ನವದೆಹಲಿ: ಗೃಹ ಬಳಕೆಯ ಎಲ್‍ಜಿಪಿ ಸಿಲಿಂಡರ್‌ಗಳಿಗೆ ಸಬ್ಸಿಡಿ ನೀಡಲಾಗುವುದಿಲ್ಲ ಎಂದು ಅಧಿಕೃತವಾಗಿ ಘೋಷಿಸುವ ಮೂಲಕ ಕೇಂದ್ರ ಸರ್ಕಾರ ಜನಸಾಮಾನ್ಯರಿಗೆ ಶಾಕ್ ನೀಡಿದೆ.
ಇಂಧನ ಇಲಾಖೆಯ ಕಾರ್ಯದರ್ಶಿ ಪಂಕಜ್ ಚೌಧರಿ ಮಾತನಾಡಿ, ಕೋವಿಡ್ ಶುರುವಾದ ದಿನದಿಂದ ಎಲ್‍ಪಿಜಿ ವಿನಿಯೋಗದಾರರಿಗೆ ಸಬ್ಸಿಡಿ ನೀಡಿಲ್ಲ. ಇನ್ನು ಮುಂದೆ ಕೂಡ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಇದರಿಂದ ಸಾಮಾನ್ಯ ಗ್ರಾಹಕರು ಮಾರ್ಕೆಟ್ ದರದಲ್ಲೇ ಅಡಿಗೆ ಅನಿಲವನ್ನು ಖರೀದಿ ಮಾಡಬೇಕಾಗುತ್ತದೆ.