Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಆನೆಗಳ ಸಂಖ್ಯೆಯಲ್ಲಿ ಕರ್ನಾಟಕ ನಂಬರ್ ಒನ್ | Elephant Population
    ರಾಜ್ಯ

    ಆನೆಗಳ ಸಂಖ್ಯೆಯಲ್ಲಿ ಕರ್ನಾಟಕ ನಂಬರ್ ಒನ್ | Elephant Population

    vartha chakraBy vartha chakraAugust 9, 202324 Comments3 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಆ.9: ರಾಜ್ಯದ ಆನೆಗಳ ಸಂಖ್ಯೆಯಲ್ಲಿ ಸುಮಾರು 350ರಷ್ಟು ಹೆಚ್ಚಳವಾಗಿದ್ದು, ಆನೆಗಳ ಶ್ರೇಣಿ 5914ರಿಂದ 6877 ಎಂದು ವಿಶ್ಲೇಷಿಸಲಾಗಿದೆ. ಆನೆಗಳ ಸಂಖ್ಯೆಯಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಆನೆಗಳ ಗಣತಿಯ ವರದಿ ಬಿಡುಗಡೆ ಮಾಡಿ ಮಾತನಾಡಿದ ಅವರು, 2017ರಲ್ಲಿ ರಾಜ್ಯದಲ್ಲಿ ಸುಮಾರು 6049 ಆನೆಗಳಿದ್ದವು, ಈಬಾರಿ ಗಣತಿಯ ವೇಳೆ 6,395 ಆನೆಗಳಿವೆ ಎಂಬ ಮಾಹಿತಿ ಇದೆ.ಈ ಮೂಲಕ ಇವುಗಳ ಸಂಖ್ಯೆ ಸುಮಾರು 350ರಷ್ಟು ಹೆಚ್ಚಳವಾಗಿದೆ ಎಂದರು.
    ಆನೆಗಳು ಬಲಿಷ್ಠ ವನ್ಯಜೀವಿಯಾದರೂ ಭಾರತ ಸೇರಿದಂತೆ ವಿಶ್ವಾದ್ಯಂತ ಅಪಾಯದಲ್ಲಿವೆ. ಅವಸಾನದ ಅಂಚಿನಲ್ಲಿರುವ ಆನೆಗಳನ್ನು ಸಂರಕ್ಷಿಸುವ ಸಲುವಾಗಿ, ಆನೆಗಳಿಗೂ ನೆಮ್ಮದಿಯಿಂದ ಬದುಕಲು ಅವುಗಳ ಆವಾಸಸ್ಥಾನ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಲು 2012 ಆಗಸ್ಟ್ 12 ರಿಂದ ವಿಶ್ವ ಆನೆ ದಿನವನ್ನು ಆಚರಿಸಲಾಗುತ್ತಿದೆ ಎಂದು ತಿಳಿಸಿದರು.

    ಆನೆಗಳ ದಿನದಂದು ದೇಶದಲ್ಲಿ ಆನೆಗಳ ಸಂಖ್ಯೆ ಹೆಚ್ಚಳವಾಗಿದೆಯೇ ಅಥವಾ ಇಳಿಮುಖವಾಗಿದೆಯೇ ಎಂದು ತಿಳಿಯಲು ಆನೆಗಳ ಗಣತಿಯನ್ನು ಪ್ರತೀ ಐದು ವರ್ಷಗಳಿಗೊಮ್ಮೆ ಮಾಡಲಾಗುತ್ತದೆ. ಈ ಹಿಂದೆ ಆನೆ ಗಣತಿ 2017 ರಲ್ಲಿ ನಡೆದಿತ್ತು.
    ಬಳಿಕ 2022ರಲ್ಲಿ ಆನೆ ಗಣತಿಯನ್ನು ಅಖಿಲ ಭಾರತ ಹುಲಿ ಗಣತಿಯ ಭಾಗವಾಗಿ ಮಾಡಲು ಪ್ರಯತ್ನಿಸಲಾಯಿತು. ಆದರೆ ಈ ಸಮೀಕ್ಷೆಯು ಮಾದರಿ ಬ್ಲಾಕ್‌ ಏಣಿಕೆ (Sample Block Count) ಮತ್ತು ಆನೆಗಳ ಸಂಖ್ಯೆ ಸ್ವರೂಪದ (Population Structure) ಮೌಲ್ಯ ಮಾಪನವನ್ನು ಒಳಗೊಂಡಿರಲಿಲ್ಲ. ಈ ವಿಧಾನ ಆನೆಗಳ ಗಣತಿ ಮತ್ತು ಸಂಖ್ಯಾ ಸ್ವರೂಪ ಅಂದರೆ ಲಿಂಗ ಮತ್ತು ವಯಸ್ಸಿನ ವರ್ಗೀಕರಣ ಮಾಡಲು ಬಹಳ ಮುಖ್ಯವಾಗಿರುತ್ತದೆ.

    ಕರ್ನಾಟಕ, ಕೇರಳ ಮತ್ತು ತಮಿಳುನಾಡು ಈ ಮೂರು ರಾಜ್ಯಗಳ ಮುಂದಾಳತ್ವದೊಂದಿಗೆ 2023ರ ಮೇ-17 ರಿಂದ ಮೇ-19 ರವರೆಗೆ ಏಕಕಾಲದಲ್ಲಿ ಆನೆಗಳ ಗಣತಿ ನಡೆಸಲಾಯಿತು. ಅದೇ ದಿನಾಂಕದಂದು ಆಂಧ್ರ ಪ್ರದೇಶದಲ್ಲೂ ಸಹ ಇದೇ ರೀತಿಯ ಗಣತಿ ಕಾರ್ಯವನ್ನು ನಡೆಸಲಾಯಿತು ಎಂದು ವಿವರಿಸಿದರು.
    ಈ ಗಣತಿಯ ಸ್ವರೂಪ, ಕ್ಷೇತ್ರ ಸಿಬ್ಬಂದಿಗೆ ತರಬೇತಿ, ಗಣತಿ ಫಲಿತಾಂಶಗಳ ವಿಶ್ಲೇಷಣೆ ಹಾಗೂ ವರದಿ ತಯಾರಿಕೆಯಲ್ಲಿ ಪ್ರೊ|| ಆರ್‌. ಸುಕುಮಾರ್‌ ರವರ ನೇತೃತ್ವದ ಭಾರತೀಯ ವಿಜ್ಞಾನ ಸಂಸ್ಥೆಯ (IISC) ತಾಂತ್ರಿಕ ನೆರವಿನೊಂದಿಗೆ ಕರ್ನಾಟಕ ಅರಣ್ಯ ಇಲಾಖೆಯು ಆನೆಗಳ ಗಣತಿಯನ್ನು ನಡೆಸಲಾಗಿದೆ.
    ರಾಜ್ಯದ 32 ವಿಭಾಗಗಳಿಂದ 3400 ಕ್ಕೂ ಹೆಚ್ಚು ಸಿಬ್ಬಂದಿ ಈ ಆನೆಗಳ ಗಣತಿ ಕಾರ್ಯದಲ್ಲಿ ಭಾಗವಹಿಸಿದ್ದರು.
    ಆನೆ ಗಣತಿಯನ್ನು ಮೂರು ವಿಧಾನಗಳಲ್ಲಿ ಅಂದರೆ, ನೇರ ಏಣಿಕೆ ಅಥವಾ ಬ್ಲಾಕ್‌ ಏಣಿಕೆ (ಮೇ-17, 2023) (Direct Count):- ಈ ವಿಧಾನದಲ್ಲಿ 5.0 ಚದರ ಕಿ.ಮೀ ವ್ಯಾಪ್ತಿಯ ವಿವಿಧ ಮಾದರಿ ಬ್ಲಾಕ್‌ ಗಳಲ್ಲಿ ಆನೆಗಳ ನೇರ ಏಣಿಕೆಯನ್ನು ನಡೆಸಲಾಯಿತು ಮತ್ತು ಒಟ್ಟು ಬೀಟ್‌ ಗಳ ಸಂಖ್ಯೆಯ ಸುಮಾರು ಶೇಕಡ 30 ರಿಂದ 50 ರಷ್ಟು ಒಳಗೊಂಡಿತ್ತು. ಟ್ರಾಂಜೆಕ್ಟ್‌ ಸಮೀಕ್ಷೆ ಅಥವಾ ಲದ್ದಿ ಏಣಿಕೆ ವಿಧಾನ (ಮೇ-18, 2023) (Dung Count):- ಈ ವಿಧಾನದಲ್ಲಿ 2 ಕಿ.ಮೀ ಉದ್ದದ ಟ್ರಾಂಜಾಕ್ಟ್‌ ರೇಖೆಗಳಲ್ಲಿ ಸಮೀಕ್ಷೆ ನಡೆಸಿ, ಆನೆಗಳ ಲದ್ದಿ ರಾಶಿಗಳ ಸಂಖ್ಯೆಯನ್ನು ಏಣಿಸಲಾಯಿತು. ಈ ಅಂಕಿ ಅಂಶದ ಮಾದರಿಗಳ ಮೂಲಕ ಆನೆಗಳ ಸಂಖ್ಯೆಯ ಮಾಹಿತಿ ಪಡೆಯಲು ಸದರಿ ದತ್ತಾಂಶವನ್ನು ಸಂಸ್ಕರಿಸಲಾಗುತ್ತಿದೆ ಮತ್ತು ಸಧ್ಯದಲ್ಲೆ ಫಲಿತಾಂಶ ದೊರೆಯಲಿದೆ. ವಾಟರ್‌ ಹೋಲ್‌ ಏಣಿಕೆ (ಮೇ-19, 2023) (Waterhole Count):- ಆನೆಗಳು ನಿಯಮಿತವಾಗಿ ಭೇಟಿ ನೀಡುವ ವಾಟರ್‌ ಹೋಲ್‌ ಗಳು ಮತ್ತು ಇತರೆ ಸ್ಥಳಗಳಲ್ಲಿ ಆನೆಗಳನ್ನು ನೇರವಾಗಿ ನೋಡಿ ಏಣಿಸುವ ಕಾರ್ಯ ನಡೆಸಲಾಯಿತು. ಈ ವಿಧಾನದಲ್ಲಿ ಆನೆಗಳ ಚಲನವಲನ, ವಯಸ್ಸಿನ ವರ್ಗಗಳು, ಗಂಡು ಹೆಣ್ಣು ಅನುಪಾತ ಇತ್ಯಾದಿಗಳನ್ನು ದಾಖಲಿಸಲಾಗಿದೆ ಎಂದರು.

    ರಾಜ್ಯದ 32 ವಿಭಾಗಗಳಲ್ಲಿ ಆನೆಗಳ ಗಣತಿ ಕಾರ್ಯವನ್ನು ನಡೆಸಲಾಗಿದ್ದು, ಈ ಸಮೀಕ್ಷೆಯಲ್ಲಿ 23 ವಿಭಾಗಗಳಲ್ಲಿ ಆನೆಗಳು ಕಂಡುಬಂದಿವೆ. ಸಮೀಕ್ಷೆಯ ದಿನದಂದು ನೇರವಾಗಿ ಏಣಿಸಿದ ಒಟ್ಟು ಆನೆಗಳ ಸಂಖ್ಯೆ-2219 ಆಗಿತ್ತು. ಈ 23 ವಿಭಾಗಗಳಲ್ಲಿ ಇರುವ 18975 ಚದರ ಕಿ.ಮೀ ಪ್ರದೇಶದ ಪೈಕಿ 6104 ಚದರ ಕಿ.ಮೀ ಪ್ರದೇಶದಲ್ಲಿ ಈ ಸಮೀಕ್ಷೆಯನ್ನು ನಡೆಸಲಾಯಿತು.
    ಇದೇ ಮೊದಲ ಬಾರಿಗೆ ಇಷ್ಟು ದೊಡ್ಡ ಪ್ರದೇಶವನ್ನು ಸಮೀಕ್ಷೆಗೆ ಒಳಪಡಿಸಿರುವುದರಿಂದ ಈ ಸಮೀಕ್ಷೆ ಮತ್ತು ವರದಿಯು ಹೆಚ್ಚು ನಿಖರ ಮತ್ತು ವಿಶ್ವಾಸಾರ್ಹವಾಗಿದೆ ಎಂದು ಮಾಹಿತಿ ನೀಡಿದರು.
    ಆನೆ ವರದಿ ಬಿಡುಗಡೆ ಸಂದರ್ಭದಲ್ಲಿ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಾವೇದೇ ಅಖ್ತರ್, ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳಾದ ಸುಭಾಶ್ ಮಾಲ್ಕೇಡೆ, ಕುಮಾರ್ ಪುಶ್ಕರ್, ಸಂಜಯ್ ಬಿಜ್ಜೂರ್, ಸ್ಮಿತಾ ಬಿಜ್ಜೂರ್ ಮತ್ತಿತರರು ಪಾಲ್ಗೊಂಡಿದ್ದರು

    Verbattle
    Verbattle
    Verbattle
    elephant Elephant Population elephants in karnataka karnataka wildlife m tuskers
    Share. Facebook Twitter Pinterest LinkedIn Tumblr Email WhatsApp
    Previous Articleಫ್ಲೆಕ್ಸ್ ಹಾಕಿದರೆ ಜೋಕೆ…? | Flex Banners
    Next Article ಇವರಿಗೆ ಮಾತ್ರ ನಿಗಮ-ಮಂಡಳಿಗೆ ನೇಮಕ | Karnataka
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    March 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    March 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    March 5, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Zfnegw on ಯಡಿಯೂರಪ್ಪ ವಿರುದ್ಧ ಪ್ರಕರಣ ದಾಖಲಿಸಿದ್ದ ಮಹಿಳೆ ಸಾವು
    • Vofaze on ದೊಡ್ಡ ಅಪಾಯದಿಂದ ಬಚಾವಾದ DK Shivakumar
    • 1win_csKi on ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    March 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    March 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    March 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.