ಬೆಂಗಳೂರು, ನ. 06: ರಾಜ್ಯದಲ್ಲಿ ತೀವ್ರ ಬರಗಾಲದ ಹಿನ್ನೆಲೆಯಲ್ಲಿ ವಿದ್ಯುತ್ ಗಾಗಿ ಎಲ್ಲಾ ವಲಯದಿಂದ ಬೇಡಿಕೆ ಹೆಚ್ಚಾಗಿದ್ದರೂ ಕೃಷಿ ಪಂಪ್‍ಸೆಟ್‍ಗಳಿಗೆ ನಿರಂತರವಾಗಿ 7 ಗಂಟೆಗಳ ವಿದ್ಯುತ್ ಸರಬರಾಜು ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ.
ಇಂಧನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು ಲಭ್ಯವಿರುವ ಎಲ್ಲಾ ಮೂಲಗಳಿಂದ ವಿದ್ಯುತ್ ಒಟ್ಟುಗೂಡಿಸಿ ಆದ್ಯತೆ ಆಧರಿಸಿ ವಿತರಣೆ ಮಾಡಬೇಕು.ಈ ವೇಳೆ ನೀರಾವರಿ ಪಂಪ್ ಸೆಟ್ ಗಳಿಗೆ ಯಾವುದೇ ವ್ಯತ್ಯಯವಾಗದಂತೆ ನೋಡಿಕೊಳ್ಳಲು ಸೂಚಿಸಿದರು.
ಈ ಸಭೆಯ ನಂತರ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇಂಧನ ಮಂತ್ರಿ ಕೆ.ಜೆ.ಜಾರ್ಜ್,ನಮ್ಮ ಸರ್ಕಾರಕ್ಕೆ ಕೃಷಿ ಮತ್ತು ರೈತ ಸಮುದಾಯ ಮೊದಲ ಆದ್ಯತೆ ಎಂದು ತಿಳಿಸಿದರು.
ರಾಜ್ಯದಲ್ಲಿ ವಿದ್ಯತ್ ಕೊರತೆಯಿದೆ ಹೀಗಿದ್ದರೂ ನೀರಾವರಿ ಪಂಪ್‍ಸೆಟ್‍ಗಳಿಗೆ ಏಳು ಗಂಟೆಗಳ ಕಾಲ ವಿದ್ಯುತ್ ನೀಡವುದಾಗಿ ಮೊದಲೇ ಘೋಷಣೆ ಮಾಡಿದ್ದೆವು.ಹೀಗಿದ್ದರೂ ಕೂಡಾ ಕೆಲವು ಜನ ಸತತವಾಗಿ ಮೂರು ಫೇಸ್‍ನಲ್ಲಿ 5 ಗಂಟೆ ವಿದ್ಯುತ್ ನೀಡಿದರೆ ಸಾಕು ಎಂದಿದ್ದರು. ಅದಕ್ಕಾಗಿ 5 ಗಂಟೆಗಳ ಕಾಲ 3 ಫೇಸ್‍ನಲ್ಲಿ ವಿದ್ಯುತ್ ನೀಡುವಂತೆ ಸೂಚನೆ ನೀಡಲಾಗಿತ್ತು.ಆದರೆ, ರಾಯಚೂರು, ಕೊಪ್ಪಳ, ಬಳ್ಳಾರಿ, ಯಾದಗಿರಿ ಜಿಲ್ಲೆಯ ಭತ್ತ ಬೆಳೆಯುವ ರೈತರು ತಮಗೆ 5 ಗಂಟೆಗಳ ಕಾಲ ವಿದ್ಯುತ್ ನೀಡುವುದು ಸಾಕಾಗುವುದಿಲ್ಲ ಎಂದು ಹೇಳಿದ್ದರು. ಬದಲಾಗಿ ಹಿಂದಿನಂತೆ 7 ಗಂಟೆಗಳ ಕಾಲ ನೀಡಬೇಕೆಂದು ಎಂದು ಮನವಿ ಮಾಡಿದರು.
ಈ ಹಿನ್ನೆಲೆಯಲ್ಲಿ ಕೃಷಿ ಪಂಪ್ ಸೆಟ್ ಗಳಿಗೆ 7 ಗಂಟೆಗಳ ಕಾಲ ವಿದ್ಯುತ್ ನೀಡಲು ಸೂಚಿಸಲಾಗಿದೆ ಎಂದು ವಿವರಿಸಿದರು.
ಭತ್ತ, ಕಬ್ಬು ಹಾಗೂ ಹೆಚ್ಚು ನೀರಿನ ಅಗತ್ಯವಿಲ್ಲದ ಬೆಳೆ ಬೆಳೆಯುವ ಉಳಿದ ಭಾಗಗಳಿಗೆ ನೀಡುತ್ತಿದ್ದ 5 ಗಂಟೆಗಳ ಕಾಲ ತ್ರೀ ಫೇಸ್ ಮತ್ತು ಎರಡು ಗಂಟೆ ಸಿಂಗಲ್ ಫೇಸ್ ವಿದ್ಯುತ್ ನೀಡುವ ಮೂಲಕ ಒಟ್ಟು
7 ಗಂಟೆಗಳ ಕಾಲ ವಿದ್ಯುತ್ ನೀಡಲು ನಿರ್ಧರಿಸಲಾಯಿತು ಎಂದರು.
ರಾಯಚೂರು, ಬಳ್ಳಾರಿಯಲ್ಲಿ ಥರ್ಮಲ್ ಘಟಕಗಳಿದ್ದು, ರಾಜ್ಯದಲ್ಲಿ ಥರ್ಮಲ್, ಜಲವಿದ್ಯುತ್, ಸೋಲಾರ್ ಮೂಲಕ ವಿದ್ಯುತ್ ಉತ್ಪಾದಿಸುತ್ತಿದ್ದು. ಥರ್ಮಲ್ ಘಟಕವು 1000 ಮೆಗಾ ವ್ಯಾಟ್ ಉತ್ಪಾದಿಸುತ್ತಿದೆ. ಸುಮಾರು 2400 ರಿಂದ 3200 ಮೆ.ವ್ಯಾ, ವಿದ್ಯುತ್ ಉತ್ಪಾದನೆ ಹೆಚ್ಚಾಗಿದೆ. ಕಬ್ಬು ಅರೆಯುವುದು ಪ್ರಾರಂಭವಾಗಿ ಕೋ-ಜನರೇಷನ್ ಆಗಿರುವುದರಿಂದ 450 ಮೆ.ವ್ಯಾಟ್ ಉತ್ಪಾದನೆಯಾಗಿದೆ. ಕೂಡ್ಲಗಿಯಲ್ಲಿ 150 ಮೆ.ವ್ಯಾ ಕರ್ನಾಟಕಕ್ಕೆ ಉಳಿತಾಯವಾಗಲಿದೆ ಹಾಗೂ ಖರೀದಿ ಮಾಡುತ್ತಿರುವುದರಿಂದ ಹೆಚ್ಚು ವಿದ್ಯುತ್ ದೊರೆಯಲಿದೆ. ಹಾಗಾಗಿ ಇಂದಿನಿಂದ 7 ತಾಸು ವಿದ್ಯುತ್‍ನ್ನು ಪಂಪ್‍ಸೆಟ್‍ಗಳಿಗೆ ನೀಡುತ್ತಿದ್ದೇವೆ. ಕೈಗಾರಿಕೆಗಳಿಗೆ, ಗೃಹಬಳಕೆಗೆ ವಿದ್ಯುತ್ ಕಡಿತ ಮಾಡಲಾಗುತ್ತಿಲ್ಲ. ಪಂಪ್‍ಸೆಟ್‍ಗಳಿಗೆ ನೀಡುವ ವಿದ್ಯುತ್ ಸಹಾಯಧನವನ್ನು ಸರ್ಕಾರವೇ ನೀಡಿದೆ. 13100 ಕೋಟಿ ರೂ.ಗಳನ್ನು ಬಜೆಟ್‍ನಲ್ಲಿ ಒದಗಿಸಲಾಗಿದೆ ಎಂದರು.
ಬಾಕಿಮನ್ನಾ:
ಭಾಗ್ಯಜ್ಯೋತಿ, ಕುಟೀರ ಜ್ಯೋತಿಗೆ 18 ಯೂನಿಟ್‍ಗಳ ಮಿತಿಯಿತ್ತು. ಅದನ್ನು ವಿಸ್ತರಿಸಿ 40 ಯೂನಿಟ್‍ಗಳ ಬಳಕೆಗೆ ನಮ್ಮ ಸರ್ಕಾರವೇ ಹಿಂದೆ ಹೆಚ್ಚಳ ಮಾಡಿತ್ತು. ಈಗ ಗೃಹಜ್ಯೋತಿ ಬಂದ ನಂತರ ಭಾಗ್ಯಜ್ಯೋತಿ, ಕುಟೀರ ಜ್ಯೋತಿ, ಅಮೃತಜ್ಯೋತಿಗಳನ್ನು ಗೃಹಜ್ಯೋತಿ ಯೋಜನೆಯಡಿ ಸೇರಿಸಿ, 58 ಯೂನಿಟ್‍ವರಗೆ ಉಚಿತವಾಗಿ ವಿದ್ಯುತ್ ನೀಡಲು ತೀರ್ಮಾನಿಸಿದೆ. ಭಾಗ್ಯಜ್ಯೋತಿ, ಕುಟೀರ ಜ್ಯೋತಿ, ಅಮೃತಜ್ಯೋತಿ ಯೋಜನೆಗಳಡಿ 389.66 ಕೋಟಿ ರೂ.ಗಳು ಬಾಕಿ ಉಳಿದಿದ್ದವು. ಬಾಕಿ ಇರುವುದರಿಂದ ಗೃಹಜ್ಯೋತಿಯಡಿ ಉಚಿತ ಕೊಡುವುದು ಕಷ್ಟವಾಗುತ್ತಿತ್ತು. ಆದ್ದರಿಂದ ಬಾಕಿ ಮೊತ್ತವನ್ನು ಒಂದು ಬಾರಿಗೆ ಮನ್ನಾ ಮಾಡಲಾಗುತ್ತಿದೆ. ಇನ್ನು ಮುಂದೆ ಬಾಕಿ ಕೊಡಬೇಕಾದ ಅಗತ್ಯವಿಲ್ಲ ಎಂದು ತಿಳಿಸಿದರು.
ಸರ್ಕಾರಿ ಪ್ರಾಥಮಿಕ ಶಾಲೆ ಹಾಗೂ ಜೂನಿಯರ್ ಕಾಲೇಜುಗಳಿಗೆ ನವೆಂಬರ್ 1 ರಂದು ಘೋಷಿಸಿದಂತೆ ವಿದ್ಯುತ್ ಹಾಗೂ ನೀರಿನ ವೆಚ್ಚವನ್ನು ಸರ್ಕಾರವ ಭರಿಸಲಿದೆ ಎಂದು ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಮುಂದಿನ ಮುಂಗಾರಿನವರೆಗೆ ಮಳೆ ಬರುವುದಿಲ್ಲ ಎಂದು ಲೆಕ್ಕ ಹಾಕಿಯೇ ಈ ತೀರ್ಮಾನ ಮಾಡಲಾಗಿದೆ. ಜುಲೈ ಅಂತ್ಯದವರೆಗೆ ಲೆಕ್ಕ ಹಾಕಲಾಗಿದೆ ಎಂದರು.
ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ವಿದ್ಯುತ್ ಖರೀದಿಸಬೇಕು ಈ ಖರೀದಿಯ ಮೊತ್ತ ಎಷ್ಟು ವಿದ್ಯುತ್ ಖರೀದಿಸುತ್ತೇವೆ ಎನ್ನುವುದರ ಮೇಲೆ ಅವಲಂಬಿತವಾಗಿದೆ.ಸದ್ಯ1000 ಮಿಲಿಯನ್ ಯೂನಿಟ್‍ವರೆಗೆ ವಿದ್ಯುತ್‍ನ್ನು ಹೊರಗಿನಿಂದ ಖರೀದಿಯಾಗುತ್ತಿದೆ ಎಂದರು.
ಸ್ಥಳೀಯ ಹಾಗೂ ಆಮದು ಮಾಡಿದ ಕಲ್ಲಿದ್ದಿಲನ್ನು ಮಿಶ್ರ ಮಾಡಿ ಬಳಸುವುದರಿಂದ ವಿದ್ಯುತ್ ಉತ್ಪಾದನೆಯಾಗುತ್ತದೆ. ಉತ್ತರಪ್ರದೇಶ ಹಾಗೂ ಪಂಚಾಬ್ ನಡುವೆ ನಮ್ಮದು ವಿನಿಮಯ ಪದ್ದತಿ ಇದೆ. ಈಗ ಪಡೆದು, ಜೂನ್‍ನಿಂದ ನಾವು ಅವರಿಗೆ ಹಿಂದಿರುಗಿಸುತ್ತೇವೆ. ಯಾವುದೇ ಖಾಸಗಿಯವರಿಂದ ವಿದ್ಯುತ್ ಖರೀದಿಸಿಲ್ಲ ಎಂದು ವಿವರಿಸಿದರು.

6 Comments
betmgm WI betmgm betmgm DE
Enter the sugary realm of Sweet Bonanza and chase 21,000x+ wins! Tumbles sweet bonanza xmas demo keep the action going until no more matches. Play now!
Feel the ground shake with buffalo fury on the reels. buffalo slot bonus is loaded with ways-to-win, explosive bonuses, and golden rewards that hit hard. Join the action!
best slots on stake Originals are — Crash, Plinko, Mines, Dice and more. Combine them with the best slots and live dealers online. Your next big win is one click away.
Step up to DraftKings casino games Casino today. Play $5, receive 500 Cash Eruption spins + up to $1,000 lossback. The ultimate online casino experience!
Chytry nakup leku = az 80 % uspora. Zacnete hned!
https://opravdovalekarna.cz