ಬೆಂಗಳೂರು,ಜೂ.28-ಹೊಟೇಲೊಂದರಲ್ಲಿ ಕೆಲಸ ಮಾಡುತ್ತಾ ಹೆಚ್ಚಿನ ಹಣ ಸಂಪಾದನೆ ಮಾಡಲು ಗಾಂಜಾ ಮಾರಾಟದಲ್ಲಿ ತೊಡಗಿದ್ದ ಖದೀಮನೊಬ್ಬನನ್ನು ಕಲಾಸಿಪಾಳ್ಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ತಮಿಳುನಾಡಿನ ಕಾಂಚಿಪುರಂ ಜಿಲ್ಲೆಯ ನಾಯಕನ ಪೇಟೆಯ ಸೇಲ್ವಾ ರಾಜ್(32) ಬಂಧಿತ ಆರೋಪಿಯಾಗಿದ್ದಾನೆ.
ಬಂಧಿತನಿಂದ 20 ಕೆಜಿ 575 ಗ್ರಾಂ ತೂಕದ ಗಾಂಜಾ ವಶಪಡಿಸಿಕೊಂಡು ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದು ಡಿಸಿಪಿ ಡಾ ಸಂಜೀವ್ ಪಾಟೀಲ್ ತಿಳಿಸಿದ್ದಾರೆ. ಕಳೆದ ಜೂ. 27 ರಂದು ಬೆಳಿಗ್ಗೆ 9ರ ವೇಳೆ
ಕಲಾಸಿಪಾಳ್ಯದ ಸರಹದ್ದಿನಲ್ಲಿ ಆರೋಪಿ ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತವಾದ ಮಾಹಿತಿಯನ್ನು ಆಧರಿಸಿ ಕಾರ್ಯಾಚರಣೆ ಕೈಗೊಂಡ ಇನ್ಸ್‌ಪೆಕ್ಟರ್ ಎಂ.ಎಲ್. ಚೇತನ್ ಕುಮಾರ್ ಮತ್ತವರ ಸಿಬ್ಬಂದಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿ ಮಾರಾಟ ಮಾಡಲು ತಂದಿದ್ದ ಗಾಂಜಾ ಪೊಟ್ಟಣಗಳು ಹಾಗೂ ಹೊಟಡಲ್ ತನಗೆ ನೀಡಿದ್ದ ಕೊಠಡಿಯಲ್ಲಿ ಬಚ್ಚಿಟ್ಟಿದ್ದ ಗಾಂಜಾ ಮೂಟೆಯನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.
Previous Article222 ಕಾಳಿಂಗ ಸರ್ಪ ರಕ್ಷಣೆ ಮಾಡಿದ ಸ್ನೇಕ್ ಜೋಯ್..!!
Next Article ಶಿವಕುಮಾರ್ ವಿರುದ್ಧದ FIRಗೆ ತಡೆ.