Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹಣಕಾಸು ವಹಿವಾಟಿನ ಮೇಲೆ Election Commission ನ ಹದ್ದಿನ ಕಣ್ಣು
    ಚುನಾವಣೆ 2024

    ಹಣಕಾಸು ವಹಿವಾಟಿನ ಮೇಲೆ Election Commission ನ ಹದ್ದಿನ ಕಣ್ಣು

    vartha chakraBy vartha chakraFebruary 10, 2023No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    Bengaluru

    ರಾಜ್ಯ ವಿಧಾನಸಭೆಗೆ ಚುನಾವಣೆ ನಡೆಸಲು ಆಯೋಗ (Election Commission) ವ್ಯಾಪಕ ಸಿದ್ಧತೆ ನಡೆಸಿದೆ. ಮುಕ್ತ ಹಾಗೂ ಶಾಂತಿಯುತ ಚುನಾವಣೆಗೆ ಪಣ ತೊಟ್ಟಿರುವ ಆಯೋಗ ಅಕ್ರಮ ತಡೆಗಟ್ಟಲು ಹದ್ದಿನ ಕಣ್ಣಿರಿಸತೊಡಗಿದೆ. ವೇಳಾಪಟ್ಟಿ ಘೋಷಣೆಯಾದ ನಂತರ ಮತದಾರರನ್ನು ತಲುಪಲು ಅಭ್ಯರ್ಥಿಗಳು ಮತ್ತು ಪಕ್ಷಗಳು ನಡೆಸುವ ವಾಮಮಾರ್ಗದ ಬಗ್ಗೆ ಅರಿವಿರುವ ಆಯೋಗ ಈಗಾಗಲೇ ಹಣಕಾಸು ವಹಿವಾಟಿನ ಕುರಿತು ನಿಗಾ ವಹಿಸಿದೆ.

    ರಾಜ್ಯದ ಪ್ರತಿಯೊಂದು ಬ್ಯಾಂಕ್ ಖಾತೆದಾರರ ವಹಿವಾಟುಗಳ ಮೇಲೆ ಆಯೋಗ ಹದ್ದಿನ ಕಣ್ಣಿಟ್ಟಿದೆ. ಚುನಾವಣೆ ಸಮಯದಲ್ಲಿ ಮತದಾರರಿಗೆ ನೇರವಾಗಿ ಹಣ, ಒಡವೆ ಇಲ್ಲವೇ ಬೇರೊಂದು ರೀತಿಯಲ್ಲಿ ಹಂಚಿಕೆ ಮಾಡಿದರೆ ಕಾನೂನು ಸಂಕಷ್ಟಕ್ಕೆ ಸಿಲುಕಿಕೊಳ್ಳಬೇಕಾಗುತ್ತದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಹೀಗಾಗಿ ಇವರುಗಳು ಅನ್ಯ ಮಾರ್ಗ ಹುಡುಕಿರುವುದು‌ ಕಳೆದ ಚುನಾವಣೆ ವೇಳೆ ಪತ್ತೆಯಾಗಿತ್ತು.

    ಗ್ರಾಮೀಣ ಭಾಗಗಳಲ್ಲಿ ಹೆಚ್ಚಾಗಿ ಸ್ತ್ರೀ ಶಕ್ತಿ ಸಂಘಟನೆಗಳು, ಅಭ್ಯರ್ಥಿಗಳ ಸೋಲು ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ. ಒಂದೊಂದು ಸಂಘಟನೆಯಲ್ಲಿ 200ರಿಂದ 300 ಮತದಾರರು ಇರುತ್ತಾರೆ. ಹೀಗಾಗಿ ಅಭ್ಯರ್ಥಿಗಳು ಈಗಲೆ ಅವರೊಂದಿಗೆ ಮಾತುಕತೆ ನಡೆಸಿ, ಮತಕ್ಕೆ ಇಂತಿಷ್ಟು ಎಂದು ಹಣ ನಿಗದಿಪಡಿಸಿ ಸ್ತ್ರೀ ಶಕ್ತಿ ಸಂಘಟನೆಗಳ ಮುಖ್ಯಸ್ಥರ ಖಾತೆಗಳಿಗೆ ಹಣ ಹಾಕುತ್ತಿದ್ದಾರೆ.

    ಇದಲ್ಲದೆ ಹಾಲು ಉತ್ಪಾದಕರ ಸಂಘ, ಮಹಿಳಾ ಸಂಘಗಳು, ಯುವಕರ ಸಂಘ ಹೀಗೆ ನಾನಾ ರೀತಿಯಲ್ಲಿ ಮತದಾರರ ಖಾತೆಗಳಿಗೆ ಹಣವನ್ನು ಹಾಕಲಾಗುತ್ತದೆ. ಚುನಾವಣೆ ವೇಳಾಪಟ್ಟಿಗೂ ಮೊದಲೆ ಹಣ ಸಂದಾಯವಾಗುತ್ತಿದ್ದು, ಮತದಾನದ ದಿನ ಸಮೀಪಿಸುವಾಗ ಈ ಹಣವನ್ನು ಮತದಾರರಿಗೆ ತಲುಪಿಸುವ ವ್ಯವಸ್ಥೆಯನ್ನು ರಾಜಕೀಯ ನಾಯಕರು ಮಾಡಿಕೊಂಡಿದ್ದಾರೆ. ಇದರ ಬಗ್ಗೆ ಮಾಹಿತಿ ಪಡೆದಿರುವ ಆಯೋಗ ಇಂತಹ ವಹಿವಾಟುಗಳ ಮೇಲೆ ನಿಗಾ ವಹಿಸಿದೆ.

    ಇದೀಗ ಇಂತಹ ಬ್ಯಾಂಕ್ ಖಾತೆಗಳ ಮೇಲೆ ಕಣ್ಣಿಟ್ಟಿರುವ ಚುನಾವಣಾ ಆಯೋಗ, ಯಾವ ಖಾತೆಗೆ ಹೆಚ್ಚು ಹಣ ಸಂದಾಯವಾಗುತ್ತದೆ ಎಂಬುದನ್ನು ಕುರಿತು ತಕ್ಷಣವೇ ಮಾಹಿತಿ ನೀಡಬೇಕೆಂದು ಬ್ಯಾಂಕ್ ಅಧಿಕಾರಿಗಳಿಗೆ ಮನವಿ ಮಾಡಿದೆ. ಯಾವುದೇ ವ್ಯಕ್ತಿಯ ಖಾತೆಗೆ ಏಕಾಏಕಿ ಲಕ್ಷಗಟ್ಟಲೇ ಹಣ ಸಂದಾಯವಾದರೆ ಕೂಡಲೇ ಆಯೋಗದ ಗಮನಕ್ಕೆ ತರಬೇಕು. ಚುನಾವಣೆ ವೇಳೆ ನಡೆಯುವ ಅಕ್ರಮ ಮತ್ತು ಭ್ರಷ್ಟಾಚಾರವನ್ನು ತಡೆಗಟ್ಟುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಹೇಳಿರುವ ಆಯೋಗ ರಾಜ್ಯದ ಎಲ್ಲಾ ಬ್ಯಾಂಕ್ ಗಳ ಮುಖ್ಯಸ್ಥರಿಗೆ ಪತ್ರ ಬರೆದಿದೆ.

    Verbattle
    Verbattle
    Verbattle
    Bangalore Election election commission Elections 2023 m mi Politics ಕಾನೂನು Election ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous ArticleMahalakshmi Layout ನಲ್ಲಿ ಸೇವೆ ಆರಂಭಿಸಿದ ನಮ್ಮ ಕ್ಲಿನಿಕ್ ಗಳು
    Next Article ರಾಜ್ಯ ಸರ್ಕಾರದ ಸಾಧನೆಗೆ ರಾಜ್ಯಪಾಲರ ಜೈ ಜೈಕಾರ
    vartha chakra
    • Website

    Related Posts

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026

    ಡಿ.ಕೆ. ಸುರೇಶ್ ಚುಚ್ಚುಮಾತು

    January 21, 2026

    ರಿಯಾಲಿಟಿ ಶೋ ಅಲ್ಲ, ಇದು ಪಕ್ಕಾ ‘ಸ್ಕ್ರಿಪ್ಟೆಡ್’ ಡ್ರಾಮಾ: ಬಿಗ್ ಬಾಸ್ ಮನೆಯ ಕರಾಳ ಸತ್ಯ ಬಯಲು?!

    January 19, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Daviddek on ವಾರಾಂತ್ಯದಲ್ಲಿ ಕಳ್ಳಿಯಾಗುತ್ತಿದ್ದ ಪ್ರೊಫೆಸರ್!
    • WillieCex on Hotel, Pub ಗಳಲ್ಲಿ Fire Safety ಇಲ್ಲಾಂದ್ರೆ ಲೈಸೆನ್ಸ್ ರದ್ದು
    • RicardoCor on ಅಧಿಕಾರ ಹಂಚಿಕೆ ಒಪ್ಪಂದ ಆಗಿಲ್ಲವೇ..?
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.