ಬೆಂಗಳೂರು,ಆ.1:
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಅಕ್ರಮ ಆರೋಪದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸುವುದರ ವಿರುದ್ಧ ಕಾನೂನಾತ್ಮಕ ಹೋರಾಟ ನಡೆಸಲಾಗುವುದು ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಈ ಪ್ರಕರಣದಲ್ಲಿ ಮನಿ ಲ್ಯಾಂಡ್ರಿಂಗ್ ಎಲ್ಲಿದೆ. ಕಾನೂನನ್ನು ಮನಸ್ಸಿಗೆ ಬಂದಂತೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಈ ಮೊದಲು ರಾಜಭವನವನ್ನು ದುರುಪಯೋಗ ಪಡಿಸಿಕೊಂಡಿದ್ದರು. ಈಗ ಇಡಿಯನ್ನು ಬಳಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಕೇಂದ್ರ ಸರ್ಕಾರ ರಾಜಕೀಯ ಹತಾಶೆಯಿಂದ ತೀವ್ರ ಅಸಹನೀಯ ಸ್ಥಿತಿಗೆ ಇಳಿದಿದೆ. ಇದನ್ನು ಒಪ್ಪಲು ಸಾಧ್ಯವಿಲ್ಲ ಇಂತಹ ಪ್ರಕರಣದಲ್ಲಿ ಕಾನೂನು ಹೋರಾಟಕ್ಕೆ ಸಂವಿಧಾನದಲ್ಲಿ ಅವಕಾಶವಿದೆ. ನಾವು ಅದನ್ನೇ ಬಳಸಿಕೊಳ್ಳುತ್ತೇವೆ ಎಂದು ಹೇಳಿದರು.
ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯನವರಿಗೆ ಬೆಂಬಲ ವ್ಯಕ್ತಪಡಿಸಿದೆ. ಹೀಗಾಗಿ ಅವರು ರಾಜೀನಾಮೆ ನೀಡುವ ಅಗತ್ಯವಿಲ್ಲ. ಪಂಚಖಾತ್ರಿ ಸೇರಿದಂತೆ ಹಲವಾರು ಯೋಜನೆಗಳು ಜನಮನ್ನಣೆ ಗಳಿಸಿವೆ. ಬಿಜೆಪಿಯವರಿಗೆ ಇದನ್ನು ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅದಕ್ಕಾಗಿ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ.ರಾಜಕೀಯ ದ್ವೇಷಕ್ಕಾಗಿ ಬಡವರ ಪರ ಕಾರ್ಯಕ್ರಮಗಳನ್ನು ದಿಕ್ಕು ತಪ್ಪಿಸಲು ಹೇಗೆಲ್ಲಾ ನಡೆದುಕೊಳ್ಳುತ್ತಿದ್ದಾರೆ ಎಂಬುದನ್ನು ಜನ ಗಮನಿಸುತ್ತಿದ್ದಾರೆ ಎಂದು ತಿಳಿಸಿದರು
Previous Articleಆತ್ಮಸಾಕ್ಷಿಯಂತೆ ಕೆಲಸ ಮಾಡುವ ಸಿಎಂ.
Next Article ಅರಣ್ಯ ಪ್ರದೇಶ ಹೆಚ್ಚಳಕ್ಕೆ ಕ್ರಮ.