ ಗಳು, ಎಲೆಕ್ಟ್ರಾನಿಕ್ ತೂಕದ ಯಂತ್ರವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ ರಮಣ್ ಗುಪ್ತ ಅವರು ತಿಳಿಸಿದರು.
ಬಂಧಿತ ಆರೋಪಿಗಳಲ್ಲಿ ಓರ್ವ ವಿದ್ಯಾರಣ್ಯಪುರ ಪೊಲೀಸ್ ಠಾಣೆಯ ರೌಡಿಪಟ್ಟಿಯಲ್ಲಿದ್ದು ಆತ ಇನ್ನಿಬ್ಬರ ಜೊತೆ ಸೇರಿ ಕಡಿಮೆ ಸಮಯದಲ್ಲಿ ಹೆಚ್ಚಿನ ಹಣ ಗಳಿಸುವ ಉದ್ದೇಶದಿಂದ ಕೇರಳದಿಂದ ಕಡಿಮೆ ಬೆಲೆಗೆ ಮಾದಕ ವಸ್ತುಗಳನ್ನು ಖರೀಧಿಸಿ ಒಂದು ಗ್ರಾಂ ಎಂಡಿಎಂಎ ಅನ್ನು 8ರಿಂದ10 ಸಾವಿರದಂತೆ ಹಾಗು10 ಗ್ರಾಂ ಗಾಂಜಾವನ್ನು 1ರಿಂದ 2 ಸಾವಿರ ರೂಗಳಂತೆ ಹೆಚ್ಚಿನ ಬೆಲೆಗೆ ಪರಿಚಯಸ್ಥ ಗಿರಾಕಿಗಳಿಗೆ ಮಾರಾಟ ಮಾಡಿ ಅಕ್ರಮ ಹಣ ಸಂಪಾದನೆಯಲ್ಲಿ ತೊಡಗಿರುವುದು ಪ್ರಾಥಮಿಕ ವಿಚಾರಣೆಯಿಂದ ತಿಳಿದುಬಂದಿದೆ. ಆರೋಪಿಗಳು ಮಾದಕ ವಸ್ತುಗಳ ಮಾರಾಟ/ಸಾಗಾಟ ಮಾಡಿರುವುದು ಪ್ರಾಥಮಿಕ ತನಿಖೆಯಿಂದ
ತಿಳಿದು ಬಂದಿರುವುದರಿಂದ ಇವರುಗಳ ವಿರುದ್ದ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್.
ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಲಾಗಿದೆ ಎಂದರು.
Previous Articleಗುಂಡಿಟ್ಟು ಸೆರೆ..
Next Article ಬಿಸಿಯೂಟ ಸೇವನೆ: 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ