Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » E Dಪತ್ತೆ ಹಚ್ಚಿದ ಕೋಕನಟ್ ಕೋಡ್ ‌ಏನು ಗೊತ್ತಾ
    Viral

    E Dಪತ್ತೆ ಹಚ್ಚಿದ ಕೋಕನಟ್ ಕೋಡ್ ‌ಏನು ಗೊತ್ತಾ

    vartha chakraBy vartha chakraJanuary 18, 20259 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜ.18-ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಅಕ್ರಮದ ತನಿಖೆ ನಡೆಸುತ್ತಿರುವ
    ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಮುಡಾದ 300 ಕೋಟಿ ರೂ. ಮೌಲ್ಯದ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ.
    ಇದರ ಬೆನ್ನಲ್ಲೇ ಮುಡಾದಲ್ಲಿ ಅಧಿಕಾರಿಗಳು ʼಕೋಕನಟ್ʼ ಕೋಡ್‌ವರ್ಡ್‌ ಬಳಸಿ ಅಕ್ರಮ ವ್ಯವಹಾರಗಳನ್ನು ನಡೆಸುತ್ತಿರುವುದು ಬೆಳಕಿಗೆ ಬಂದಿದೆ.
    ಅಕ್ರಮದ ತನಿಖೆ ನಡೆಸುತ್ತಿರುವ
    ಇಡಿ ಅಧಿಕಾರಿಗಳು ಬಿಲ್ಡರ್‌ ಜಯರಾಮ್ ಮನೆ ಮೇಲೆ ದಾಳಿ ನಡೆಸಿದ್ದರು. ಸತತ ಮೂರು ದಿನ ಇಡಿ ಅಧಿಕಾರಿಗಳು ದಾಳಿ ನಡೆಸಿದಾಗ ಈತನ ಮನೆಯಲ್ಲಿ ಏನಿತ್ತು ಎನ್ನುವ ಅನುಮಾನ ಎಲ್ಲರನ್ನು ಕಾಡುತ್ತಿತ್ತು. ಆದರೆ ಈಗ ಸಿಕ್ಕಿರುವ ಮಾಹಿತಿ ಪ್ರಕಾರ ಮುಡಾ ಅಕ್ರಮದ ಕಿಂಗ್‌ಪಿನ್‌ ಜಯರಾಮ್‌ ಆಗಿದ್ದಾನೆ ಎನ್ನಲಾಗುತ್ತಿದೆ.
    ರಾಜಕಾರಣಿಗಳು ಮತ್ತು ಅಧಿಕಾರಿಗಳಿಗೆ ಬೇನಾಮಿಯಾಗಿರುವ ಆರೋಪಕ್ಕೆ ಸಂಬಂಧಿಸಿದಂತೆ ಜಯರಾಮ್ ಮನೆ ಹಾಗೂ ಕಚೇರಿಯಲ್ಲಿ ಇಡಿ ಅಧಿಕಾರಿಗಳು ನಿರಂತರ 70 ಗಂಟೆಗಳ ಕಾಲ ದಾಳಿ ಮಾಡಿದ್ದರು. ಜಯರಾಮ್ ಮನೆಯಲ್ಲೆ ಬಹುತೇಕ ಬೇನಾಮಿ ವ್ಯವಹಾರಕ್ಕೆ ಸಂಬಂಧಿಸಿದ ದಾಖಲೆಗಳು ಸಿಕ್ಕಿದೆ.
    ಈ ಜಯರಾಮ್ ವಕ್ರತುಂಡ ಗೃಹನಿರ್ಮಾಣ ಸಹಕಾರ ಸಂಘ ಎಂಬ ಗೃಹ ನಿರ್ಮಾಣ ಸಂಸ್ಥೆ ಸ್ಥಾಪನೆ ಮಾಡಿದ್ದ. ಈ ಸಂಘದಲ್ಲಿ ಮುಡಾ ಮಾಜಿ ಆಯುಕ್ತ ದಿನೇಶ್ ಕುಟುಂಬಸ್ಥರು ನಿರ್ದೇಶಕರಾಗಿದ್ದರು.
    ಬಹುತೇಕ ಬೇನಾಮಿ ವ್ಯವಹಾರಗಳನ್ನು ಈ ಸಹಕಾರ ಸಂಘದ ಹೆಸರಿನಲ್ಲಿ ಮಾಡಲಾಗಿದೆ.ಜಯರಾಮ್‌ ಮನೆಯಲ್ಲಿ ದಾಖಲೆಗಳನ್ನು ಶೋಧಿಸುತ್ತಿದ್ದ ಇಡಿ ಆತನ ವಾಟ್ಸಪ್‌ ಚಾಟ್‌ ಪರಿಶೀಲಿಸಿದ್ದಾರೆ. ಈ ವೇಳೆ 1 ಕೋಕನಟ್‌ ಕಳುಹಿಸಿದ್ದೇನೆ. 50 ಕೋಕನಟ್‌ ಕಳುಹಿಸಿದ್ದೇನೆ ಎಂಬ ಮೆಸೇಜ್‌ಗಳು ಅಧಿಕಾರಿಗಳ ಗಮನ ಸೆಳೆದಿದೆ.
    ರಿಯಲ್‌ ಎಸ್ಟೇಟ್‌ ಕೆಲಸ ಮಾಡುವ ಈತ ಕೋಕನಟ್‌ ಯಾಕೆ ಕಳುಹಿಸುತ್ತಾನೆ ಎಂದು ಅನುಮಾನ ಬಂದು ಜಯರಾಮ್‌ನನ್ನು ಮತ್ತಷ್ಟು ವಿಚಾರಣೆಗೆ ಒಳಪಡಿಸಿದಾಗ ಕೋಕನಟ್‌ ಸತ್ಯ ಬೆಳಕಿಗೆ ಬಂದಿದೆ.
    ಮುಡಾ ಹಣಕಾಸಿನ ಅಕ್ರಮಕ್ಕೆ ಕೋಕನಟ್‌ ಎಂಬ ಕೋಡ್‌ವರ್ಡ್‌ ಇಡಲಾಗಿತ್ತು. 1 ಕೋಕನಟ್‌ ಅಂದರೆ 1 ಲಕ್ಷ ರೂ., 50 ಕೋಕನಟ್‌ ಅಂದರೆ 50 ಲಕ್ಷ ರೂ., 100 ಕೋಕನಟ್‌ ಅಂದರೆ 1 ಕೋಟಿ ರೂ. ಕಳುಹಿಸಲಾಗಿದೆ ಎಂದು ಜಯರಾಮ್‌ ಮೆಸೇಜ್‌ ಮಾಡುತ್ತಿದ್ದ.
    ಜಯರಾಮ್‌ ತನ್ನ ಡೈರಿಯಲ್ಲಿ ಮುಡಾ ವ್ಯವಹಾರಕ್ಕೆ ಸಂಬಂಧಿಸಿದಂತೆ ಹಲವಾರು ವಿಚಾರಗಳನ್ನು ಬರೆದುಕೊಂಡಿದ್ದ. ಇಡಿಯ ಪ್ರಾಥಮಿಕ ವಿಚಾರಣೆಯಲ್ಲೇ ಹಲವರ ಹೆಸರನ್ನು ಜಯರಾಮ್ ಬಾಯಿಬಿಟ್ಟಿದ್ದಾನೆ. ಜಯರಾಮ್‌ ಮನೆ ಮೇಲೆ ದಾಳಿ ಆಗುತ್ತಿದ್ದಂತೆ ಮುಡಾ ಮಾಜಿ ಆಯುಕ್ತ ದಿನೇಶ್ ಕುಮಾರ್‌ ಪರಾರಿಯಾಗಿದ್ದರು.
    ಹಲವು ಅಧಿಕಾರಿಗಳಿಗೆ ರಾಜಕಾರಣಿಗಳಿಗೆ ಕೋಕನಟ್ ಹೆಸರಿನಲ್ಲಿ ಜಯರಾಮ್ ಹಣ ಕಳುಹಿಸಿದ್ದ. 15 ವರ್ಷದ ಹಿಂದೆ ಗಾರೆ ಕೆಲಸಕ್ಕೆ ಬಂದಿದ್ದ ಜಯರಾಮ್ ಬೇನಾಮಿಯಿಂದಲೇ ಕೋಟ್ಯಾಧೀಶ್ವರನಾಗಿದ್ದಾನೆ ಎನ್ನಲಾಗುತ್ತಿದೆ. ದಿನೇಶ್ ಕುಮಾರ್ ಗೆ ಬಹಳ ಪರಮಾಪ್ತನಾಗಿದ್ದ ಜಯರಾಮ್ 50-50 ಅನುಪಾತದ ಸೈಟ್‌ ಹಂಚಿಕೆಯಲ್ಲಿ ನಂ 1 ಫಲಾನುಭವಿಯಾಗಿದ್ದಾನೆ. ಕೇವಲ 50-50 ಸೈಟ್‌ನಿಂದ ಮಾತ್ರವಲ್ಲದೇ ಬೇನಾಮಿ ಹಣದಿಂದಲೂ ಜಯರಾಮ್ ಈಗ ಶ್ರೀಮಂತನಾಗಿದ್ದಾನೆ.

    Verbattle
    Verbattle
    Verbattle
    ಇಡಿ Bengaluru ಮೈ ಮೈಸೂರು ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous ArticleCET ಪರೀಕ್ಷೆ ಯಾವಾಗ ಗೊತ್ತಾ
    Next Article ಸಮೂಹ ಶಕ್ತಿ ಸಮಾಜ ಸೇವೆಗೆ ಬಹುಪರಾಕ್
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof on ಬಿಸಿ ಮುಟ್ಟಿಸಿದ ಸಂಚಾರಿ ಪೊಲೀಸ್.
    • LeonardReawn on ಜನವರಿ 26ಕ್ಕೆ ಬದಲಾವಣೆ ಮುನ್ಸೂಚನೆ ನೀಡಿದ ಪರಮೇಶ್ವರ್!
    • Glennhof on ಧರೆಗುರುಳಿದ ಭಾರೀ ಗಾತ್ರದ ತೇರು | Anekal
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.