ಶಿವಮೊಗ್ಗ, ಮಾ.24: ಲೋಕಸಭೆ Electionಯಲ್ಲಿ ಸ್ಪರ್ಧಿಸಲು ತಮ್ಮ ಪುತ್ರನಿಗೆ ಟಿಕೆಟ್ ಸಿಕ್ಕಿಲ್ಲ ಎಂದು ಬಂಡಾಯದ ಬಾವುಟ ಆರಿಸಿರುವ ಈಶ್ವರಪ್ಪ ಅವರದು ಬಂಡಾಯ ಅಷ್ಟೇ ಅಲ್ಲ ಒಳ ಒಪ್ಪಂದ ಎಂದು ಕಾಂಗ್ರೆಸ್ ಮುಖಂಡ ಮಾಜಿ ಸಂಸದ ಆಯನೂರು ಮಂಜುನಾಥ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರನ್ನು ಗೆಲ್ಲಿಸಲು ಯಡಿಯೂರಪ್ಪ-ಈಶ್ವರಪ್ಪ (Eshwarappa) ನಡುವೆ ಒಳ ಒಪ್ಪಂದ ಆಗಿದೆ. ಅದರಂತೆ ಚುನಾವಣೆ ಮುಗಿದ ನಂತರ ಕೆ.ಎಸ್.ಈಶ್ವರಪ್ಪ ರಾಜ್ಯಪಾಲ ಆಗಿ ನೇಮಕಗೊಳ್ಳಲಿದ್ದಾರೆ. ಅವರ ಪುತ್ರ ಕೆ.ಈ.ಕಾಂತೇಶ ಅವರನ್ನು ವಿಧಾನ ಪರಿಷತ್‌ಗೆ ನಾಮ ನಿರ್ದೇಶನ ಮಾಡಲಾಗುತ್ತಿದೆ ಎಂದರು.
ಈಶ್ವರಪ್ಪ ದೊಡ್ಡ ಕಲಾವಿದ. ನಾಲಿಗೆಗೆ ಬಣ್ಣ ಹಚ್ಚಿಕೊಂಡಿದ್ದಾರೆ. ಸ್ವತಂತ್ರವಾಗಿ ಸ್ಪರ್ಧಿಸುವಷ್ಟು ಧೈರ್ಯ ಅವರಿಗಿಲ್ಲ. ಆದರೆ ಯಡಿಯೂರಪ್ಪ, ಬಿಜೆಪಿ ಅವರನ್ನು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಕಾಂಗ್ರೆಸ್ ಪರವಾಗಿರುವ ಹಿಂದುಳಿದವರು, ದಲಿತರ ಮತಗಳನ್ನು ವಿಭಜಿಸುವ ತಂತ್ರ ಇದರಲ್ಲಿ ಅಡಗಿದೆ ಎಂದರು.
ಶಿವಮೊಗ್ಗ ಕ್ಷೇತ್ರದಲ್ಲಿ ಬಂಗಾರಪ್ಪ ಅವರ ಸೋಲಿನ ಸೇಡಿಗೆ ಅವರ ಪುತ್ರಿ ಗೀತಾ ಶಿವರಾಜಕುಮಾರ್ ಅವರನ್ನು ಮತದಾರರು ಬೆಂಬಲಿಸಲಿದ್ದಾರೆ. ಈಶ್ವರಪ್ಪ – ಬಿಜೆಪಿಯ ತಂತ್ರ ಫಲಿಸುವುದಿಲ್ಲ. ಈಶ್ವರಪ್ಪ ಹೇಳುವಂತೆ ದಿಟ್ಟ ಹೋರಾಟಗಾರ ಬಂಗಾರಪ್ಪ ನವರ ಮಕ್ಕಳು ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವಷ್ಟು ದುರ್ಬಲರಲ್ಲ ಎಂದ ಆಯನೂರು ಮಂಜುನಾಥ್, ಈಶ್ವರಪ್ಪ ಅವರೇ ನೀವೇ ಡಮ್ಮಿ ಕ್ಯಾಂಡಿಡೇಟ್ ಎಂದು ಕಿಚಾಯಿಸಿದರು.
ಕೆಲವು ದಿನಗಳ ಹಿಂದೆ ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ಅವರು ಬಿ.ವೈ.ರಾಘವೇಂದ್ರ ಅವರನ್ನು ಲಿಂಗಾಯಿತರು ಬೆಂಬಲಿಸಬೇಕು ಎಂದು ಹೇಳಿದ್ದು ಕಾಂಗ್ರೆಸ್ ನ ಚುನಾವಣಾ ತಂತ್ರದ ಭಾಗವಾಗಿದೆ. ಇದರಿಂದಾಗಿ ಅಹಿಂದ ಮತಗಳು ಕಾಂಗ್ರೆಸ್ ಗೆ ಹರಿದು ಬರಲಿವೆ. ಗೀತಾ ಶಿವರಾಜಕುಮಾರ್ ಗೆಲುವು ನಿಶ್ಚಿತ ಎಂದರು.
4 Comments
электрические карнизы купить http://www.provorota.su/ .
выведение из запоя воронеж стационар выведение из запоя воронеж стационар .
вывод из запоя цены vyvod-iz-zapoya-v-sankt-peterburge.ru .
семена почтой интернет магазин дешево бесплатная доставка семена почтой интернет магазин дешево бесплатная доставка .