Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅನಾಮಧೇಯ ಪತ್ರದಿಂದ ಪತ್ತೆಯಾಯಿತು ನಕಲಿ ಜಾಲ | Mysore Sandal
    Trending

    ಅನಾಮಧೇಯ ಪತ್ರದಿಂದ ಪತ್ತೆಯಾಯಿತು ನಕಲಿ ಜಾಲ | Mysore Sandal

    vartha chakraBy vartha chakraJanuary 13, 202432 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಜ.13: ದೇಶ ವಿದೇಶಗಳಲ್ಲಿ ಜನ ಮನ್ನಣೆ ಪಡೆದ ಮೈಸೂರು ಸ್ಯಾಂಡಲ್ ಸಾಬೂನಿಗೆ ಇದೀಗ ನಕಲಿಯ ಹಾವಳಿ ಅಂಟಿಕೊಂಡಿದೆ. ಮೈಸೂರು ಸ್ಯಾಂಡಲ್ (Mysore Sandal) ಸಾಬೂನನ್ನು ನಕಲಿಯಾಗಿ ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ಹೈದರಾಬಾದಿನಲ್ಲಿ ಭೇದಿಸಲಾಗಿದೆ. ಈ ಕಾರ್ಯಾಚರಣೆ ವೇಳೆ ನಕಲಿ ಉತ್ಪನ್ನ, ಅದರ ಪ್ಯಾಕಿಂಗ್ ಗೆ ಬಳಸುತ್ತಿದ್ದ ಕಾರ್ಟನ್ ಬಾಕ್ಸ್ ಗಳು ಸೇರಿದಂತೆ ಸುಮಾರು ರೂ 2 ಕೋಟಿ ಬೆಲೆಯ ಮಾಲು ಪತ್ತೆಯಾಗಿದೆ.
    ನಕಲಿ ತಯಾರಿಕೆ ಆರೋಪದ ಮೇಲೆ ಹೈದರಾಬಾದಿನ ರಾಕೇಶ್ ಜೈನ್ ಮತ್ತು ಮಹಾವೀರ್ ಜೈನ್ ಎಂಬುವವರನ್ನು ಬಂಧಿಸಲಾಗಿದೆ. ಮಾಲಕಪೇಟೆ ಪೊಲೀಸರಿಗೆ ದೂರು ನೀಡಿದ್ದು ತನಿಖೆ ನಡೆದಿದೆ.

    ನಕಲಿ ಮೈಸೂರ್ ಸ್ಯಾಂಡಲ್ (Mysore Sandal) ಸಾಬೂನು ಹೈದರಾಬಾದ್ ಮಾರುಕಟ್ಟೆಗೆ ಪೂರೈಕೆಯಾಗುತ್ತಿರುವ ಬಗ್ಗೆ ಕೆ ಎಸ್ ಡಿ ಎಲ್ ಅಧ್ಯಕ್ಷರೂ ಆದ ಸಚಿವ ಎಂ.ಬಿ ಪಾಟೀಲ ಅವರಿಗೆ‌ ಅನಾಮಧೇಯ ಕರೆ ಬಂದಿತ್ತು. ಬಳಿಕೆ ಸಚಿವರು ಕಾರ್ಖಾನೆ ವ್ಯವಸ್ಥಾಪಕ ನಿರ್ದೇಶಕ ಡಾ.ಪ್ರಶಾಂತ್ ಅವರಿಗೆ ನಿಗಾ ವಹಿಸಲು ಸೂಚಿಸಿದ್ದರು. ಅದರಂತೆ, ಸಿಕಂದರಾಬಾದಿನಲ್ಲಿರುವ ಸಂಸ್ಥೆಯ ಅಧಿಕೃತ ಮಾರಾಟ ಕಚೇರಿಯ ಸಿಬ್ಬಂದಿ ತಮಗೆ ಸಿಕ್ಕ ಸುಳಿವಿನ ಜಾಡು ಹಿಡಿದು ಕಾರ್ಯಪ್ರವೃತ್ತರಾಗಿದ್ದರು.
    ಹೈದರಾಬಾದಿನ ಕೆಲವು ಪ್ರದೇಶಗಳಲ್ಲಿ ನಕಲಿ ಸಾಬೂನು ಮಾರಾಟವಾಗುತ್ತಿರುವುದು ಕಂಡುಬಂದಿತ್ತು. ಆದರೆ, ಅದನ್ನು ಯಾರು ಪೂರೈಸುತ್ತಿದ್ದಾರೆ ಎಂಬ ಬಗ್ಗೆ ಸರಿಯಾದ ಮಾಹಿತಿ ಸಿಕ್ಕಿರಲಿಲ್ಲ. ಆಗ ಕೆ ಎಸ್ ಡಿ ಎಲ್ ಸಿಬ್ಬಂದಿ ಸ್ವತಃ ಒಂದು ಲಕ್ಷ ರೂಪಾಯಿ ಬೆಲೆಯ ಉತ್ಪನ್ನ ಖರೀದಿಸಿ, ಅದರ ಮೂಲ ಪತ್ತೆಗೆ ಕಾರ್ಯಪವೃತ್ತರಾದರು.

    ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಹೆಚ್ಚಿನ ಬೇಡಿಕೆ ಇದೆ ಎಂಬ ಕಾರಣ ಕೊಟ್ಟು 25 ಲಕ್ಷ ರೂಪಾಯಿ ಬೆಲೆಯ ಸೋಪು ಖರೀದಿಗೆ ಆರ್ಡರ್ ಕೊಟ್ಟಿದ್ದರು. ಅದನ್ನು ಸ್ವತಃ ತಾವೇ ವಾಹನದಲ್ಲಿ ಸಾಗಿಸುವ ನೆಪದಲ್ಲಿ ಉತ್ಪಾದನೆ ಮಾಡುತ್ತಿದ್ದ ಸ್ಥಳಕ್ಕೆ ತೆರಳಿದ್ದರು. ಹೀಗೆ ಕಾರ್ಯಾಚರಣೆ ನಡೆಸಿದಾಗ ನಕಲಿ ಉತ್ಪಾದನಾ ಘಟಕ ಪತ್ತೆಯಾಯಿತು ಎಂದು ಕೆ ಎಸ್ ಡಿ ಎಲ್ ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ್ ವಿವರಿಸಿದ್ದಾರೆ.
    ತಲಾ 150 ಗ್ರಾಂ ತೂಕದ 3 ಸಾಬೂನುಗಳಿರುವ 20 ಕಾರ್ಟನ್ ಬಾಕ್ಸ್ ಗಳು (ಪ್ರತಿಯೊಂದು ಬಾಕ್ಸ್ ನಲ್ಲಿ 90ರಂತೆ ಒಟ್ಟು 1800 ಪೀಸ್ ಗಳು), ತಲಾ 75 ಗ್ರಾಂ ನ 47 ಕಾರ್ಟನ್ ಬಾಕ್ಸ್ ಗಳು (9400 ಪೀಸ್ ಗಳು), 150 ಗ್ರಾಂ ಸಾಬೂನು ಪ್ಯಾಕ್ ಮಾಡುವ 400 ಖಾಲಿ ಕಾರ್ಟನ್ ಬಾಕ್ಸ್ ಗಳು ಮತ್ತು 75 ಗ್ರಾಂ ಸಾಬೂನು ಪ್ಯಾಕ್ ಮಾಡುವ 400 ಕಾರ್ಟನ್ ಬಾಕ್ಸ್ ಗಳು ನಕಲಿ ಘಟಕದಲ್ಲಿ ಪತ್ತೆಯಾಗಿವೆ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ.
    ಕೆ ಎಸ್ ಡಿ ಎಲ್ ಉತ್ಪನ್ನಗಳ ಮಾರುಕಟ್ಟೆಯನ್ನು ದೇಶ ಹಾಗೂ ವಿದೇಶಗಳಿಗೆ ವಿಸ್ತರಿಸಲು ಸ್ವತಃ ಆಸಕ್ತಿ ವಹಿಸಿ ಕ್ರಮ ತೆಗೆದುಕೊಂಡಿರುವ ಸಚಿವ ಪಾಟೀಲರು, ತಪ್ಪಿತಸ್ಥರಿಗೆ ಶಿಕ್ಷೆಯಾಗುವುದನ್ನು ಖಾತರಿಗೊಳಿಸಲು ಗಮನ ವಹಿಸಲಾಗುವುದು ಎಂದಿದ್ದಾರೆ.

    crime Karnataka m mysor Mysore Mysore Sandal NDA News Trending
    Share. Facebook Twitter Pinterest LinkedIn Tumblr Email WhatsApp
    Previous Articleಲೋಕಸಭಾ ಚುನಾವಣೆ ಸೋತರೆ ತಲೆದಂಡ | Congress High Command
    Next Article ಶೆಟ್ಟರ್ ಗೆ ದುಂಬಾಲು ಬಿದ್ದ ಬಿಜೆಪಿ ನಾಯಕರು | Jagadish Shettar
    vartha chakra
    • Website

    Related Posts

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    December 22, 2025

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    December 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    December 22, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • elektricheskie jaluzi_akot on ವಿಧಾನಸೌಧದಲ್ಲಿ ಸಾಹಿತ್ಯ ಉತ್ಸವ.
    • rylonnie shtori na plastikovie okna s elektroprivodom_jzSn on ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • 1win_gvma on ಮಹಾರಾಷ್ಟ್ರ ಸರ್ಕಾರ ಪತನ ಹೊಂದುವುದು ನಿಶ್ಚಿತ.
    Latest Kannada News

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    December 22, 2025

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    December 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    December 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್.#varthachakra #mallikarjunkharge #siddaramaiah #dkshivakumar
    Subscribe