ಮಂಡ್ಯ,ಫೆ.14-
Police Sub Inspector ಸಮವಸ್ತ್ರ ಧರಿಸಿ ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿದ್ದ ನಕಲಿ ಪೊಲೀಸಪ್ಪನನ್ನು ಕೆ.ಎಂ. ದೊಡ್ಡಿ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಗೊಟ್ಟಿಗೆರೆಯ ಸಂಜಯ್ ಬಂಧಿತ ಆರೋಪಿಯಾಗಿದ್ದಾನೆ. ಕೆ.ಎಂ.ದೊಡ್ಡಿ ಸುತ್ತಮುತ್ತ ದ್ವಿಚಕ್ರ ವಾಹನಗಳನ್ನು ತಡೆದು ತಪಾಸಣಾ ಕಾರ್ಯ ಮಾಡುವ ನೆಪದಲ್ಲಿ ಸಂಚಾರ ನಿಯಮ ಉಲ್ಲಂಘನೆಯಾಗಿದೆ ಎಂದು ವಾಹನ ಸವಾರರಿಂದ ಹಣ ವಸೂಲಿ ಮಾಡುತ್ತಿದ್ದ. ಈ ಬಗ್ಗೆ ಕೆ.ಎಂ.ದೊಡ್ಡಿ ಠಾಣೆಯ ಇನ್ಸ್ ಪೆಕ್ಟರ್ ಆನಂದ್ಗೆ ಸಾರ್ವಜನಿಕರು ದೂರು ನೀಡಿದ್ದರು. ಮಾಹಿತಿ ಬೆನ್ನಲ್ಲೆ ತಕ್ಷಣ ಎಚ್ಚೆತ್ತ ರಿಯಲ್ ಪೊಲೀಸರು ಕಾರ್ಯಾಚರಣೆಗೆ ಇಳಿದು ಸಂಜಯ್ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ತಾನೊಬ್ಬ ನಕಲಿ ಪೊಲೀಸ್ ಎಂಬುದನ್ನು ಒಪ್ಪಿಕೊಂಡಿದ್ದು, ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಲಯ ಎಚ್ಚರಿಕೆ ನೀಡಿ ಜಾಮೀನಿನ ಮೇಲೆ ಆರೋಪಿಯನ್ನು ಬಿಡುಗಡೆ ಮಾಡಿದೆ.


2 Comments
O cassino que mais valoriza seus jogadores te espera no Mostbet – https://mostbetpt.pro/como-se-registrar/ , No Mostbet a emoГ§ГЈo comeГ§a no cadastro e nunca termina .
Where adrenaline signs the cheques – https://getprednisx.com , Play like the jackpot already has your face on it .