Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿದ್ಯುತ್ ಉತ್ಪಾದನೆ ಕುಸಿತ – ಸಿ.ಎಂ. ಅಸಮಾಧಾನ | Bengaluru
    Viral

    ವಿದ್ಯುತ್ ಉತ್ಪಾದನೆ ಕುಸಿತ – ಸಿ.ಎಂ. ಅಸಮಾಧಾನ | Bengaluru

    vartha chakraBy vartha chakraSeptember 22, 202327 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ಸೆ 22: ಈ ಹಿಂದೆ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವದಲ್ಲಿದ್ದಾಗ ಕರ್ನಾಟಕವನ್ನು ವಿದ್ಯುತ್ ಸ್ವಾವಲಂಬಿ ರಾಜ್ಯವಾಗಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗಿತ್ತು.ಆದರೆ,ನಂತರದ ನಾಲ್ಕು ವರ್ಷಗಳ ಅವಧಿಯಲ್ಲಿ ರಾಜ್ಯದ ವಿದ್ಯುತ್‌ ಉತ್ಪಾದನೆ ಸ್ಥಾಪಿತ ಸಾಮರ್ಥ್ಯಕ್ಕಿಂತ ಕುಸಿತ ಕಂಡಿರುವುದು ಏಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
    ಇಂಧನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು ರಾಜ್ಯದಲ್ಲಿ 32,009 ಮೆಗಾ ವ್ಯಾಟ್‌ ಉತ್ಪಾದನೆ ಸಾಮರ್ಥ್ಯ ಇದ್ದು, ಕಳೆದ ನಾಲ್ಕು ವರ್ಷಗಳಲ್ಲಿ ಉತ್ಪಾದನೆ ಪ್ರಮಾಣ ಹೆಚ್ಚಳವಾಗದಿರುವುದಕ್ಕೆ ವಿವರಣೆಗಳನ್ನು ಕೊಡಿ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.

    ನಮ್ಮ ಮೊದಲ ಅವಧಿಯ ಸರ್ಕಾರದಲ್ಲಿ ಎಲ್ಲಾ ಸಮಸ್ಯೆಗಳ ನಡುವೆಯೇ ವಿದ್ಯುತ್ ಉತ್ಪಾದನೆ ದುಪ್ಪಟ್ಟಾಗಿತ್ತು. ನಾವು ಅಧಿಕಾರಕ್ಕೆ ಬಂದ 2013 -14ರಲ್ಲಿ 14,048 ಮೆಗಾವ್ಯಾಟ್‌ ಉತ್ಪಾದನೆ ಆಗುತ್ತಿತ್ತು. 2017-18ರ ವೇಳೆಗೆ 27,780 ಮೆಗಾವ್ಯಾಟ್‌ಗೆ ಉತ್ಪಾದನೆ ಏರಿಕೆಯಾಗಿತ್ತು. ಬಹುತೇಕ ದುಪ್ಪಟ್ಟಾಗಿತ್ತು ಎಂದು ಸ್ಮರಿಸಿದರು.
    ಇದಕ್ಕೆ ಪ್ರತಿಕ್ರಿಯಿಸಿದ ಅಧಿಕಾರಿಗಳು, ಕೇಂದ್ರದಿಂದ ರಾಜ್ಯಕ್ಕೆ ಹಂಚಿಕೆಯಾಗಿರುವ ಕಲ್ಲಿದ್ದಲಿನ ಗುಣಮಟ್ಟ ಉತ್ತಮವಾಗಿಲ್ಲ. ಅಗತ್ಯ ಗುಣಮಟ್ಟದಲ್ಲಿ ಇಲ್ಲದಿರುವುದರಿಂದ ವಿದ್ಯುತ್‌ ಉತ್ಪಾದನೆಯ ಪ್ರಮಾಣದ ಮೇಲೆ ಪರಿಣಾಮ ಬೀರುತ್ತಿದೆ. ಈ ಬಗ್ಗೆ ಕೇಂದ್ರದ ಗಮನಕ್ಕೆ ತರಲಾಗಿದ್ದು, ಪ್ರತಿದಿನ ಎರಡು ರೇಕುಗಳಷ್ಟು ಹೆಚ್ಚುವರಿ ಕಲ್ಲಿದ್ದಲು ಹಂಚಿಕೆಗೆ ಕೋರಿದ್ದೇವೆ. ಇದಲ್ಲದೆ ಕಲ್ಲಿದ್ದಲು ಆಮದು ಮಾಡಲೂ ಸಹ ಟೆಂಡರ್‌ ಕರೆಯಲಾಗಿದೆ ಎಂದು ವಿವರಿಸಿದರು.

    ರಾಜ್ಯದ ಸ್ಥಾಪಿತ ಸಾಮರ್ಥ್ಯಕ್ಕೆ ಅನುಸಾರವಾಗಿ ವಿದ್ಯುತ್‌ ಉತ್ಪಾದನೆ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ ಮುಖ್ಯಮಂತ್ರಿಗಳು ಉಷ್ಣವಿದ್ಯುತ್‌ ಸ್ಥಾವರಗಳಲ್ಲಿ ತೇವಗೊಂಡ ಕಲ್ಲಿದ್ದಲು ಬಳಕೆ ಮಾಡದಂತೆ ಸೂಚನೆ ನೀಡಿದರು.
    ನೀರಾವರಿಗೆ ಸೌರ ವಿದ್ಯುತ್‌ ಪಂಪ್‌ಸೆಟ್‌ಗಳ ಬಳಕೆಯನ್ನು ಉತ್ತೇಜಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಇದರಿಂದ ಅಕ್ರಮ ನೀರಾವರಿ ಪಂಪ್‌ಸೆಟ್‌ ಹಾವಳಿ ಹಾಗೂ ವಿದ್ಯುತ್‌ ಪ್ರಸರಣ ಸೋರಿಕೆಯನ್ನು ತಡೆಗಟ್ಟಲು ಸಾಧ್ಯ ಎಂಬ ಅಂಶಗಳ ಕುರಿತು ಅಧಿಕಾರಿಗಳು ಮುಖ್ಯಮಂತ್ರಿಗಳ ಗಮನ ಸೆಳೆದರು.
    ಗೃಹ ಜ್ಯೋತಿ ಯೋಜನೆಯಡಿ ಆಗಸ್ಟ್‌ ತಿಂಗಳಲ್ಲಿ 1.26 ಕೋಟಿ ಗ್ರಾಹಕರಿಗೆ ಹಾಗೂ ಸೆಪ್ಟೆಂಬರ್‌ ತಿಂಗಳಲ್ಲಿ 1.35 ಕೋಟಿ ಗ್ರಾಹಕರಿಗೆ ಶೂನ್ಯ ಮೊತ್ತದ ವಿದ್ಯುತ್‌ ಬಿಲ್‌ ನೀಡಲಾಗಿದೆ. ಇದಕ್ಕಾಗಿ 1400 ಕೋಟಿ ರೂ. ಒದಗಿಸಲಾಗಿದೆ ಎನ್ನುವ ವಿವರ ನೀಡಿದರು.

    ಎಸ್ಕಾಂ ಗಳ ಆರ್ಥಿಕ ಸ್ಥಿತಿಗತಿ ಕುರಿತೂ ಸಹ ಸಭೆಯಲ್ಲಿ ಚರ್ಚಿಸಲಾಯಿತು. ವಿದ್ಯುತ್‌ ಸೋರಿಕೆ ಕುರಿತಂತೆ ರಾಜ್ಯದ ಎಲ್ಲ ಎಸ್ಕಾಂ ಗಳೂ ಹೆಚ್ಚಿನ ಗಮನ ಹರಿಸುವಂತೆ ಸೂಚಿಸಿದರು. ಅಂತೆಯೇ ಅಗತ್ಯವಿರುವಲ್ಲಿ ಟ್ರಾನ್ಸ್‌ಫಾರ್ಮರ್‌ ಅಳವಡಿಕೆ ಹಾಗೂ ವಿದ್ಯುತ್‌ ಉಪಕೇಂದ್ರಗಳ ಸ್ಥಾಪನೆಗೆ ಕ್ರಮ ವಹಿಸುವಂತೆ ಸೂಚಿಸಿದರು.
    ಪ್ರಸಕ್ತ ವರ್ಷದಲ್ಲಿ ವಿದ್ಯುತ್‌ ಉಪಕೇಂದ್ರಗಳ ಸ್ಥಾಪನೆಗಾಗಿ 2500 ಕೋಟಿ ರೂ. ಒದಗಿಸಲಾಗಿದೆ. ರಾಜ್ಯದ ಪ್ರಸಕ್ತ ವಿದ್ಯುತ್‌ ಪರಿಸ್ಥಿತಿ ಕುರಿತು ಹಾಗೂ ಆರ್ಥಿಕ ಸ್ಥಿತಿಗತಿ ಕುರಿತಂತೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸುವುದು ಸೂಕ್ತ ಎಂದು ಮುಖ್ಯಮಂತ್ರಿಗಳು ಸಲಹೆ ನೀಡಿದರು.
    ಸಭೆಯಲ್ಲಿ ಇಂಧನ ಸಚಿವ ಕೆ.ಜೆ. ಜಾರ್ಜ್‌, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್‌ ಅಹ್ಮದ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯಲ್‌, ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್‌ ಗುಪ್ತಾ, ಆರ್ಥಿಕ ಇಲಾಖೆ ಕಾರ್ಯದರ್ಶಿ (ವೆಚ್ಚ) ಡಾ. ಎಂ.ಟಿ. ರೇಜು ಹಾಗೂ ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

    Verbattle
    Verbattle
    Verbattle
    Bengaluru BJP Congress Government Karnataka News ಕಾಂಗ್ರೆಸ್ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಕಾವೇರಿ ಕಣ್ಣೀರಿನ ಕತೆ, ಕರ್ನಾಟಕದ ವ್ಯಥೆ! | Cauvery
    Next Article ಉದ್ಯೋಗ ಖಾತ್ರಿ‌ ಅವಧಿ ಹೆಚ್ಚಳ ಮಾಡಿ | Employment
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ScottBox on ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    • WillieCex on JDS ಕಚೇರಿಗೆ ಕರೆಂಟ್ ಕಳ್ಳತನದ ಪೋಸ್ಟರ್ | HD Kumaraswamy
    • WillieCex on ಕೃಷಿ ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಎಚ್ಚರಿಕೆ.
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.