Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಧಾನಸಭೆ ಚುನಾವಣೆ ಸಿದ್ಧತೆಗೆ‌ ಆಯೋಗದ ಮೆಚ್ಚುಗೆ – ಅಕ್ರಮ ತಡೆಗೆ ಸೂಚನೆ
    ಚುನಾವಣೆ 2024

    ವಿಧಾನಸಭೆ ಚುನಾವಣೆ ಸಿದ್ಧತೆಗೆ‌ ಆಯೋಗದ ಮೆಚ್ಚುಗೆ – ಅಕ್ರಮ ತಡೆಗೆ ಸೂಚನೆ

    vartha chakraBy vartha chakraFebruary 11, 2023No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಫೆ.11-

    ಮುಂಬರುವ  ವಿಧಾನಸಭೆ ಚುನಾವಣೆಗೆ ರಾಜ್ಯದ ಕೇಂದ್ರ ಆಯೋಗ ಮತ್ತು ‌ಜಿಲ್ಲಾಧಿಕಾರಿಗಳು‌ ಕೈಗೊಂಡಿರುವ ಸಿದ್ಧತೆಗಳಿಗೆ ಕೇಂದ್ರ ಚುನಾವಣಾ ಆಯೋಗ (Election Commission of India) ಮೆಚ್ಚುಗೆ ವ್ಯಕ್ತಪಡಿಸಿದ್ದು,ಅಕ್ರಮ ತಡೆಗಟ್ಟಲು ಇನ್ನಷ್ಟು ಪರಿಣಾಮಕಾರಿ ಕ್ರಮಗಳನ್ನು ರೂಪಿಸುವಂತೆ ಸಲಹೆ ಮಾಡಿದೆ.

    ವಿಧಾನಸಭೆ ಚುನಾವಣೆ ಕುರಿತಂತೆ ಜಿಲ್ಲಾಮಟ್ಟದಲ್ಲಿ ನಡೆಯುತ್ತಿರುವ ಪೂರ್ವತಯಾರಿಗಳ ಪರಿಶೀಲನೆಗಾಗಿ ಕೇಂದ್ರ ಚುನಾವಣಾ ಆಯೋಗದ ಮೂರು ತಂಡಗಳು ರಾಜ್ಯದ ವಿವಿಧ  ಜಿಲ್ಲೆಗಳಿಗೆ ನೇರವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿ, ಸ್ಥಳೀಯ ಅಧಿಕಾರಿಗಳೊಂದಿಗೆ ಸಭೆ ನಡೆಸಿತು. ಈ ತಂಡದ ಜೊತೆಗೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ (Manoj Kumar Meena) ಮತ್ತು ಅಪರ ಮುಖ್ಯ ಚುನಾವಣಾಧಿಕಾರಿ ರಾಜೇಂದ್ರ ಚೋಳನ್ (Rajendra Cholan) ಅವರು ಭಾಗವಹಿಸಿದ್ದರು.

    ಆಯೋಗದ ಈ ಮೂರು ತಂಡಗಳ ಈ ಮೂರು ದಿನಗಳ ರಾಜ್ಯ ಬೇಟಿಯಲ್ಲಿ ಮುಖ್ಯವಾಗಿ ನಡೆಸಿದ ಸಭೆಗಳಲ್ಲಿ ಕಳೆದ ವಿಧಾನಸಭಾ ಮತ್ತು ಲೋಕಸಭಾ ಚುನಾವಣೆಗಳಲ್ಲಿ ಅತ್ಯಂತ ಕಡಿಮೆ ಮತದಾನ ನಡೆದಿರುವ ಮತಗಟ್ಟೆಗಳನ್ನು ಗುರುತಿಸುವುದು, ಕಡಿಮೆ ಮತದಾನಕ್ಕೆ ಕಾರಣಗಳನ್ನು ಕಂಡು ಹಿಡಿದು ಸಮಸ್ಯೆಗಳಿಗೆ ಪರಿಹಾರವನ್ನು ಕಂಡು ಹಿಡಿಯುವುದು, ಮತದಾನದ ಜಾಗೃತಿ ಮೂಲಕ ಮತದಾನದ ಪ್ರಮಾಣವನ್ನು ಹೆಚ್ಚಿಸಬೇಕೆಂದು ಅಧಿಕಾರಿಗಳು ಸೂಚಿಸಿದರು.

    ಮತಗಟ್ಟೆಗಳನ್ನು ಗುರುತಿಸುವುದು ಮತ್ತು ಅವುಗಳಿಗೆ ಅಗತ್ಯವಿರುವ ಮೂಲ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವುದು, ಅಗತ್ಯವಿರುವ ಸಿಬ್ಬಂದಿಗಳನ್ನು ನಿಯೋಜಿಸುವುದು, ಹೊಸ ತಂತ್ರಜ್ಞಾನ ಬಳಸಿಕೊಳ್ಳುವ ಮೂಲಕ ಹೆಚ್ಚಿನ ಯುವ-ಮತದಾರರನ್ನು ಸೆಳೆಯುವುದು ಸೇರಿದಂತೆ ಮತದಾರರ ಪಟ್ಟಿಯ ಕುರಿತು ಹೆಚ್ಚಿನ ಪ್ರಚಾರ ಕೈಗೊಳ್ಳಲು ಚರ್ಚಿಸಲಾಯಿತು.

    ಈ ತಂಡಗಳು ಮತದಾರರ ಜಾಗೃತಿಯ ರಾಜ್ಯ ಸ್ವೀಪ್  (Systematic Voters’ Education and Electoral Participation – SVEEP) ಕಾರ್ಯಕ್ರಮಗಳ ಪೂರ್ವ ತಯಾರಿ ಕುರಿತಂತೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಸ್ವೀಪ್ ನೋಡಲ್ (SVEEP Nodal officer) ಅಧಿಕಾರಿಗಳೊಂದಿಗೆ ಸಭೆ ನಡೆಸಿದವು. ಮೊದಲ ದಿನ ಮತಗಟ್ಟೆಗಳು ಸೇರಿದಂತೆ ವಿವಿಧ ರೀತಿಯ ಮೊದಲ ಹಂತದ ಪೂರ್ವತಯಾರಿ ಕಾರ್ಯಗಳನ್ನು ಖುದ್ದಾಗಿ ವೀಕ್ಷಿಸಿದ ತಂಡಗಳು, ಎರಡನೆ ದಿನ ಆಯಾ ವಲಯ ಮಟ್ಟದ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿದರು.

    ನಂತರ ಬೆಂಗಳೂರು ನಗರಕ್ಕೆ ಆಗಮಿಸಿದ ಈ ಮೂರು ತಂಡಗಳ ಹಿರಿಯ ಅಧಿಕಾರಿಗಳು ರಾಜ್ಯ ಮುಖ್ಯ ಚುನಾವಣಾಧಿಕಾರಿ ನೇತೃತ್ವದಲ್ಲಿ ಬೆಳಗಾವಿ ವಲಯದ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೊ ಕಾನ್ಫರೆನ್ಸ್ ಮೂಲಕ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿದರು, ಮಧ್ಯಾಹ್ನದ ನಂತರ ವಿಧಾನಸೌಧದಲ್ಲಿ ಬೆಂಗಳೂರು ವಲಯದ ಜಿಲ್ಲಾಧಿಕಾರಿಗೊಂದಿಗೆ ಸಭೆ ನಡೆಸಿ ನಂತರ ನವದೆಹಲಿಗೆ ಪ್ರಯಾಣ ಬೆಳಸಿದರು.

    Verbattle
    Verbattle
    Verbattle
    #bangalore #politics art ECI ED education Election election commission Elections 2023 india m Manoj Kumar Meena mi Office Rajendra Cholan SVEEP Election ತಂತ್ರಜ್ಞಾನ
    Share. Facebook Twitter Pinterest LinkedIn Tumblr Email WhatsApp
    Previous Articleಮತದಾರರಿಗೆ Congress ಗ್ಯಾರಂಟಿ ಕಾರ್ಡ್
    Next Article ಕರಾವಳಿ – ಮಲೆನಾಡಿಗೆ Amit Shah Big task
    vartha chakra
    • Website

    Related Posts

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026

    ಡಿ.ಕೆ. ಸುರೇಶ್ ಚುಚ್ಚುಮಾತು

    January 21, 2026

    ರಿಯಾಲಿಟಿ ಶೋ ಅಲ್ಲ, ಇದು ಪಕ್ಕಾ ‘ಸ್ಕ್ರಿಪ್ಟೆಡ್’ ಡ್ರಾಮಾ: ಬಿಗ್ ಬಾಸ್ ಮನೆಯ ಕರಾಳ ಸತ್ಯ ಬಯಲು?!

    January 19, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • WillieCex on ಸರ್ಕಾರದ ವಿರುದ್ಧ ಬಿಜೆಪಿ ಸಮರ ಘೋಷಣೆ | BJP Karnataka
    • Daviddek on ಡ್ರಗ್ಸ್ ದಂಧೆ – ಪೊಲೀಸರೇ ಎಚ್ಚರ!
    • WillieCex on ಲೋಕಸಭಾ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಫೈನಲ್ | Lok Sabha 2024
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.